Ullala: ಸ್ಕೂಟಿ ಸ್ಕಿಡ್: ರಸ್ತೆಗೆ ಬಿದ್ದ ಮಹಿಳೆ ಮೇಲೆ ಚಲಿಸಿದ ಲಾರಿ!
ಮಹಿಳೆ ಸ್ಥಳದಲ್ಲೇ ಸಾವು, ರಸ್ತೆ ಅವ್ಯವಸ್ಥೆ ಖಂಡಿಸಿ ಉದ್ರಿಕ್ತ ಗುಂಪಿನಿಂದ ಕಲ್ಲುಗಳ ಇಟ್ಟು ಪ್ರತಿಭಟನೆ, ವಾಹನ ಸಂಚಾರ ವ್ಯತ್ಯಯ
Team Udayavani, Nov 9, 2024, 7:40 PM IST
ಉಳ್ಳಾಲ: ಪತಿಯೊಂದಿಗೆ ಮಂಗಳೂರು ಕಡೆ ತೆರಳುತ್ತಿದ್ದಾಗ ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಮಹಿಳೆ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ತೊಕ್ಕೊಟ್ಟು ಚೆಂಬುಗುಡ್ಡೆ ಬಳಿ ಸಂಭವಿಸಿದೆ. ಘಟನೆಗೆ ರಸ್ತೆ ಹೊಂಡವೇ ಕಾರಣ ಎಂದು ಆರೋಪಿಸಿ ಸ್ಥಳೀಯರು ಮತ್ತು ವಾಹನ ಚಾಲಕರು ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸಿದರು. ಉದ್ರಿಕ್ತ ಗುಂಪು ರಸ್ತೆಗೆ ಕಲ್ಲುಗಳನ್ನಿಟ್ಟು ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಒಂದು ಗಂಟೆಯ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಯೇನೆಪೊಯದಲ್ಲಿ ಸೂಪರ್‌ವೈಸರ್ ಆಗಿರುವ ರಶೀದ್ ಗುತ್ತಿಗಾರು ಅವರ ಪತ್ನಿ ಮೂಲತಃ ಸುರತ್ಕಲ್‌ನ ಕುಳಾಯಿ ನಿವಾಸಿ ರೆಹಮತ್ ಎಚ್. ರಶೀದ್ (47) ಮೃತಪಟ್ಟವರು. ಘಟನೆಯಲ್ಲಿ ರಶೀದ್ ಅವರು ರಸ್ತೆಯ ಎಡ ಬದಿಗೆ ಬಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮತ್ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಪರೀಕ್ಷಿಸಿದ ವೈದ್ಯರು ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಸಹೋದರಿಯ ಪುತ್ರಿಯನ್ನು ವಿದೇಶಕ್ಕೆ ಕಳುಹಿಸಿಕೊಡಲು ತೆರಳುತ್ತಿದ್ದರು
ರೆಹಮತ್ ಹಿಂದೆ ಪತಿಯೊಂದಿಗೆ ದುಬಾೖಯಲ್ಲಿ ನೆಲೆಸಿದ್ದರು. ಬಳಿಕ ಊರಿಗೆ ಬಂದಿದ್ದ ರಶೀದ್ 10 ವರ್ಷಗಳಿಂದ ಯೇನೆಪೊಯ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ದೇರಳಕಟ್ಟೆಯ ಯೇನೆಪೊಯ ಕ್ಯಾಂಪಸ್‌ನಲ್ಲಿರುವ ಕ್ವಾಟ್ರಸ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಪುತ್ರನೊಂದಿಗೆ ವಾಸಿಸುತ್ತಿದ್ದರು. ರೆಹಮತ್ ಅವರ ಸಹೋದರಿಯ ಪುತ್ರಿಗೆ ಮೂರು ತಿಂಗಳ ಹಿಂದೆ ಮದುವೆಯಾಗಿದ್ದು, ಅವರ ಪತಿ ಸೌದಿ ಅರೇಬಿಯಾದಲ್ಲಿದ್ದಾರೆ. ಶನಿವಾರ ಸಂಜೆ ವಿದೇಶಕ್ಕೆ ತೆರಳುವ ಸಹೋದರಿಯ ಪುತ್ರಿಯನ್ನು ಬೀಳ್ಕೊಡಲು ದಂಪತಿ ಮಂಗಳೂರು ಕಡೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಉದ್ರಿಕ್ತ ಗುಂಪಿನಿಂದ ರಸ್ತೆಗೆ ಕಲ್ಲುಗಳ ಇಟ್ಟು ಪ್ರತಿಭಟನೆ: ವಾಹನ ಸಂಚಾರ ವ್ಯತ್ಯಯ
ಉದ್ರಿಕ್ತ ಪ್ರತಿಭಟನೆಯಿಂದ ಸುಮಾರು ಒಂದು ತಾಸು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ತೊಕ್ಕೊಟ್ಟು ಕೊಣಾಜೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ವಾಹನಗಳು ಕಿಲೋಮೀಟರ್ ದೂರದವರೆಗೆ ಸರತಿ ಸಾಲುಗಳಲ್ಲಿ ನಿಂತಿದ್ದವು. ಕೆಲವು ವಾಹನಗಳು ಬೀರಿ ಮಾರ್ಗವಾಗಿ ಸಂಚರಿಸಿದವು. ಉದ್ರಿಕ್ತರು ಉಳ್ಳಾಲ ಪೊಲೀಸರ ನಡುವೆ ವಾಕ್ಸಮರ ನಡೆದಿದೆ.
ಭಯದಿಂದ ಓಡಿದ ಚಾಲಕ
ಅಪಘಾತ ಸಂಭವಿಸುತ್ತಿದ್ದಂತೆ ಉದ್ರಿಕ್ತ ಜನ ಸ್ಥಳದಲ್ಲಿ ಸೇರಿದ್ದು, ಲಾರಿ ಚಾಲಕ ಭಯದಿಂದ ಲಾರಿಯನ್ನು ತೊಕ್ಕೊಟ್ಟು ಜಂಕ್ಷನ್‌ವರೆಗೆ ಚಲಾಯಿಸಿಕೊಂಡು ಬಂದು ಲಾರಿಯನ್ನು ತೊರೆದು ಪರಾರಿಯಾಗಿದ್ದ. ತಡರಾತ್ರಿ ಮಾಲಕನೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
108 ಆಂಬ್ಯುಲೆನ್ಸ್ ಅವ್ಯವಸ್ಥೆ!
ಅಪಘಾತದಲ್ಲಿ ಮೃತಪಟ್ಟ ಮಹಿಳೆ ರೆಹಮತ್ ಮೃತದೇಹ ಅರ್ಧ ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇತ್ತು. 108 ಆಂಬ್ಯುಲೆನ್ಸ್ ಗೆ ಕರೆ ಮಾಡಿದಾಗ ತಾಂತ್ರಿಕ ಕಾರಣಗಳ ನೀಡಿ ಸ್ಥಳಕ್ಕಾಗಮಿಸಲಿಲ್ಲ. ಇದರಿಂದ ಇನ್ನಷ್ಟು ರೊಚ್ಚಿಗೆದ್ದ ಜನ ಆಂಬ್ಯುಲೆನ್ಸ್ ಅವ್ಯವಸ್ಥೆಯ ವಿರುದ್ಧವೂ, ನಿತ್ಯ ಹೊಂಡಗುಂಡಿಯ ರಸ್ತೆಯ ಬದಿಯಲ್ಲೇ ನಿಂತು ದಂಡ ಪಡೆಯುವ ಸಂಚಾರಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಘಟನಾ ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಸಂಚಾರಿ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಎಸಿಪಿ ಧನ್ಯಾ ನಾಯಕ್, ಉಳ್ಳಾಲ ಠಾಣಾಧಿಕಾರಿ ಬಾಲಕೃಷ್ಣ ಎಚ್.ಎನ್ ಭೇಟಿ ನೀಡಿ ಉದ್ರಿಕ್ತರ ಸಮಾಧಾನಿಸಿದರು. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.