ಉಪ್ಪಿನಂಗಡಿ: ಗ್ರಾ.ಪಂ.ನಿಂದ ಹೂಳೆತ್ತುವ ಕಾರ್ಯ
Team Udayavani, Mar 16, 2017, 3:17 PM IST
ಉಪ್ಪಿನಂಗಡಿ : ಈ ಬಾರಿಯ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯನ್ನು ಮನಗಂಡ ಉಪ್ಪಿನಂಗಡಿ ಗ್ರಾಮ ಪಂಚಾಯತ್ ನದಿಯಲ್ಲಿ ನೀರಿನ ಒರತೆ ಇರುವಲ್ಲಿ ಹೂಳೆತ್ತುವ ಕಾಮಗಾರಿ ನಡೆಸಿತು.
ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ನದಿ ಪಾತ್ರದಲ್ಲಿ ಅಲ್ಲಲ್ಲಿ ಹಂಚಿ ಹರಿದುಹೋಗುತ್ತಾ ಆವಿಯಾಗುತ್ತಿದ್ದ ನೀರನ್ನು ನೀರಿನ ಸಂಪಿನ ಕಡೆಗೆ ಹರಿಸುವ ಮತ್ತು ನೀರಿನ ಒರತೆ ಇದ್ದು, ಹೂಳು ತುಂಬಿದ್ದ ಜಾಗದಲ್ಲಿ ಹೂಳು ತೆಗೆಯುವ ಕೆಲಸವನ್ನು ಪಂಚಾಯಿತಿ ವತಿಯಿಂದ ನಡೆಸಲಾಯಿತು.
ನೀರಿನ ದುರುಪಯೋಗ ಬೇಡ
ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಅಬ್ದುರ್ರಹ್ಮಾನ್ ಕೆ. ಮಾತನಾಡಿ, ನದಿಯಲ್ಲಿ ನೀರು ಹರಿವು ಕಡಿಮೆ ಆಗಿದ್ದು, ನದಿ ಪಾತ್ರದಲ್ಲಿ ಇರುವ ಮಂದಿ ನದಿಯಿಂದ ಅನಧಿಕೃತವಾಗಿ ಪಂಪು ಮೂಲಕ ನೀರು ತೆಗೆಯುತ್ತಿದ್ದಾರೆ. ಇದನ್ನು ನಿಲುಗಡೆಗೊಳಿಸಬೇಕು ಮತ್ತು ನದಿ ನೀರನ್ನು ಕುಡಿಯುವ ಸಲುವಾಗಿ ಮಾತ್ರ ಉಪಯೋಗಿಸುವ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಮಸ್ಯೆ ಬಾರದ ರೀತಿಯಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.