ಉಳ್ಳಾಲ : ಮಳೆಗೆ ‌ಕುಸಿದು ಬಿದ್ದ ಶಾಲೆಯ ಹಳೆ ಕಟ್ಟಡದ ಮೇಲ್ಛಾವಣಿ, ತಪ್ಪಿದ ಭಾರಿ ಅನಾಹುತ

Team Udayavani, May 17, 2022, 7:19 PM IST

ಉಳ್ಳಾಲ : ಮಳೆಗೆ ‌ಕುಸಿದು ಬಿದ್ದ ಶಾಲೆಯ ಹಳೆ ಕಟ್ಟಡದ ಮೇಲ್ಛಾವಣಿ, ತಪ್ಪಿದ ಭಾರಿ ಅನಾಹುತ

ಉಳ್ಳಾಲ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಿನ್ಯ ಬೆಳರಿಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲಾವಸ್ಥೆಯಲ್ಲಿದ್ದ ಹಳೆ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ಶಿಕ್ಷಣಾ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮುಖ್ಯಸ್ಥರು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಿನ್ಯ ಬೆಳರಿಂಗೆ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 25 ವರ್ಷಕ್ಕೂ ಹಳೆ ಕಟ್ಟಡ ಕಳೆದ ಎರಡು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಶಾಲೆಗೆ ನೂತನ ತರಗತಿ ಕೊಠಡಿ ನಿರ್ಮಾಣ ಕಾರ್ಯ ಮುಗಿದು ಮುಂದಿನವಾರ ಉದ್ಘಾಟನೆಗೊಳ್ಳಲಿದೆ. ಈ ನಡುವೆ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಗೆ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತ್ತು. ಈ ಕಟ್ಟಡದಲ್ಲಿ ಒಟ್ಟು ಐದು ತರಗತಿಗಳಿದ್ದು, 2020ರ ಬಳಿಕ ಈ ಕಟ್ಟಡದಲ್ಲಿ ತರಗತಿಯನ್ನು ಸ್ಥಗಿತಗೊಳಿಸಲಾಗಿತ್ತು ಕೋವಿಡ್ ಬಳಿಕ 2021ರಲ್ಲಿ ಶಾಲಾ ಪ್ರಾರಂಭದ ಸಂದರ್ಭದಲ್ಲಿ ಮೂರು ತರಗತಿಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಮದರಸ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೀಗ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಸೋಮವಾರ ರಾತ್ರಿ ಸುರಿದ ಮಳೆಗೆ ಛಾವಣಿ ಮುರಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ವಿದ್ಯಾರ್ಥಿಗಳು ಅಪಾಯದಿಂದ ಪಾರಾದಂತಾಗಿದೆ.

ವಿದ್ಯಾರ್ಥಿಗಳಿಗೆ ನಿರ್ಬಂಧವಿತ್ತು : ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಬಳಿ ಹೋಗದಂತೆ ಕಟ್ಟಡದ ಸುತ್ತ ಹಗ್ಗವನ್ನು ಕಟ್ಟಿ ಎಚ್ಚರಿಕೆಯ ಕ್ರಮ ಕೈಗೊಳ್ಳಲಾಗಿತ್ತು. ಕುಸಿದ ಕಟ್ಟಡಕ್ಕೆ ತಾಗಿಕೊಂಡಿರುವ ಕಟ್ಟಡದಲ್ಲಿ ಎರಡು ತರಗತಿ ಕೋಣೆಯಿದ್ದು, ಅಂಗನವಾಡಿ ಕೋಣೆಯೂ ಈ ಕಟ್ಟಡದ ಇನ್ನೊಂದು ಪಾರ್ಶ್ವದಲ್ಲಿದ್ದು, ಇದೀಗ ಶಿಥಿಲಾವಸ್ಥೆಯಲ್ಲಿರುವ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸಲು ಶಾಸಕ ಯು,.ಟಿ.ಖಾದರ್ ತಿಳಿಸಿದ್ದು, ಶಿಕ್ಷಣ ಇಲಾಖೆಯೂ ಒಪ್ಪಿಗೆ ನೀಡಿದೆ.

