Uppinangady ಲಾವತಡ್ಕ: ಅಕ್ರಮ ಸಾಗಾಟದ ಮರ ವಶ
Team Udayavani, Oct 14, 2023, 9:56 PM IST
ಉಪ್ಪಿನಂಗಡಿ: ದಾಖಲೆ ಪತ್ರಗಳಿಲ್ಲದೆ ಅಕ್ರಮ ಮರಮುಟ್ಟು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಹಚ್ಚಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯಾ ಗ್ರಾಮದ ಲಾವತಡ್ಕ ಎಂಬಲ್ಲಿ ವಿವಿಧ ಜಾತಿಯ ಮರಗಳನ್ನು ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಖಚಿತ ವರ್ತಮಾನದ ಮೇರೆಗೆ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಎಂದು ತಿಳಿದು ಬಂತು. ಈ ಸಂದರ್ಭ ಲಾರಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಶಾಹುಲ್ ಹಮೀದ್ ಪರಾರಿಯಾಗಿದ್ದಾನೆ.
ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ ಕೆ.ಕೆ. ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ, ಅರಣ್ಯ ಪಾಲಕ ನಿಂಗಪ್ಪ ಅವಾರಿ ಮತ್ತು ಸುನಿಲ್ ನಾಯ್ಕ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.