ಕೃಷಿಯಲ್ಲಿನ ಅವಕಾಶ ಬಳಸಿಕೊಳ್ಳಿ: ಅಭಯಚಂದ್ರ


Team Udayavani, Oct 6, 2017, 6:35 AM IST

ABHAYACHANDRA.jpg

ಮೂಡಬಿದಿರೆ: ಕರ್ನಾಟಕ ಸರಕಾರದ ಕೃಷಿ ಬೆಲೆ ಆಯೋಗ, ದಕ್ಷಿಣಕನ್ನಡ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ಮತ್ತು ಮಣಿಪಾಲ ಕೆ.ಎಂ.ಸಿ. ಇವುಗಳ ಸಹಯೋಗದೊಂದಿಗೆ ರೈತರ ಆದಾಯ ಮತ್ತು ಕಲ್ಯಾಣಾಭಿವೃದ್ಧಿಗೆ ಪ್ರಾಯೋಗಿಕವಾಗಿ ಆಯ್ಕೆಯಾಗಿರುವ ದರೆಗುಡ್ಡೆ ಗ್ರಾಮದಲ್ಲಿ ಯೋಜನೆ ಅನುಷ್ಠಾನಕ್ಕಾಗಿ ತೆರೆಯಲಾದ ಕಚೇರಿಯನ್ನು ಶಾಸಕ ಅಭಯಚಂದ್ರ ಜೈನ್‌ ಸೋಮವಾರ ಉದ್ಘಾಟಿಸಿದರು. 

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ತಲಾ ಒಂದು ಗ್ರಾಮದಂತೆ ದ.ಕ. ಜಿಲ್ಲೆಯಲ್ಲಿ ದರೆಗುಡ್ಡೆ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. 

ಈ ಸಂದರ್ಭ ಮಾತನಾಡಿದ ಶಾಸಕ ಜೈನ್‌, ರೈತರು ಹಳ್ಳಿಯಿಂದ ಪೇಟೆಗೆ ವಲಸೆ ಹೋಗಬಾರದು. ಕೃಷಿಯಲ್ಲಿನ ಅವಕಾಶ ಗಳನ್ನು ಬಳಸಿಕೊಂಡು ತಮ್ಮ ಆದಾಯ ವೃದ್ಧಿಸಬೇಕು. ಆಧುನಿಕ ಕೃಷಿ ಪದ್ಧತಿಗೆ ಹೊಂದಿಕೊಳ್ಳಬೇಕು. ಆಧುನಿಕ ಕೃಷಿಗೆ ಸರಕಾರದಿಂದಲೂ ವಿವಿಧ ರೀತಿಯ ಪ್ರೋತ್ಸಾಹ ಯೋಜನೆಗಳಿವೆ. ರೈತರು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕರ್ನಾಟಕ ಕೃಷಿ  ಬೆಲೆ ಆಯೋಗದ ಅಧ್ಯಕ್ಷ ಡಾ. ಟಿ.ಎಸ್‌. ಪ್ರಕಾಶ್‌ ಕಮ್ಮರಡಿ ಮಾತನಾಡಿ ರಾಜ್ಯದ ಶೇ. 50 ರಷ್ಟು ಮಂದಿ ಕೃಷಿ ಕ್ಷೇತ್ರದಿಂದ ವಲಸೆ ಹೋಗುತ್ತಿರುವುದನ್ನು ತಡೆಗಟ್ಟಿ, ಐದು ವರ್ಷಗಳಲ್ಲಿ ಕೃಷಿಕರ ಆದಾಯ ದ್ವಿಗುಣಗೊಳಿಸುವುದು ಪ್ರಧಾನಿ ಮೋದಿಯವರ ಯೋಜನೆ ಯಾಗಿದೆ. ಇದನ್ನು ಉತ್ತೇಜಿಸಲು ರಾಜ್ಯ ಸರಕಾರವೂ ಕೈಜೋಡಿಸಿದೆ. ಈ ಯೋಜನೆಯ ಮೂಲಕ ಹಳ್ಳಿಗಳಿಗೆ ಕೃಷಿ ತಂತ್ರಜ್ಞಾನವನ್ನು ಪರಿಚಯಿಸುವುದು, ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸು ವುದು ಸಹಿತ ಹಲವಾರು ಕ್ರಮಗಳನ್ನು ಕೈಗೊಂಡಿದ್ದು ಇಲಾಖೆಯು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದರು.

ಹಿರಿಯ ಕೃಷಿ ತಜ್ಞ ಡಾ.ಎಲ್‌.ಸಿ. ಸೋನ್ಸ್‌, ಬೀದರ್‌ ಕೃಷಿ ವಿ.ವಿ.ಯ ಸಹಾಯಕ ನಿರ್ದೇಶಕ ಡಾ.ಎಸ್‌.ಎಂ.ಶಿವಕುಮಾರ್‌, ಮೀನುಗಾರಿಕಾ ವಿಶ್ವ ವಿದ್ಯಾಲಯದ ಸಹಾಯಕ ನಿರ್ದೇಶಕ ಡಾ.ಎಂ.ಎಂ. ವೇಣುಗೋಪಾಲ್‌, ಕೆ.ಎಂ.ಸಿ. ಆಸ್ಪತ್ರೆಯ ಡಾ. ವಿನಿತಾ ಭಟ್‌, ಶಂಕರ ಚಿಕ್ಕಣ್ಣನವರ್‌, ತಾ.ಪಂ. ಸದಸ್ಯ ಪ್ರಶಾಂತ್‌ ಕುಮಾರ್‌, ದರೆಗುಡ್ಡೆ ಗ್ರಾ.ಪಂ. ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ಚೌಟ ಮತ್ತಿತರರು ಉಪಸ್ಥಿತರಿದ್ದರು.
ಕೃಷಿ ಅಧಿಕಾರಿ ಶಿವಕುಮಾರ್‌ ಮಗದ ಸ್ವಾಗತಿಸಿ ಪ್ರಸ್ತಾವನೆಗೈದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.