ಪ್ರತಿ ಮನೆಗೂ ಉಜ್ವಲ ಯೋಜನೆ: ನಳಿನ್‌


Team Udayavani, Feb 3, 2019, 5:47 AM IST

3-february-5.jpg

ಉಳ್ಳಾಲ: ಪ್ರತಿಯೊಬ್ಬರ ಮನೆಯಲ್ಲಿ ಹೊಗೆರಹಿತ ಅಡುಗೆ ತಯಾರಾಗಬೇಕು ಎಂಬ ಉದ್ದೇಶದಿಂದ ಕೇಂದ್ರ ಸರಕಾರ ಉಜ್ವಲ ಯೋಜನೆ ಅನುಷ್ಠಾನಕ್ಕೆ ತಂದಿದ್ದು, ಅದರಂತೆ ಈ ವರ್ಷ ಆರು ಕೋಟಿ ಮನೆಗಳಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗಳಲ್ಲೂ ಈ ಯೋಜ ನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ಅಭಿಪ್ರಾಯಪಟ್ಟರು.

ಕೇಂದ್ರ ವಸತಿ ಮತ್ತು ನಗರ ವ್ಯವ ಹಾರಗಳ ಮಂತ್ರಾಲಯ ಭಾರತ ಸರಕಾರ ನವದೆಹಲಿ, ಆಯುಕ್ತಾಲಯ ಉದ್ಯಮ ಶೀಲತೆ ಮತ್ತು ಜೀವನೋಪಾಯ ಬೆಂಗ ಳೂರು, ಜಿಲ್ಲಾಡಳಿತ ಮತ್ತು ಉಳ್ಳಾಲ ನಗರಸಭೆ ಇವುಗಳ ವತಿಯಿಂದ ದೀನ್‌ ದಯಾಳ್‌ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಉಳ್ಳಾಲ ನಗರಸಭಾ ಮಹಾತ್ಮಾಗಾಂಧಿ ರಂಗಮಂದಿರದಲ್ಲಿ ಶನಿವಾರ ನಡೆದ ಶಹರೀ ಸಮೃದ್ಧಿ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಡವರಿಗೂ ಬ್ಯಾಂಕಿಂಗ್‌ ಸೌಲಭ್ಯ
ಯೋಜನೆಯ ಸಬ್ಸಿಡಿ ಹಣ ನೇರವಾಗಿ ಬ್ಯಾಂಕ್‌ ಖಾತೆಗೆ ಬರುವ ನಿಟ್ಟಿನಲ್ಲಿ ಜನ ಧನ್‌ ಯೋಜನೆ ಜಾರಿಗೆ ತಂದಿದ್ದು, ಪ್ರತಿಯೊಬ್ಬರ ಕೈಯಲ್ಲೂ ಬ್ಯಾಂಕ್‌ ಪುಸ್ತಕ, ಎಟಿಎಂ ಕಾರ್ಡ್‌ ಇರಲು ಈ ಯೋಜನೆ ಪೂರಕವಾಗಿದೆ ಎಂದರು.

ಆಯುಷ್ಮಾನ್‌ ಯೋಜನೆಯ ಮೂಲಕ ಅತ್ಯಂತ ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಕೇಂದ್ರ ಸರಕಾರ ಕೇವಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದರೆ ಆ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಯಲ್ಲೂ ಪಡೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ಇದರೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್‌ ಯೋಜನೆ, ದುಬಾರಿ ಔಷಧ ಗಳನ್ನು ಕಡಿಮೆ ಬೆಲೆಯಲ್ಲಿ ನೀಡುವ ಜನೌಷಧಿ ಕೇಂದ್ರ, ದುಬಾರಿ ವೈದ್ಯಕೀಯ ಪರಿಕರಗಳನ್ನು ಕಡಿಮೆದರದಲ್ಲಿ ನೀಡುವ ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಸರಕಾರ ಮಾಡಿದ್ದು, ಯೋಜನೆ ಯನ್ನು ಜನರ ಕಾಲಬುಡಕ್ಕೆ ತರುವ ಕಾರ್ಯವನ್ನು ಮಾಡಿದೆ ಎಂದರು.

