ಉಳ್ಳಾಲ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು
Team Udayavani, Feb 20, 2023, 6:10 AM IST
ಉಳ್ಳಾಲ: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ರವಿವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ (17) ಮೃತ ವಿದ್ಯಾರ್ಥಿನಿ. ಧನ್ಯ ಮಂಗಳೂರಿನ ಖಾಸಗಿ ಪಿಯು ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದು, ರಜಾ ದಿನದಂದು ಮನೆಯಲ್ಲಿ ಹೇಳದೆ ತೆರಳಿದ್ದ ಧನ್ಯಳಿಗೆ ತಾಯಿ ಗದರಿಸಿ ಹೊಡೆದ ವಿಚಾರದಲ್ಲಿ ನೊಂದು ಕೀಟನಾಶಕ ಸೇವಿಸಿ ಅಸ್ವಸ್ಥಳಾಗಿದ್ದು, ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟರು.
ಮೃತ ಧನ್ಯ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಉಪ್ಪಿನಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ ಸಂಜೆ ಹೊತ್ತಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಯ ಇನ್ನೋರ್ವ ಪುತ್ರ ಓದುತ್ತಿದ್ದಾನೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.