Ullal; ಜೂಜಾಟಗಾರರ ಜತೆ ಶಾಮೀಲು ಆರೋಪ:ಕಾನ್ಸ್ ಟೇಬಲ್ ಅಮಾನತು
Team Udayavani, May 22, 2023, 10:21 PM IST
ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.
ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು.
ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.