ಉದ್ಭವಲಿಂಗಕ್ಕೆ ಭಕ್ತರಿಂದ ಅಭಿಷೇಕ
Team Udayavani, Feb 25, 2017, 3:00 PM IST
ಉಪ್ಪಿನಂಗಡಿ : ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಶುಕ್ರವಾರ ಇಲ್ಲಿನ ನೇತ್ರಾವತಿ ನದಿ ಗರ್ಭದಲ್ಲಿರುವ ಉದ್ಭವಲಿಂಗಕ್ಕೆ ಭಕ್ತರು ಸ್ವಯಂ ಅಭಿಷೇಕ ನಡೆಸಿ ಪೂಜೆ ಸಲ್ಲಿಸಿದರು.
ನಸುಕಿನಿಂದಲೇ ಆಗಮಿಸಿದ್ದ ಸಾವಿರಾರು ಭಕ್ತಾದಿಗಳು ಉದ್ಭವ ಲಿಂಗಕ್ಕೆ ಜಲಾಭಿಷೇಕ, ಸಿಯಾಳ ಅಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಸಹಿತ ವಿವಿಧ ಅಭಿಷೇಕಗಳನ್ನು ನೆರವೇರಿಸಿ ಸ್ವಯಂ ಪೂಜೆ ಸಲ್ಲಿಸಿದರು. ಇದೇ ವೇಳೆ ಶ್ರೀ ದೇವಸ್ಥಾನದಲ್ಲಿ ದೇವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಗಣಪತಿ ಹೋಮ, ಶತರುದ್ರಾಭಿಷೇಕ, ಸೀಯಾಳ ಅಭಿಷೇಕ, ಚಂಡಿಕಾ ಹೋಮ ಗಳು ವೇ| ಮೂ| ಕೆಮ್ಮಿಂಜೆ ನಾಗೇಶ್ ತಂತ್ರಿಗಳ ಮಾರ್ಗದರ್ಶನದಲ್ಲಿ ಜರಗಿತು. ಮಧ್ಯಾಹ್ನ ನಡೆದ ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಜನರು ಅನ್ನಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅಲಿಮಾರ ರಘುನಾಥ ರೈ, ಸದಸ್ಯ ರಾದ ಬೆಳ್ಳಿಪ್ಪಾಡಿ ಪ್ರಕಾಶ್ ರೈ, ಕೃಷ್ಣ ರಾವ್, ಕಾರ್ಯನಿರ್ವಹಣಾಧಿಕಾರಿ ಹರೀಶ್ಚಂದ್ರ, ಸಂಜೀವ ಗಾಣಿಗ, ಯು. ರಾಮ, ಕರುಣಾಕರ ಸುವರ್ಣ, ಸುಂದರ ಗೌಡ, ಸಚಿನ್ ಗೌಡ, ಜಗದೀಶ್ ಶೆಟ್ಟಿ , ಚಂದ್ರಕಲಾ ನಾಯಕ್, ಉಷಾ ಮುಳಿಯ, ಯು. ರಾಧಾ, ಸುಮನ್ ಲದ್ವಾ, ಸುಧಾಕರ ಶೆಟ್ಟಿ, ಚಿದಾನಂದ ನಾಯಕ್, ಕಂಗ್ವೆ ವಿಶ್ವನಾಥ ಶೆಟ್ಟಿ, ಕೈಲಾರ್ ರಾಜ್ ಗೋಪಾಲ ಭಟ್, ವೆಂಕಟೇಶ್ ರಾವ್, ಎನ್. ಗೋಪಾಲ ಹೆಗ್ಡೆ, ಹರಿರಾಮಚಂದ್ರ, ರಾಮಚಂದ್ರ ಮಣಿಯಾಣಿ ಮೊದಲಾದ ವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.