ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ
Team Udayavani, Jul 7, 2022, 11:00 AM IST
ಪಣಂಬೂರು: ರಾಜ್ಯ ಸರಕಾರದ ನೂತನ ಗೋ ಹತ್ಯೆ ಕಾಯಿದೆಯಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಖಡಕ್ ಆದೇಶ ನೀಡಿದ್ದಾರೆ.
ಇನ್ನು ಮುಂದೆ ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ ಕಠಿಣ ಅಸ್ತ್ರಗಳ ಬಳಕೆ ಮಾಡುತ್ತೇವೆ. ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಂದಾಯ ಇಲಾಖೆ ತಕ್ಷಣ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ: ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ
ಹೈನುಗಾರಿಕೆ ನಡೆಸಿ ಜೀವನ ನಡೆಸುವವರ ಹಟ್ಟಿಯಿಂದ ದನ ಕದಿಯುದನ್ನು, ಬೀಡಾಡಿ ದನಗಳ ಕದ್ದು ಹತ್ಯೆ ಮಾಡುವುದು ಯಾವುದೇ ಕಾರಣಕ್ಕೂ ಸಹಿಸಲಾಗದು. ಬಡವರ, ರೈತರ ಅನ್ನವನ್ನು ಕಸಿಯುವ ಕೆಲಸ ಯಾರೂ ಮಾಡಬಾರದು. ಆರೋಪ ರುಜುವಾತಾದರೆ ಅಂತಹವ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.