ಅಪ್ರಾಪ್ತರಿಗೆ ವಾಹನ ಚಲಾಯಿಸಲು ನೀಡುವ ಮುನ್ನ ಎಚ್ಚರ..
ವಾಹನ ಮಾಲಿಕನಿಗೆ 20 ಸಾವಿರ ದಂಡ ವಿಧಿಸಿದ ಪುತ್ತೂರು ನ್ಯಾಯಾಲಯ
Team Udayavani, Nov 19, 2022, 8:35 AM IST
ಕಡಬ : ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ ತಪ್ಪಿಗೆ ವಾಹನ ಮಾಲಿಕನಿಗೆ ನ್ಯಾಯಾಲಯ ಬರೊಬ್ಬರಿ 20 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ.
ಕೊಯಿಲ ಗ್ರಾಮದ ಕೆ.ಸಿ.ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದಂಡ ಪಾವತಿಸಿದ ವ್ಯಕ್ತಿ.
2020ನೇ ಇಸವಿಯಲ್ಲಿ ಕೊಯಿಲದಲ್ಲಿ ಅಬ್ದುಲ್ ರಹಿಮಾನ್ ಎಂಬವರು ತನ್ನ ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ನೀಡಿದ್ದು, ಆ ಬೈಕ್ ಅಪಘಾತವಾಗಿ ಅಪ್ರಾಪ್ತ ಬಾಲಕನ ವಿರುದ್ದ ಕಡಬ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಪುತ್ತೂರು ಎ.ಸಿ.ಜೆ. ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿಯವರು ತೀರ್ಪು ನೀಡಿ, ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ್ದ ವಾಹನ ಮಾಲಿಕನಿಗೆ 20 ಸಾವಿರ ದಂಡ ಪಾವತಿಸುವಂತೆ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಎ.ಪಿ.ಪಿ. ಕವಿತಾ ಅವರು ವಾದಿಸಿದ್ದರು.
ಇದನ್ನೂ ಓದಿ : ದಿನಕ್ಕೆ ಹದಿನೆಂಟು ಗಂಟೆ ಕೆಲಸ : ಕೆಲವೆಡೆ ಟ್ವಿಟರ್ ಕಚೇರಿಗಳೇ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.