ಸಿಂಡಿಕೇಟ್ ಬ್ಯಾಂಕ್‌ ವ್ಯವಸ್ಥಾಪಕ ಫ್ರಾನ್ಸಿಸ್‌ ಎ. ಬೋರ್ಜಿಯ, ಸ್ವರ್ಣ ಸ್ವಸಹಾ ಯ ಗುಂಪುಗಳ ನಗರ ಮಟ್ಟದ ಒಕ್ಕೂಟ ಅಧ್ಯಕ್ಷೆ ಭಾರತಿ ಎಚ್. ಭಾಗವಹಿಸಿದ್ದರು.

ಜಿಲ್ಲಾ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ, ಹಂಪನಕಟ್ಟೆ ಸಿಂಡಿಕೇಟ್ ಬ್ಯಾಂಕ್‌ ಹಿರಿಯ ಸಮಾಲೋಚಕ ಸತೀಶ್‌ ಅತ್ತಾವರ ಅವರು ಜನ್‌ ಧನ್‌ ಯೋಜನೆ, ಪ್ರಧಾನ ಮಂತ್ರಿ ಜೀವನ್‌ ಜ್ಯೋತಿ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆ, ಅಟಲ್‌ ಪೆನ್ಶನ್‌ ಯೋಜನೆಯ ಕುರಿತು ಮಾಹಿತಿ ನೀಡಿದರು. ರಾಷ್ಟ್ರೀಯ ಪೌಷ್ಟಿಕ ಅಭಿಯಾನದ ಕುರಿತು ಅಂಗನವಾಡಿ ಮೇಲ್ವಿಚಾರಕಿ ಕಲ್ಪನಾ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಕುರಿತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಜಿಲ್ಲಾ ನೋಡಲ್‌ ಅಧಿಕಾರಿ ಕೃಷ್ಣ, ಪ್ರಧಾನ ಮಂತ್ರಿ ಅವಾಝ್ ಯೋಜನೆ ಕುರಿತು ಜಿಲ್ಲಾ ನಗರಾಭಿವೃದ್ಧಿ ಕೋಶದ ಸಮಾಜ ಅಭಿವೃದ್ಧಿ ಪರಿಣತ ತನೂರ್ಯ ಮಾಹಿತಿ ನೀಡಿದರು.

ನಗರಸಭಾ ಪೌರಾಯುಕ್ತೆ ವಾಣಿ ವಿ.ಆಳ್ವ ಸ್ವಾಗತಿಸಿದರು. ಎನ್‌. ವಂದಿಸಿದರು. ಐರಿನ್‌ ರೆಬೆಲ್ಲೋ ನಿರ್ವಹಿಸಿದರು.

ಆದೇಶ ಪತ್ರ, ಅಡುಗೆ ಅನಿಲ ವಿತರಣೆ
ಸ್ವಯಂ ಉದ್ಯೋಗ ಯೋಜನೆಯಡಿ ಫಲಾನುಭವಿಗಳಿಗೆ ಆದೇಶ ಪತ್ರ, ಪಿಎಂಎವೈ ಯೋಜನೆಯಡಿ ಕಾಮಗಾರಿ ಆದೇಶ ಪತ್ರ, ಸ್ವಸಹಾಯ ಗುಂಪುಗಳಿಗೆ ಆವರ್ತಕ ನಿಧಿ ಆದೇಶ ಪತ್ರ, ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ, ಅನೌಪಚಾರಿಕ ನೈರ್ಮಲ್ಯ ಕಾರ್ಯಕರ್ತರ ಸ್ವಸಹಾಯ ಸಂಘ ರಚನೆ ಬಗ್ಗೆ ಆದೇಶ ಪತ್ರ, ಉಜ್ವಲ ಯೋಜನೆಯಡಿ ಉಚಿತ ಅಡುಗೆ ಅನಿಲ ವಿತರಣೆಯನ್ನು ಸಂಸದ ನಳಿನ್‌ ಕುಮಾರ್‌ ನೆರವೇರಿಸಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.