ಸಾರಿಗೆ ನಿಗಮದ ಬಸ್ ನಿಲ್ದಾಣಕ್ಕೆ ಬೇಡಿಕೆ
Team Udayavani, Feb 20, 2019, 6:03 AM IST
ಉಪ್ಪಿನಂಗಡಿ : ತೀರ್ಥ ಕ್ಷೇತ್ರಗಳಿಗೆ ಹಾಗೂ ರಾಜ್ಯ ರಾಜಧಾನಿಗೆ ಸಂಪರ್ಕ ಕೇಂದ್ರವಾದ ಪುತ್ತೂರು ತಾಲೂಕಿನ ಉಪ್ಪಿನಂಗಡಿಗೆ ಸರಕಾರಿ ಬಸ್ಸು ನಿಲ್ದಾಣ ಒದಗಿಸುವಲ್ಲಿ ಸಾರಿಗೆ ನಿಗಮ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎನ್ನುವ ಆರೋಪ ವ್ಯಕ್ತವಾಗಿದೆ.
ಧರ್ಮಸ್ಥಳ, ಸುಬ್ರಹ್ಮಣ್ಯ ಸೌತಡ್ಕ ಕ್ಷೇತ್ರಗಳಲ್ಲದೆ ಬೆಂಗಳೂರು, ಮಂಗಳೂರು ನಗರಗಳಿಗೂ ಉಪ್ಪಿನಂಗಡಿ ಸಂಪರ್ಕ ಕೊಂಡಿಯಾಗಿದೆ. ಗತಕಾಲದಿಂದಲೂ ಪಂಚಾಯತ್ ವ್ಯಾಪ್ತಿಯ ಬಸ್ ನಿಲ್ದಾಣವನ್ನೇ ಸಾರಿಗೆ ಸಂಸ್ಥೆ ಅವಲಂಬಿಸಿದೆ. ಸ್ವಂತ ಬಸ್ ನಿಲ್ದಾಣ ನಿರ್ಮಿಸುವಲ್ಲಿ ನಿಗಮ ಆಸಕ್ತಿ ವಹಿಸಿಲ್ಲ. ದಿನನಿತ್ಯ ಕೆಎಸ್ಸಾರ್ಟಿಸಿಯ 400ಕ್ಕೂ ಅಧಿಕ ಬಸ್ಸುಗಳು ಇದೇ ನಿಲ್ದಾಣದಲ್ಲಿ ಆಶ್ರಯ ಪಡೆಯುತ್ತಿವೆ. ಖಾಸಗಿ ಬಸ್‌ಗಳ ಜತೆಗೆ ಪೈಪೋಟಿ ನಡೆಸುತ್ತಿವೆ. ಇಲ್ಲಿ ಬಸ್ ನಿಲುಗಡೆಗೆ ಸಾಕಷ್ಟು ಸ್ಥಳಾವಕಾಶವಿಲ್ಲದೆ ಸಮಸ್ಯೆಯಾಗುತ್ತಿದೆ. ಈ ಕುರಿತು ಸ್ಥಳೀಯ ಸಾರಿಗೆ ನಿಯಂತ್ರಣಧಿಕಾರಿಗಳೇ ಹಿರಿಯ ಅಧಿಕಾರಿಗೆ ಪತ್ರ ಬರೆದಿದ್ದಾರೆ.
ಸ್ಥಳಾವಕಾಶ ಕೊರತೆ
ನಿಲ್ದಾಣದಲ್ಲಿ ಬಸ್ಸುಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿ ಪಂಚಾಯತ್ ಆಡಳಿತ ಸಮಿತಿಯ ಸದಸ್ಯರು ಹಾಗೂ ಅಧ್ಯಕ್ಷರು ಸಾರಿಗೆ ಸಚಿವರಿಗೆ ಒತ್ತಡ ಹೇರಲು ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ. ನಿಲ್ದಾಣದಲ್ಲಿ ಸ್ಥಳಾವಕಾಶ ಕೊರತೆಯಿಂದ ಬೆಂಗಳೂರು, ತಿರುಪತಿ, ಚೆನ್ನೈಗೆ ತೆರಳುವ ಬಸ್‌ಗಳು ಹೆದ್ದಾರಿಯಲ್ಲೆ ನೇರ ಚಲಿಸುವಂತಾಗಿದೆ. ಇನ್ನಾದರೂ ಸಾರಿಗೆ ನಿಗಮ ಎಚ್ಚೆತ್ತುಕೊಳ್ಳಬೇಕಾಗಿದೆ. ಸಾರಿಗೆ ಸಂಸ್ಥೆಯ ಬಸ್‌ಗಳ ಸಂಖ್ಯೆ ಹೆಚ್ಚುತ್ತಿದ್ದರೂ ಖಾಸಗಿಯವರಿಗೆ ಸ್ಪರ್ಧೆ ನೀಡುತ್ತಾರೆ ವಿನಾ ಸ್ವಂತ ನಿಲ್ದಾಣಕ್ಕಾಗಿ ನಿವೇಶನ ಹುಡುಕುವಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಸ್ಥಳೀಯರಾದ ಇಸ್ಮಾಯಿಲ್ ತಂಙಳ್ ಲಕ್ಷ್ಮೀ ನಗರ ಹೇಳಿದ್ದಾರೆ.
ಸಚಿವರಿಗೆ ಪತ್ರ
ಬಸ್ ನಿಲ್ದಾಣದ ಸಮಸ್ಯೆ ಇರುವುದು ಮನವರಿಕೆಯಾಗಿದೆ. ವಿಧಾನ ಸಭೆ ಚುನಾವಣೆಗೂ ಮೊದಲೇ ಪ್ರತ್ಯೇಕ ಸಾರಿಗೆ ಬಸ್ ನಿಲ್ದಾಣ ಕೋರಿಕೆಯ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿವರಣೆ ಕೇಳುತ್ತೇನೆ.
– ಸಂಜೀವ ಮಠಂದೂರು
ಶಾಸಕರು, ಪುತ್ತೂರು
ಪಾಲನೆಯಾಗುತ್ತಿಲ್ಲ
ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ನಿಲ್ದಾಣದಲ್ಲಿ ಸ್ಥಳಾವಕಾಶ ಇಲ್ಲದೆ ಹೆದ್ದಾರಿಯಲ್ಲೇ ಸಂಚರಿಸುವಂತಾಗಿದೆ. ಈ ಕುರಿತು ಕರ್ನಾಟಕ ಸಾರಿಗೆ ಸಂಸ್ಥೆ ವರಿಷ್ಠಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಗಿದ್ದು, ಎಲ್ಲ ಬಸ್ ನಿಲ್ದಾಣಕ್ಕೆ ಬಂದು ಹೋಗುವಂತೆ ಆದೇಶ ಹೊರಡಿಸಿದ್ದಾರೆ. ಆದರೆ ಪಾಲನೆಯಾಗುತ್ತಿಲ್ಲ.
– ಜತೀಂದ್ರ ಶೆಟ್ಟಿ
ಅಧ್ಯಕ್ಷರು, ನಮ್ಮೂರು ನೆಕ್ಕಿಲಾಡಿ ಸಂಘಟನೆ
ಎಂ.ಎಸ್. ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.