ಉಪ್ಪಿನಂಗಡಿ: ರೋಗಗಳನ್ನು ಆಹ್ವಾನಿಸುತ್ತಿದೆ ಚರಂಡಿ ನೀರು
Team Udayavani, Jun 10, 2019, 6:10 AM IST
ಪುತ್ತೂರು ತಾಲೂಕಿನ ಎರಡನೇ ಅತೀ ದೊಡ್ಡ ನಗರವಾದ ಉಪ್ಪಿನಂಗಡಿ ಪರಿಸರದ ಬೈಪಾಸ್, ರಾಜಧಾನಿ ಟವರ್ಸ್, ಎಸ್‌ಎಲ್ಎನ್ ಕಾಂಪ್ಲೆಕ್ಸ್ ಸಹಿತ ಉಪ್ಪಿನಂಗಡಿ ಮಾದರಿ ಶಾಲಾ ರಸ್ತೆ ಬಳಿಯ ಕಲುಷಿತ ನೀರು ಹರಿದು ಹೋಗುವ ಚರಂಡಿ ಹೂಳು ತುಂಬಿ ಕೊಳಚೆ ನೀರಿನ ಹರಿವಿಗೆ ತೊಡಕಾಗಿದೆ. ಇದು ಮಾರಕ ರೋಗಗಳ ಉತ್ಪತ್ತಿ ಕೇಂದ್ರವಾಗಿ ಪರಿವರ್ತನೆಗೊಂಡಿದೆ.
ಮಳೆಗಾಲ ಆರಂಭವಾಯಿತೆಂದರೆ ಸಾಂಕ್ರಾಮಿಕ ರೋಗಗಳ ಹಾವಳಿ ಜೋರಾಗುತ್ತದೆ. ಮುಂಗಾರು ಆರಂಭದ ಮೊದಲೇ ಕೆಲ ಭಾಗಗಳಲ್ಲಿ ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಇಂತಹ ರೋಗಗಳ ಹರಡುವಿಕೆಗೆ ಮೂಲ ಕಾರಣ ತಗ್ಗು ಪ್ರದೇಶಗಳಲ್ಲಿ ನಿಲ್ಲುವ ಕೊಳಚೆ ನೀರುಗಳು, ಚರಂಡಿ ನೀರು.
ಉಪ್ಪಿನಂಗಡಿ ನಗರದ ಹೃದಯ ಭಾಗದಲ್ಲೇ ದಿನನಿತ್ಯ ಸಾವಿರಾರು ಮಂದಿ ಸಂಚರಿಸುವ ರಸ್ತೆ ಪಕ್ಕದಲ್ಲೆ ಕೊಳಚೆ ನೀರು ಗಬ್ಬೆದ್ದು ನಾರುತ್ತಿದೆ. ಮಾರಕ ರೋಗಗಳಿಗೆ ಆಸ್ಪದ ನೀಡುವ ಚರಂಡಿಯ ಕೊಳಚೆ ನೀರನ್ನು ನಿಲ್ಲಲು ಬಿಡದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕಿದೆ. ಇಲ್ಲದಿದ್ದರೆ ಮಳೆಗಾಲದಲ್ಲಿ ಚರಂಡಿ ಕಟ್ಟಿಕೊಂಡು ಕೃತಕ ನೆರೆ ಉಂಟಾಗಿ, ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ, ಅಂಗಡಿ ಮಾಲಕರಿಗೆ ತೊಂದರೆ ಆಗಲಿದೆ. ಆರೋಗ್ಯ ಇಲಾಖೆ, ಸ್ಥಳಿಯಾಡಳಿತಗಳು ಇತ್ತ ಗಮನಹರಿಸುವ ಅಗತ್ಯ ಇದೆ.
– ಆದರ್ಶ್ ಶೆಟ್ಟಿ ಕಜೆಕ್ಕಾರು, ಉಪ್ಪಿನಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.