ಉಡುಪಿಗೆ 6 ಕರ್ನಾಟಕ ಪಬ್ಲಿಕ್ ಸ್ಕೂಲ್: ಪ್ರಮೋದ್
Team Udayavani, Jan 27, 2018, 10:27 AM IST
ಉಡುಪಿ: ರಾಜ್ಯದಲ್ಲಿ 176 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಸ್ಥಾಪನೆಗೆ ಸರಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ಅದರಂತೆ ಉಡುಪಿ ಜಿಲ್ಲೆಯಲ್ಲಿ 6 ಪಬ್ಲಿಕ್ ಸ್ಕೂಲ್‌ಗಳು ಆರಂಭಗೊಳ್ಳಲಿವೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.
ಬೀಡಿನಗುಡ್ಡೆಯ ಮಹಾತ್ಮಾ ಗಾಂಧಿ ಬಯಲು ರಂಗಮಂದಿರದಲ್ಲಿ ಶುಕ್ರವಾರ ಜರಗಿದ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 1,70,592 ಕುಟುಂಬಗಳು ಅನ್ನಭಾಗ್ಯ ಯೋಜನೆಯ ಅನುಕೂಲ ಬಳಸಿಕೊಂಡಿವೆ. ಹೊಸ ದಾಗಿ 87,138 ಪಡಿತರ ಚೀಟಿಗಳನ್ನು ವಿತರಿಸಲಾಗಿದೆ ಎಂದವರು ತಿಳಿಸಿದರು.
ಅನಿಲ ಭಾಗ್ಯ ಯೋಜನೆ
ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ನಿಗದಿ ಪಡಿಸಿದ 11,059 ಫಲಾನುಭವಿಗಳ ಪೈಕಿ 10,576 ಫಲಾನುಭವಿಗಳನ್ನು ಆಯ್ಕೆ ಮಾಡಿ ಅನುಮೋದನೆ ನೀಡಲಾಗಿದೆ. ಪ್ರತಿ ಫಲಾನುಭವಿಗಳಿಗೆ 4,040 ರೂ. ವೆಚ್ಚದಲ್ಲಿ ಅಡುಗೆ ಅನಿಲ ಸಂಪರ್ಕವನ್ನು ಉಚಿತವಾಗಿ ನೀಡಲಾಗುವುದು ಎಂದರು.
ಸರಕಾರಿ ಕಟ್ಟಡಗಳ ನಿರ್ಮಾಣ
ಜಿಲ್ಲೆಯಲ್ಲಿ ತೀರಾ ದುಃಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳ ದುರಸ್ತಿ ಹಾಗೂ ಸರಕಾರಿ ಶಾಲೆಗೆ ಅಗತ್ಯ ವಿರುವ ಹೆಚ್ಚುವರಿ ಕೊಠಡಿಗಳ ನಿರ್ಮಾಣ, ಸರಕಾರಿ ಆಸ್ಪತ್ರೆಗಳ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹೊಸ ಅಂಗನವಾಡಿ ಕಟ್ಟಡಕ್ಕೆ ಜಿಲ್ಲೆಗೆ 15.40 ಕೋ.ರೂ. ಮಂಜೂರಾತಿ ದೊರೆತಿದೆ. 79 ಸರಕಾರಿ ಶಾಲೆ, ಕಾಲೇಜುಗಳ ಕಟ್ಟ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ ಎಂದರು.
ಗ್ರಾಮವಿಕಾಸಕ್ಕೆ 5 ಕೋ.ರೂ.
ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 22 ಗ್ರಾಮಗಳು ಆಯ್ಕೆಯಾ ಗಿವೆ. ಕಾಮಗಾರಿಗಳ ಅನುಷ್ಠಾನಕ್ಕಾಗಿ 5 ಕೋ.ರೂ. ಬಿಡುಗಡೆ ಯಾಗಿದೆ. 2017-18ನೇ ಸಾಲಿನಲ್ಲಿ 5,054 ಯೋಜನೆಯಡಿ 212.44 ಕೋ.ರೂ. ಮೊತ್ತದಲ್ಲಿ 465.20 ಕಿ.ಮೀ. ಉದ್ದ ಜಿಲ್ಲಾ ಮುಖ್ಯರಸ್ತೆಯನ್ನು ಅಭಿ ವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.
