ಉಜಿರಂಡಿಪಲ್ಕೆ : ಪಾಳು ಬಿದ್ದಿದೆ ಹಾಸ್ಟೆಲ್‌

ಇತರ ಇಲಾಖೆಗೆ ನೀಡಲು ಹಿಂದುಳಿದ ವರ್ಗಗಳ ಇಲಾಖೆ ಸಿದ್ಧ

Team Udayavani, Mar 19, 2022, 5:31 PM IST

school

ಬಂಟ್ವಾಳ: ಮಣಿ ನಾಲ್ಕೂರು ಗ್ರಾಮದ ಉಜಿರಂಡಿಪಲ್ಕೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಧೀನದ ಬಾಲಕರ ವಸತಿ ನಿಲಯ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಿರುವ ಪರಿಣಾಮ ಕಟ್ಟಡ ಪಾಳು ಬಿದ್ದಿದ್ದು, ಅದನ್ನು ಉಳಿಸುವ ದೃಷ್ಟಿಯಿಂದ ಯಾವುದೇ ಸರಕಾರಿ ಇಲಾಖೆಯು ಬಳಸುವುದಾದರೆ ಇಲಾಖೆ ನೀಡುವುದಕ್ಕೆ ಸಿದ್ಧವಿದೆ.

28 ವರ್ಷಗಳ ಇತಿಹಾಸ ಹೊಂದಿರುವ ಈ ಹಾಸ್ಟೆಲ್‌ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಟ್ಟು ಪಾಳು ಬಿದ್ದ ಸ್ಥಿತಿಯಲ್ಲಿದೆ. ಹೀಗೆ ಖಾಲಿ ಇರುವ ಹಾಸ್ಟೆಲ್‌ ಕಟ್ಟಡವನ್ನು ಬಳಸುವ ದೃಷ್ಟಿಯಿಂದ ಕಿಯೋನಿಕ್ಸ್‌ ಸಂಸ್ಥೆ ಹಿಂದುಳಿದ ವರ್ಗಗಳ ಇಲಾಖೆಯ ಬಳಿ ಕೇಳಿದರೂ, ಅದು ಪ್ರಗತಿ ಕಾಣದೆ ಹಾಗೇ ಉಳಿದುಕೊಂಡಿದೆ. ಹೀಗೆ ಪಾಳುಬಿದ್ದ ಕಟ್ಟಡವು ಶಿಥಿಲಾವಸ್ಥೆಗೆ ತಲುಪುತ್ತಿದ್ದು, ಹಿಂದೆ ಅಲ್ಲಿನ ಸೊತ್ತುಗಳನ್ನು ಕಳವು ಮಾಡಿದ ಘಟನೆಯೂ ನಡೆದಿತ್ತು. ಮುಂದೆಯೂ ಇದೇ ಸ್ಥಿತಿಯಲ್ಲಿದ್ದರೆ ಕಟ್ಟಡ ಪರರ ಪಾಲಾಗುವ ಆತಂಕವಿದೆ. ಈ ನಿಟ್ಟಿನಲ್ಲಿ ಇಲಾಖೆ ನಿರ್ಧರಿಸಿದಂತೆ ಇತರ ಇಲಾಖೆಗಾದರೂ ಅಗತ್ಯ ಕಾರ್ಯಾಚರಣೆ ನೀಡಬೇಕಿದೆ.

ಬಂಟ್ವಾಳದ ಹಾಸ್ಟೆಲ್‌ ಕಾರ್ಯಾಚರಣೆ ಹಲವು ವರ್ಷಗಳಿಂದ ಅದು ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್‌ ಆಗಿತ್ತು. ಅಲ್ಲಿನ ವಿದ್ಯಾರ್ಥಿಗಳು ಪಕ್ಕದಲ್ಲೇ ಇರುವ ಮಣಿ ನಾಲ್ಕೂರು ಸ.ಪ್ರೌಢಶಾಲೆಗೆ ತೆರಳುತ್ತಿದ್ದರು. ಮುಂದೆ ಹಲವೆಡೆ ಹೊಸ ಪ್ರೌಢಶಾಲೆಗಳು ಮಂಜೂರಾದ ಪರಿಣಾಮ ಈ ಹಾಸ್ಟೆಲ್‌ಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕುಸಿದು ಹಾಸ್ಟೆಲನ್ನು ಅನಿವಾರ್ಯವಾಗಿ ಮುಚ್ಚಬೇಕಾದ ಸ್ಥಿತಿ ಉಂಟಾಗಿತ್ತು. 5 ವರ್ಷಗಳ ಹಿಂದೆ ಬಂಟ್ವಾಳಕ್ಕೆ ಮಂಜೂರಾದ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯವನ್ನು ನಡೆಸುವುದಕ್ಕೆ ಕಟ್ಟಡ ಸಿಗದ ಹಿನ್ನೆಲೆಯಲ್ಲಿ ಅದನ್ನು ಉಜಿರಂಡಿಪಲ್ಕೆಯ ಈ ಹಾಸ್ಟೆಲ್‌ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ಆದರೆ ಇಲ್ಲಿಂದ ವಿದ್ಯಾರ್ಥಿಗಳು ಸುಮಾರು 20 ಕಿ.ಮೀ. ದೂರದಲ್ಲಿರುವ ಬಂಟ್ವಾಳ ಸ. ಪಾಲಿಟೆಕ್ನಿಕ್‌ಗೆ ಆಗಮಿಸಬೇಕಾಗಿತ್ತು. ಹೀಗಾಗಿ ವಿದ್ಯಾರ್ಥಿಗಳು ಹಾಸ್ಟೆಲ್‌ ಗೆ ಬರಲು ಹಿಂದೇಟು ಹಾಕುತ್ತಿದ್ದರು. ಈ ಕಾರಣದಿಂದ ಕೆಲವು ವರ್ಷಗಳ ಹಿಂದೆ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯ ತಲಪಾಡಿಯ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು.

ತಹಶೀಲ್ದಾರ್‌ ಗೆ ಮಾಹಿತಿ

ಕಿಯೋನಿಕ್ಸ್‌ ಸಂಸ್ಥೆ ಕಾಲೇಜಿಗೆ ಕಂಪ್ಯೂಟರ್‌ ಕೇಂದ್ರ ನಡೆಸಲು ಕಟ್ಟಡ ಕೇಳಿದ್ದು, ಅನುಮತಿ ಕೊಡಿಸುವ ಭರವಸೆ ನೀಡಿದರೂ ಬಳಿಕ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆ ಕಟ್ಟಡವು ಹಾಳಾಗುತ್ತಿರುವುದು ಬೇಸರದ ಸಂಗತಿ. ಇತರ ಸರಕಾರಿ ಇಲಾಖೆಗೆ ಅಗತ್ಯ ಇರುವುದಾದರೆ ನಮ್ಮ ಇಲಾಖೆ ನೀಡುವುದಕ್ಕೆ ಸಿದ್ಧವಿದೆ. ಈ ಕುರಿತು ತಹಶೀಲ್ದಾರ್‌ ಅವರಲ್ಲಿ ಕೂಡ ತಿಳಿಸಲಾಗಿದೆ. –ಬಿಂದಿಯಾ ನಾಯಕ್‌, ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಂಟ್ವಾಳ

ಒ ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.