ಉಪ್ಪಿನಂಗಡಿ: ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
Team Udayavani, Dec 31, 2022, 11:48 PM IST
ಉಪ್ಪಿನಂಗಡಿ: ಶಾಲಾ ವಾರ್ಷಿಕೋತ್ಸವದ ಕಾರ್ಯಕ್ರಮ ವೀಕ್ಷಿಸಲೆಂದು ಹೋಗಿದ್ದ 14ರ ಹರೆಯದ ಬಾಲಕಿಯನ್ನು ಮನೆಗೆ ಕರೆದೊಯ್ಯುವ ಭರವಸೆ ನೀಡಿ ಅತ್ಯಾಚಾರವೆಸಗಿದ ಪ್ರಕರಣ ನೆಲ್ಯಾಡಿ ಗ್ರಾಮದ ಪುಚ್ಚೇರಿ ಎಂಬಲ್ಲಿ ನಡೆದಿದ್ದು, ಕೃತ್ಯಕ್ಕೆ ಸಂಬಂಧಿಸಿ ಆರೋಪಿ ಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಡಿ 29ರಂದು ಶಾಲಾ ವಾರ್ಷಿ ಕೋತ್ಸವದ ಅಂಗವಾಗಿ ಹೆತ್ತವರು ಹಾಗೂ ಅಜ್ಜ, ತಂಗಿಯ ಜತೆ ಶಾಲೆಗೆ ಹೋಗಿದ್ದ ಬಾಲಕಿ ಕಾರ್ಯಕ್ರಮ ಪೂರ್ಣ ನೋಡಿ ಬರುವೆನೆಂದು ತಿಳಿಸಿದ ಕಾರಣಕ್ಕೆ ಹೆತ್ತವರು ಮನೆಯತ್ತ ಹೋಗಿದ್ದರು. ಇತ್ತ ಆಕೆಯ ಮನೆ ಸಮೀಪದ ನಿವಾಸಿ ಚೇತನ್ ಎಂಬಾತ ಶಾಲಾ ಕಾರ್ಯಕ್ರಮ ಮುಗಿದ ಬಳಿಕ ತಾನು ಮನೆಗೆ ಕರೆದೊಯ್ಯುವೆನೆಂದು ನಂಬಿಸಿ ಆಕೆಯನ್ನು ಬೈಕ್ನಲ್ಲಿ ಕುಳ್ಳಿರಿಸಿ ಮನೆಗೆ ಕರೆದೊಯ್ಯುವ ನೆಪದಲ್ಲಿ ಗುಡ್ಡವೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುದಲ್ಲದೆ, ಕೃತ್ಯವೆಸಗಿದ ಬಳಿಕ ಆಕೆಯನ್ನು ಮದ್ಯ ರಾತ್ರಿ ಕಾಡಿನಲ್ಲೇ ಬಿಟ್ಟು ಹೋಗಿರುತ್ತಾನೆ. ಈ ಸಂಬಂಧ ಬೆಳಗಾಗುವ ತನಕ ಗುಡ್ಡದಲ್ಲೇ ಇದ್ದ ಬಾಲಕಿಯನ್ನು ಹೆತ್ತವರು ಹುಡುಕಿ ವಿಚಾರಿಸಿದಾಗ ಆರೋಪಿಯ ಕೃತ್ಯವನ್ನು ವಿವರಿಸಿರುತ್ತಾಳೆ.
ಅತ್ಯಾಚಾರಕ್ಕೀಡಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕಿ ನೀಡಿದ ದೂರಿನಂತೆ ಪೋಕ್ಸೋ ಪ್ರಕರಣ ದಾಖಲಿಸಿದ ಉಪ್ಪಿನಂಗಡಿ ಪೊಲೀಸರು ಶನಿವಾರದಂದು ಆರೋಪಿ ಚೇತನ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.