ಇದನ್ನೂ ಓದಿ : ಭಟ್ಕಳ: ಲಂಗರು ಹಾಕಿದ ಬೋಟ್ ಪಲ್ಟಿಯಾಗಿ ಲಕ್ಷಾಂತರ ರೂ. ನಷ್ಟ  

ಮೂಲಭೂತ ಸೌಕರ್ಯ ಅಗತ್ಯ ಇದೆ : ನೂತನವಾಗಿ ನಿರ್ಮಾಣಗೊಂಡಿರುವ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ತರಗತಿ ಆರಂಭವಾದರೂ ಈ ಶಾಲೆಯಲ್ಲಿ ಮೂಲಭೂತ ಸೌಕರ್ಯದ ಕೊರತೆ ಇದೆ. ಇನ್ನೂ ಮೂರು ಕೊಠಡಿಗಳ ಅಗತ್ಯವಿದ್ದು, ವಿದ್ಯಾರ್ಥಿಗಳ ಭದ್ರತೆಗೆ ಸುತ್ತಲೂ ಧರೆ ನಿರ್ಮಾಣವಾಗಬೇಕಾಗಿದ್ದು, ಶೌಚಾಲಯದ ಅಗತ್ಯವೂ ಇದೆ.

ಸ್ಥಳಕ್ಕೆ ಭೇಟಿ ನೀಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಬೈಲಮೂಲೆ ಮಾತನಾಡಿ ಕುಸಿದಿರುವ ಕಟ್ಟಡ ತೆರವಿಗೆ ಜಿಲ್ಲಾ ಪಂಚಾಯತ್‍ಗೆ ಮತ್ತು ಕಂದಾಯ ಇಲಾಖೆಗೆ ಮಾಹಿತಿ ನೀಡಿದ್ದು, ಪಂಚಾಯತ್ ವತಿಯಿಂದ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಂಗಳೂರು ದಕ್ಷಿಣ ವಲಯ ಶಿಕ್ಷಣಾಧಿಕಾರಿ ಪ್ರಶಾಂತ್ ಭೇಟಿ ನೀಡಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹತ್ತಿರ ಹೋಗದಂತೆ ಕ್ರಮ ಕೈಗೊಳ್ಳಲಾಗಿತ್ತು. ಶಿಕ್ಷಣ ಇಲಾಖಗೆಗ ಕಟ್ಟಡ ಕುಸಿದಿರುವ ವರದಿ ನೀಡಿದ್ದು, ಸಂಪೂರ್ಣ ಕಟ್ಟಡ ತೆರವಿಗೆ ಇಲಾಖೆ ಆನುಮತಿ ನೀಡಿದೆ. ಶಾಲೆಗೆ ಮೂಲಭೂತ ಸೌಕರ್ಯದ ಸಮಸ್ಯೆಗೆ ಸಂಬಂ„ಸಿದಂತೆ ಸಂಬಂ„ತ ಇಲಾಖೆಯ ಅ„ಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದರು.

ಯು.ಟಿ.ಖಾದರ್ ಭೇಟಿ : ವಿಧಾನಸಭಾ ವಿಪಕ್ಷ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಭೇಟಿ ನೀಡಿ ಕಳೆದ ಮೂರು ವರ್ಷಗಳೀಮದ ಈ ಶಾಲೆಗೆ ನೂತನ ಕಟ್ಟಡ ಮತ್ತು ಹಳೆಯ ಕಟ್ಟಡ ನೆಲಸಮ ಮಾಡಲು ಮನವಿ ಬಂದಿತ್ತು. ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ಮನವಿ ಮೇರೆಗೆ ಎರಡು ತರಗತಿಗಳ ಕೊಠಡಿ ನಿರ್ಮಾಣವಾಗಿದ್ದು, ಉಳಿದ ತರಗತಿ ಕೋಣೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದೆ. ಈ ಕಟ್ಟಡ ನೆಲಸಮ ಮಾಡಲು ಕಳೆದ ಕೆಲವು ತಿಂಗಳಿನಿಂದ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದ್ದು, ಇಲಾಖೆಯ ವಿಳಂಭ ನೀತಿಯಿಂದ ಕಟ್ಟಡ ನೆಲಸಮ ಮಾಡಿರಲಿಲ್ಲ. ರಾತ್ರಿ ಘಟನೆ ನಡೆದಿದ್ದರಿಂದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದು, ಶೀಘ್ರವೇ ಕಟ್ಟಡ ತೆರವು ಕಾರ್ಯ ನಡೆಯಲಿದ್ದು, ಈ ಕಟ್ಟಡದಲ್ಲಿರುವ ಅಂಗನವಾಡಿಗೆ ಉದ್ಯೋಗ ಖಾತರಿ ಯೋಜನೆಯಡಿ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡುತ್ತೇನೆ ಎಂದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.