UCO Bank: ಮಂಗಳೂರಿನಲ್ಲೂ ಸಿಬಿಐ ತನಿಖೆ
Team Udayavani, Dec 6, 2023, 12:35 AM IST
ಮಂಗಳೂರು: ಯುಕೊ ಬ್ಯಾಂಕ್‌ನ ಖಾತೆಗಳಲ್ಲಿ 820 ಕೋಟಿ ರೂಪಾಯಿ ಮೌಲ್ಯದ ಐಎಂಪಿಎಸ್ ವ್ಯವಹಾರ ಅಕ್ರಮವಾಗಿ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ.
ಕೋಲ್ಕತಾ ಮತ್ತು ಮಂಗಳೂರು ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಆರೋಪಿಗಳು ಮತ್ತು ಖಾಸಗಿ ವ್ಯಕ್ತಿ ಗಳು/ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಸಂಸ್ಥೆ ವಿಚಾರಣೆ, ಶೋಧ ನಡೆಸಿದೆ ಎಂದು ಸಿಬಿಐ ಪ್ರಕಟನೆ ತಿಳಿಸಿದೆ.
ಹುಡುಕಾಟದ ಸಮಯದಲ್ಲಿ, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಕಂಪ್ಯೂಟರ್ ಸಿಸ್ಟಮ್‌ಗಳು, ಇಮೇಲ್ ಆಕ್ರೈವ್‌ಗಳು ಮತ್ತು ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ ಪುರಾವೆಗಳನ್ನು ಪಡೆಯಲಾಗಿದೆ. ಯುಕೋ ಬ್ಯಾಂಕ್‌ನಿಂದ ಬಂದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ.
ಈ ಬ್ಯಾಂಕ್‌ನ ಇಬ್ಬರು ಸಹಾಯಕ ಎಂಜಿನಿಯರ್‌ಗಳು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಅನುಮಾನಾಸ್ಪದ ತತ್‌ಕ್ಷಣದ ಪಾವತಿ ಸೇವೆ (ಐಎಂಪಿಎಸ್) ವಹಿವಾಟಿನ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್‌ಗಳ 14,000 ಖಾತೆದಾರರಿಂದ ಐಎಂಪಿಎಸ್ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್‌ನ 41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.
ಅಚಾನಕ್ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್‌ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.