ಅಪರಿಚಿತ ಯುವಕನ ಶವ ಪತ್ತೆ; ಕೊಲೆ ಶಂಕೆ
Team Udayavani, Nov 12, 2018, 9:50 AM IST
ಬೆಳ್ತಂಗಡಿ: ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್ ಅಳಕೆ ರಸ್ತೆಯಲ್ಲಿ ಅಪರಿಚಿತ ಯುವಕನ ಮೃತದೇಹ ರವಿವಾರ ಪತ್ತೆಯಾಗಿದ್ದು, ಇದೊಂದು ಕೊಲೆಯಾಗಿರಬೇಕು ಎಂಬ ಶಂಕೆ ಮೂಡಿದೆ. ಯುವಕನ ಮುಖಕ್ಕೆ ಪ್ಲಾಸ್ಟಿಕ್ ಟೇಪ್ ಸುತ್ತಲಾಗಿದ್ದು, ಎಲ್ಲಿಯೋ ಕೊಲೆ ಮಾಡಿ ಇಲ್ಲಿಗೆ ತಂದು ಬಿಸಾಡಿರಬೇಕು ಎಂದು ಸಂಶಯಿಸಲಾಗಿದೆ.
ಯುವಕನ ವಯಸ್ಸು ಸುಮಾರು 30ರಿಂದ 35 ವರ್ಷವೆಂದು ಅಂದಾಜಿಸಲಾಗಿದ್ದು, ಕಪ್ಪು ಪ್ಯಾಂಟ್ ಹಾಗೂ ಬೂದು ಬಣ್ಣದ ಟಿಶರ್ಟ್ ಧರಿಸಿದ್ದಾನೆ. ದೇಹದಲ್ಲಿ ಯಾವುದೇ ಗಾಯಗಳು ಕಂಡುಬಂದಿಲ್ಲ. ಈತನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ವಾಹನದಲ್ಲಿ ತಂದು ಶವವನ್ನು ಇಲ್ಲಿ ಎಸೆದಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ನಿವಾಸಿ ಅನಿಲ್ ಪ್ರಕಾಶ್ ಡಿ’ ಸೋಜಾ ಅವರು ರವಿವಾರ ಬೆಳಗ್ಗೆ ವಾಕಿಂಗ್ ಹೋಗುವ ಸಂದರ್ಭ ಮೃತದೇಹ ಚರಂಡಿ ಬದಿಯಲ್ಲಿ ಕಂಡುಬಂದಿದೆ. ಅವರು ನೀಡಿದ ಮಾಹಿತಿಯಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ., ಪಿಎಸ್ಐ ರವಿ ಬಿ.ಎಸ್. ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹದ ಮೇಲೆ ಗುರುತು ಪತ್ತೆಗೆ ಸಹಕಾರಿಯಾಗುವ ಯಾವುದೇ ವಸ್ತುಗಳು ಕಂಡುಬಂದಿಲ್ಲ.
ಕೃತ್ಯ ಎಸಗಿರುವವರೇ ಮೊಬೈಲ್ ಹಾಗೂ ಪರ್ಸನ್ನು ಎಗರಿಸಿರುವ ಸಾಧ್ಯತೆ ಇದೆ. ಮೃತದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ನ. 12ರಂದು ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕನ ವಾರಸುದಾರರಿದ್ದಲ್ಲಿ ಬೆಳ್ತಂಗಡಿ ಠಾಣೆಯನ್ನು ಸಂಪರ್ಕಿಸಬಹುದು. ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.