Ullal: ಮನೆ ಮೇಲೆ ಬಿದ್ದ ತಡೆಗೋಡೆ; ಐವರು ಪಾರು
Team Udayavani, Dec 4, 2024, 1:07 AM IST
ಉಳ್ಳಾಲ: ಫೈಂಜಾಲ್ ಚಂಡಮಾರುತದಿಂದ ಸುರಿದ ಗಾಳಿ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಸುಮಾರು 20 ಮನೆಗಳಿಗೆ ಹಾನಿಯಾಗಿದೆ.
ಮನೆಯ ಆವರಣ ಗೋಡೆ, ತಡೆಗೋಡೆ, ಗುಡ್ಡ ಕುಸಿತದಂತಹ ಹಲವಾರು ಘಟನೆಗಳು ನಡೆದಿವೆ. ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಪಿಲಿಕೂರಿನಲ್ಲಿ ತಡೆಗೋಡೆ ಮನೆಯ ಮೇಲೆ ಬಿದ್ದಿದ್ದು, ಮನೆಯೊಳಗಿದ್ದ ಐವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ರೆಸಾರ್ಟ್ ಬಂದ್‌ಗೆ ಸೂಚನೆ
ಸಮುದ್ರ ತಟದ ಜನರಿಗೆ ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. ಉಚ್ಚಿಲ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳನ್ನು ಬಂದ್ ಮಾಡುವಂತೆ ತಹಶೀಲ್ದಾರ್ ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪ ಪ್ರದೇಶಗಳಿಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಿ ಪ್ರಮಾಣವನ್ನು ಅಂದಾಜು ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗಾಳಿ ಮಳೆಯಿಂದ ಒಟ್ಟು 20 ಮನೆಗಳಿಗೆ ಹಾನಿಯಾಗಿದೆ. ಕೊಣಾಜೆಯಲ್ಲಿ ಮಿಷನ್ ಕಾಂಪೌಂಡ್ ಬಳಿ ಸಿಡಿಲು ಬಡಿದು ಹೆಲೆನ್ ಸೋನ್ಸ್ ಅವರ ಮನೆಯ ಎಲೆಕ್ಟ್ರಾನಿಕ್ಸ್ ವಸ್ತುಗಳಿಗೆ ಹಾನಿಯಾಗಿದೆ.
ಪಿಲಿಕೂರಿನಲ್ಲಿ ಮೊದಿನ್ ಕುಂಞ ಅವರ ಮನೆಗೆ ನಿರ್ಮಿಸಿದ್ದ ತಡೆಗೋಡೆ ಕೆಲ ಭಾಗದಲ್ಲಿದ್ದ ಯಾಸಿನ್ ಬೇಗ್ ಅವರ ಮನೆಯ ಮೇಲೆ ಬಿದ್ದಿದೆ. ಆರ್‌ಸಿಸಿ ಮನೆಯಾಗಿದ್ದರಿಂದ ಮನೆಯೊಳಗಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ. ಸುಮಾರು ಏಳು ಲಕ್ಷ ರೂ ನಷ್ಟವಾಗಿದೆ.
ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ರಾ. ಹೆ., ರಾಜ್ಯ ಹೆದ್ದಾರಿಯಲ್ಲೂ ನೀರು ತುಂಬಿ ವಾಹನ ಚಾಲಕರು ಪರದಾಡುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Mangaluru;ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
Mangaluru: ವಿದ್ಯಾರ್ಥಿಯ ಶೈಕ್ಷಣಿಕ ಖಾತೆ ನೋಂದಣಿಗೆ “ಅಪಾರ್’ ವೇಗ!
Mangaluru: ವಿವಿ ಅಂತರ್ ಕಾಲೇಜು ಆ್ಯತ್ಲೆಟಿಕ್ಸ್: ಸತತ 22 ಬಾರಿ ಆಳ್ವಾಸ್ ಚಾಂಪಿಯನ್
Mangaluru: ಜಿಲ್ಲಾಡಳಿತದಿಂದ ಮುಂಜಾಗ್ರತ ಕ್ರಮ: ಡಿಸಿ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Ballari: ದೌರ್ಜನ್ಯ, ಹಿಂಸಾಚಾರ ಖಂಡಿಸಿ ಬಳ್ಳಾರಿ ಬಂದ್ ಕರೆಗೆ ಮಿಶ್ರ ಪ್ರತಿಕ್ರಿಯೆ
Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ
Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.