ಉಳ್ಳಾಲ : ಸರಣಿ ಕಳ್ಳತನ, ನಗದು ಸಹಿತ ಸೊತ್ತು ಕಳವು
Team Udayavani, Dec 11, 2022, 5:00 AM IST
ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿಯಲ್ಲಿ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.
ತಲಪಾಡಿ ಹೆದ್ದಾರಿ ಬದಿಯ ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್, ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ಸಿಗರೇಟ್ ಹಾಗೂ ನಗದು ಹಣವನ್ನು ಕಳವುಗೈದಿದ್ದು, ಅಶ್ರಫ್ ಅವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು, ಕಳವುಗೈಯಲಾಗಿದೆ. ರಾತ್ರಿ ವೇಳೆ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದು, ಈ ಹಿಂದೆ ಇದೇ ಮಾದರಿಯಲ್ಲಿ ಮಂಜೇಶ್ವರ ಹಾಗೂ ಕುಂಜತ್ತೂರು ಭಾಗದಲ್ಲಿ ಕಳವು ಕೃತ್ಯ ನಡೆದಿದೆ. ಸ್ಥಳೀಯರು ಪೊಲೀಸರ ವೈಫಲ್ಯದಿಂದ ಇಂತಹ ಕೃತ್ಯಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ.
ಗಾಂಜಾ ವ್ಯಸನ ಹೆಚ್ಚಳ
ಗಡಿ ಭಾಗದಲ್ಲಿ ಗಾಂಜಾ ವ್ಯಸನಿಗಳು ಸೇರಿದಂತೆ ಗಾಂಜಾ ಸಾಗಾಟ ಹೆಚ್ಚಾಗುತ್ತಿದ್ದು, ಕಳವು ಕೃತ್ಯದಲ್ಲಿ ಈ ತಂಡಗಳು ಭಾಗಿಯಾಗಿರುವ ಶಂಕೆಯಿದೆ. ಸ್ಥಳೀಯವಾಗಿ ಮಾರುತಿ ಕಾರೊಂದು ಅನುಮಾನಾಸ್ಪ ದವಾಗಿ ತಿರುಗಾಡುತ್ತಿದ್ದು, ಪೊಲೀಸರು ಈ ಪ್ರದೇಶದಲ್ಲಿ ತೀವ್ರ ನಿಗಾ ವಹಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.