ಉದನೆ-ಶಿಬಾಜೆ : ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ
Team Udayavani, Jul 24, 2017, 5:40 AM IST
ನೆಲ್ಯಾಡಿ: ಉದನೆಯಿಂದ ಶಿಬಾಜೆಗೆ ಸಂಪರ್ಕ ಕಲ್ಪಿಸುವ ಜಿ.ಪಂ. ರಸ್ತೆಯ ಪೈಕಿ 1 ಕಿ.ಮೀ.ಗೆ “ನಮ್ಮ ಗ್ರಾಮ ನಮ್ಮ ರಸ್ತೆ’ಯೋಜನೆಯಡಿ ವಿಸ್ತರಣೆ, ಡಾಮರು, ಕಾಂಕ್ರೀಟ್ ಕಾಮಗಾರಿಗೆ ಕಳಪ್ಪಾರಿನಲ್ಲಿ ಗುದ್ದಲಿಪೂಜೆ ನಡೆಯಿತು.
ಸುಳ್ಯ ಶಾಸಕ ಎಸ್. ಅಂಗಾರ ಅವರು ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ ಉದನೆ-ಶಿಬಾಜೆ ರಸ್ತೆ ಡಾಮರು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಹಿಂದೆ ಸದ್ರಿ ರಸ್ತೆ ಡಾಮರಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ಮಂಜೂರಾತಿಯಾಗಿರಲಿಲ್ಲ. ಉದನೆ-ಶಿಬಾಜೆ ರಸ್ತೆಯ ಆರಂಭದ 1.9 ಕಿ.ಮೀ. ರಸ್ತೆ ವಿಸ್ತರಣೆ ಹಾಗೂ ಡಾಮರಿಗೆ ನಬಾರ್ಡ್‌ಗೆ ಪ್ರಸ್ತಾವನೆ ಸಲ್ಲಿಸಿದ್ದು ಇದು ಮಂಜೂರಾತಿಯ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ಅನಂತರದ 1 ಕಿ.ಮೀ. ರಸ್ತೆ ಅಭಿವೃದ್ಧಿಗೆ “ನಮ್ಮ ಗ್ರಾಮ ನಮ್ಮ ರಸ್ತೆ’ಯೋಜನೆಯಡಿ 1.07 ಕೋ.ರೂ. ಬಿಡುಗಡೆಗೊಂಡಿದ್ದು ಈ ಪೈಕಿ 300 ಮೀ. ಕಾಂಕ್ರೀಟ್ ಹಾಗೂ 700 ಮೀ. ಡಾಮರು ಕಾಮಗಾರಿ ನಡೆಯಲಿದೆ. ಈ ಕಾಮಗಾರಿಗೆ ಟೆಂಡರ್ ಆಗಿದ್ದು ಮಳೆ ಕಡಿಮೆಯಾದ ತತ್‌ಕ್ಷಣ ಕಾಮಗಾರಿ ಆರಂಭವಾಗಲಿದೆ ಎಂದರು.
ಮುಂದಿನ ಸಾಲಿನಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಬಾಕಿ ಉಳಿದ 2 ಕಿ.ಮೀ. ಡಾಮರಿಗೆ ಹಾಗೂ ಹಂತ
ಹಂತವಾಗಿ ಉದನೆ-ಶಿಬಾಜೆ ರಸ್ತೆ ಪೂರ್ಣ ಡಾಮರಿಗೆ ಕ್ರಮ ಕೈಗೊಳ್ಳಲಾಗುವುದು. ಇದರ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಗ್ರಾಮಸ್ಥರ ಜವಾಬ್ದಾರಿಯೂ ಇದೆ. ರಸ್ತೆ ವಿಸ್ತರಣೆಗೆ ಗ್ರಾಮಸ್ಥರು ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಿರಾಡಿ ಗ್ರಾ.ಪಂ.ಅಧ್ಯಕ್ಷ ತಿಮ್ಮಯ್ಯ ಗೌಡ, ಉಪಾಧ್ಯಕ್ಷೆ ಬಿಂದು ಶಶಿಧರ್, ಸದಸ್ಯರಾದ ರಾಜೇಶ್ ಕೆ.ಜೆ., ಪ್ರಕಾಶ್ ಗುಂಡ್ಯ, ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಕಡಬ, ಪುತ್ತೂರು ಎಪಿಎಂಸಿ ಉಪಾಧ್ಯಕ್ಷ ಬಾಲಕೃಷ್ಣ ಬಾಣಜಾಲು, ಪಿಎಲ್‌ಡಿ ಬ್ಯಾಂಕ್‌ನ ಕೋಶಾಧಿಕಾರಿ ಭಾಸ್ಕರ ಎಸ್. ಗೌಡ ಇಚ್ಲಂಪಾಡಿ, ಬಿಜೆಪಿ ಶಿರಾಡಿ ಗ್ರಾಮ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಮಲೆನಾಡು ಜನಹಿತರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಶಿರಾಡಿ ಗ್ರಾ.ಪಂ. ಮಾಜಿ ಸದಸ್ಯ ಸೆಬಾಸ್ಟಿನ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶಶಿಧರ ಶಿರಾಡಿ, ಹೋರಾಟ ಸಮಿತಿ ಅಧ್ಯಕ್ಷ ಬೇಬಿ., ಕಾರ್ಯದರ್ಶಿ ಸನ್ನಿ ಕೆ.ಎಸ್., ಗ್ರಾಮಸ್ಥರಾದ ಡೊಂಬಯ್ಯ ಗೌಡ ಕುದೊRàಳಿ, ಜಯನ್ ಅಡ್ಡಹೊಳೆ, ಸೋಮಶೇಖರ ಶಿರಾಡಿ, ದಾಮೋದರ ಗೌಡ ಗುಂಡ್ಯ, ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಶಾಜಿ ಕೆ.ಪಿ., ಲಕ್ಷ್ಮಣ, ಗುತ್ತಿಗೆದಾರ ನಾರಾಯಣ ಕೇಕಡ್ಕ ಮತ್ತಿತರರು ಉಪಸ್ಥಿತರಿದ್ದರು.
ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕ ಸುದರ್ಶನ್ ಅವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಡೊಂಬಯ್ಯ ಗೌಡ ಸ್ವಾಗತಿಸಿ, ಸನ್ನಿ ವಂದಿಸಿದರು. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.