ಯುವಶಕ್ತಿ ಸಂಕಲ್ಪ ಮಾಡಲಿ
ಸಂವಿಧಾನ ನೀಡಿರುವ ಪರಮಾಧಿಕಾರವನ್ನು ನಾವು ವಿವೇಚನೆಯಿಂದ ಬಳಸಿಕೊಳ್ಳಬೇಕು. ಯುವಶಕ್ತಿ ಉತ್ತಮ ಮಾರ್ಗದರ್ಶನದಲ್ಲಿ ನೈತಿಕ ತಳಹದಿಯ ಮೇಲೆ ಭವ್ಯ ಭಾರತವನ್ನು ಕಟ್ಟುವ ಸಂಕಲ್ಪ ಮಾಡಿದರೆ ಮಾತ್ರ ನಾವು ವಿಶ್ವಕ್ಕೇ ಮಾದರಿ ರಾಷ್ಟ್ರವಾಗಬಹುದು ಎಂದು ಪ್ರಮೋದ್ ಹೇಳಿದರು.
ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧಾ, ಜಿ.ಪಂ. ಸಿಇಒ ಶಿವಾನಂದ ಕಾಪಶಿ, ಎಸ್‌ಪಿ ಲಕ್ಷ್ಮಣ್ ನಿಂಬರ್ಗಿ, ಎಡಿಶನ್ ಎಸ್‌ಪಿ ಕುಮಾರಚಂದ್ರ ಅವರು ಉಪಸ್ಥಿತರಿದ್ದರು.
ಕುದಿ ವಸಂತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಉತ್ತಮ ಸಾಧನೆಗೈದ 6 ಮಂದಿ ರಾಜ್ಯ ಸರಕಾರಿ ನೌಕರ ರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಮುಖ ಅಂಶಗಳು
ಕಾಪು, ಬ್ರಹ್ಮಾವರ, ಬೈಂದೂರು, ಹೆಬ್ರಿ ತಾಲೂಕು ರಚನೆ ಮಾಡಿ ಹೊಸ ತಾಲೂಕು ಕಚೇರಿ ಗಳನ್ನು ತೆರೆಯಲು ತಾತ್ಕಾ ಲಿಕ ಅನು ಮೋದನೆ ನೀಡಲಾಗಿದೆ.
ಉಡುಪಿ, ಮಣಿಪಾಲ, ಕಾರ್ಕಳ, ಕುಂದಾ ಪುರ ನಗರ ಗಳಲ್ಲಿ ಇಂದಿರಾ ಕ್ಯಾಂಟೀನ್‌ಗೆ
ಜಾಗ ಗುರು ತಿಸ ಲಾಗಿದ್ದು ಆಹಾರ ಸರಬ ರಾಜಿಗೆ ಟೆಂಡರ್ ಕರೆಯಲಾಗಿದೆ.
ವಾರಾಹಿಯಿಂದ ಉಡುಪಿಗೆ ಕೊಳವೆ ಮೂಲಕ ನೀರು ಸರಬರಾಜು ಕಾಮಗಾರಿಗೆ ಟೆಂಡರ್ ಆಹ್ವಾನಿಸಲಾಗಿದೆ.
ಪಶ್ಚಿಮವಾಹಿನಿ ಯೋಜನೆಯಡಿ 52.60 ಕೋ.ರೂ. ವೆಚ್ಚದ 14 ಕಿಂಡಿ ಅಣೆಕಟ್ಟು ನಿರ್ಮಾಣದ ಕ್ರಿಯಾ ಯೋಜನೆ ಅನು ಮೋದನೆ ಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.