ಉಪ್ಪಿನಂಗಡಿ: ಗ್ರಾಹಕನ ಸೋಗಿನಲ್ಲಿ ಬಂದು ಪರ್ಸ್‌ ಎಗರಿಸಿದ ಕಳ್ಳ


Team Udayavani, Jan 10, 2023, 10:45 PM IST

ಉಪ್ಪಿನಂಗಡಿ: ಗ್ರಾಹಕನ ಸೋಗಿನಲ್ಲಿ ಬಂದು ಪರ್ಸ್‌ ಎಗರಿಸಿದ ಕಳ್ಳ

ಉಪ್ಪಿನಂಗಡಿ: ಗ್ರಾಹಕನ ಸೋಗಿನಲ್ಲಿ ಬಂದು ಕ್ಯಾಶ್‌ ಕೌಂಟರ್‌ನಲ್ಲಿದ್ದ 7,500 ರೂ. ಹಾಗೂ ಮತ್ತಿತರ ದಾಖಲೆಪತ್ರಗಳಿದ್ದ ಪರ್ಸ್‌ ಅನ್ನು ಎಗರಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.

ಉಪ್ಪಿನಂಗಡಿ ಬ್ಯಾಂಕ್‌ ರಸ್ತೆಯಲ್ಲಿನ ಮಡಿಕೆ ಮತ್ತಿತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗೆ ಬಂದ ಸುಮಾರು 60ರ ವಯೋಮಾನದ ವ್ಯಕ್ತಿ ಹತ್ತು ರೂ. ಮೌಲ್ಯದ ಪಾನೀಯವನ್ನು ಖರೀದಿಸಿ, ಅಂಗಡಿ ಮಾಲಕ ಅನ್ಯ ಗ್ರಾಹಕರೊಂದಿಗೆ ವ್ಯವಹರಿಸುತ್ತಿರುವ ವೇಳೆ ಅಂಗಡಿಯ ಕ್ಯಾಶ್‌ ಕೌಂಟರ್‌ ನಲ್ಲಿದ್ದ ಪರ್ಸನ್ನೇ ಎಗರಿಸಿ ಪರಾರಿಯಾಗಿದ್ದಾನೆ. ಪರ್ಸ್‌ ಎಗರಿಸಿದ ಕಳ್ಳ ಅಟೋ ರಿಕ್ಷಾವೊಂದರಲ್ಲಿ ನೆಕ್ಕಿಲಾಡಿ ವರೆಗೆ ಪ್ರಯಾಣಿಸಿ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎನ್ನಲಾಗಿದೆ.

ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿಲ್ಲವಾದರೂ, ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ ನಡೆಸುವವರ ಬಗ್ಗೆ ಎಚ್ಚರ ವಹಿಸಬೇಕಾದ ಕಾರಣಕ್ಕೆ ಉಪ್ಪಿನಂಗಡಿ ವರ್ತಕ ಸಂಘದ ಸದಸ್ಯರು ಘಟನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನು ಹರಿಯಬಿಟ್ಟಿದ್ದಾರೆ.

ಪೊಲೀಸರಿಗೆ ದೂರು ಸಲ್ಲಿಸುವುದು ವ್ಯರ್ಥ ಕಸರತ್ತು ಇಲ್ಲಿ . . . .
ಉಪ್ಪಿನಂಗಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಇತ್ತೀಚಿನ ಕೆಲ ತಿಂಗಳಲ್ಲಿ ಹಲವಾರು ಕಳ್ಳತನದ ಪ್ರಕರಣಗಳು ನಡೆದಿದ್ದರೂ ಯಾವೊಂದೂ ಪ್ರಕರಣಗಳಲ್ಲಿಯೂ ತನಿಖಾ ಪ್ರಗತಿ ಸಾಧಿಸದಿರುವ ಉಪ್ಪಿನಂಗಡಿ ಪೊಲೀಸರ ಬಗ್ಗೆ ಸಾರ್ವಜನಿಕ ವಿಶ್ವಾಸವೇ ಕುಸಿದಿದ್ದು, ಒರ್ವ ವೃತ್ತ ನಿರೀಕ್ಷಕ, ಮೂವರು ಎಸೈ ಗಳನ್ನು ಹಲವು ಎ ಎಸೈಗಳನ್ನು ಹೊಂದಿರುವ ಪೊಲೀಸ್‌ ಠಾಣೆ ಸಾರ್ವಜನಿಕರ ಹಿತಾಸಕ್ತಿಗಿಂತ ಸ್ವ ಹಿತಾಸಕ್ತಿಯನ್ನು ಕೇಂದ್ರೀಕರಿಸಿ ಕಾರ್ಯ ನಿರ್ವಹಿಸುತ್ತಿದೆ ಎಂಬ ಆಪಾದನೆಗೆ ತುತ್ತಾಗಿದೆ. ಈ ಹಿನ್ನೆಲೆಯಿಂದ ಯಾವುದೇ ಕಳವು ಪ್ರಕರಣಗಳಲ್ಲಿ ಪೊಲೀಸರಿಗೆ ದೂರು ಸಲ್ಲಿಸುವುದು ಎಂದರೆ ವ್ಯರ್ಥ ಕಸರತ್ತು ಎಂದು ಭಾವಿಸಿ ಜನತೆ ಮೌನವಾಗಿದ್ದಾರೆ. ತತ್‌ ಪರಿಣಾಮ ಉಪ್ಪಿನಂಗಡಿ ಪರಿಸರದಲ್ಲಿ ಕಳವು, ವಂಚನೆ ಪ್ರಕರಣಗಳು ಯಾವುದೇ ಅಡೆತಡೆಯಿಲ್ಲದೆ ನಡೆಯುವಂತಾಗಿದೆ.

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.