ಬಿರುಸುಗೊಂಡ ಮನೆ, ಮನೆ ಮತಯಾಚನೆ
Team Udayavani, Aug 29, 2018, 10:45 AM IST
ಉಳ್ಳಾಲ: ಉಳ್ಳಾಲ ನಗರಸಭೆ ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿದ್ದು, ಬಹಿರಂಗ ಪ್ರಚಾರಕ್ಕೆ ಮಂಗಳವಾರ ತೆರೆ ಬಿದ್ದಿದೆ. ಈ ಬಾರಿಯ ಚುನಾವಣೆಯ ಪ್ರಚಾರದಲ್ಲಿ ಸ್ಥಳೀಯ ನಾಯಕರೇ ತೊಡಗಿಸಿಕೊಂಡಿದ್ದು, ಬಹಿರಂಗ ಪ್ರಚಾರಕ್ಕೆ ಪ್ರಾಮುಖ್ಯತೆ ನೀಡದೆ ಪಕ್ಷಗಳ ಕಾರ್ಯಕರ್ತರು ಮತ್ತು ಮುಖಂಡರು ಮನೆ, ಮನೆಗೆ ಭೇಟಿ ನೀಡುವ ಮೂಲಕ ಮತದಾರರ ಓಲೈಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಮುಖ ಪಕ್ಷವಾದ ಕಾಂಗ್ರೆಸ್‌ನಿಂದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮಂಗಳವಾರ ಧರ್ಮನಗರ ವಾರ್ಡ್ ವ್ಯಾಪ್ತಿಯಲ್ಲಿ ಮನೆ, ಮನೆಗೆ ತೆರಳಿ ಮತಯಾಚನೆ ನಡೆಸಿದರೆ, ನಾಯಕರಾದ ರಾಜಶೇಖರ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ, ಮರಿಯಮ್ಮ ತೋಮಸ್, ಭಾಗವಹಿಸಿದ್ದರು.
ಬಿಜೆಪಿಯಿಂದ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್‌ನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೊರತುಪಡಿಸಿದರೆ ಸ್ಥಳೀಯ ನಾಯಕರು ಮನೆ, ಮನೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಜಾತ್ಯಾತೀತ ಜನತಾದಳ, ಸಿಪಿಐಎಂ, ಎಸ್‌ಡಿಪಿಐಯಿಂದ ಸ್ಥಳೀಯ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಮೂಲಸೌಕರ್ಯ ಪ್ರಮುಖ ಅಂಶ
ಕಾಂಗ್ರೆಸ್ ಆಡಳಿತವಿರುವ ಉಳ್ಳಾಲ ನಗರಸಭೆಯಲ್ಲಿ ನನೆಗುದಿಗೆ ಬಿದ್ದಿರುವ ಒಳಚರಂಡಿ ಕಾಮಗಾರಿಯ ವೈಫಲ್ಯತೆ, 24 ಗಂಟೆ ಕುಡಿಯುವ ನೀರಿನ ಭರವಸೆ, ಘನತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪನೆ, ಒಂಭತ್ತುಕೆರೆಯಲ್ಲಿ ಆಶ್ರಯ ಮನೆಯ ವಿಚಾರವೇ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್, ಎಸ್‌ಡಿಪಿಐ, ಸಿಪಿಐಎಂನ ಚುನಾವಣಾ ವಿಚಾರವಾಗಿದೆ.
ಕಾರ್ಯಕರ್ತರ ದಂಡು
ಐದು ದಿನಗಳಿಂದ ಇದ್ದ ಚುನಾವಣಾ ಕಾವು ಬಹಿರಂಗ ಪ್ರಚಾರದ ಕೊನೆಯ ದಿನವಾದ ಮಂಗಳವಾರ ಹೆಚ್ಚಾಗಿದ್ದು, ಪ್ರತೀ ವಾರ್ಡ್‌ಗಳಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರ ದಂಡು ಮನೆ, ಮನೆಗೆ ತೆರಳಿ ಮತಯಾಚನೆಯಲ್ಲಿ ನಡೆಸಿದರು. ರಾತ್ರಿವರೆಗೂ ಮತ ಯಾಚನೆ ಮುಂದುವರೆದಿದ್ದು, ಯಾವುದೇ ಅಬ್ಬರದ ಪ್ರಚಾರಕ್ಕೆ ಮಹತ್ವ ನೀಡದೆ ಕರಪತ್ರಗಳ ಮೂಲಕ ನೇರವಾಗಿ ಮತದಾರರನ್ನೇ ಸಂಪರ್ಕಿಸುವ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.