ಉಳ್ಳಾಲದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಫಾಸ್ಟ್ ಫುಡ್ ಅಂಗಡಿ
Team Udayavani, Feb 11, 2023, 10:17 PM IST
ಉಳ್ಳಾಲ: ಅಗ್ನಿ ಆಕಸ್ಮಿಕ ನಡೆದ ಪರಿಣಾಮ ಫಾಸ್ಟ್ ಫುಡ್ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ.ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು.ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದಾರೆ. ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರ್ನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯರೆ ಸೇರಿ ತಕ್ಷಣ ಬೆಂಕಿಯನ್ನ ಆರಿಸಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ.ಘಟನೆಯಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಸೋಮೇಶ್ವರ ಪುರಸಭಾ ಅಧಿಕಾರಿಗಳು ಮತ್ತು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ಮಣಿಪಾಲದ ಬಾರ್ನಲ್ಲಿ ಜಟಾಪಟಿ: ದೂರು-ಪ್ರತಿದೂರು ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.