ಅವಕಾಶ ಸದ್ಬಳಕೆ ಮಾಡಿ ಯಶಸ್ಸು ಪಡೆಯಿರಿ: ಎಸ್. ಸಚ್ಚಿದಾನಂದ
ಫಾ| ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜು ಪದವಿ ಪ್ರದಾನ
Team Udayavani, Apr 9, 2019, 6:00 AM IST
ಮಹಾನಗರ: ಭಾರತದಲ್ಲಿ ಹೋಮಿಯೋಪಥಿ ವೈದ್ಯರಿಗೆ ಬೇಡಿಕೆ ಹೆಚ್ಚುತ್ತಿದೆ. ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಯಶಸ್ಸು ಪಡೆಯಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ| ಎಸ್. ಸಚ್ಚಿದಾನಂದ ಹೇಳಿದರು.
ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಕಲಿಕೆ ನಿರಂತರವಾಗಿದ್ದು,ಸ್ಪರ್ಧಾ ತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರತಿದಿನದ ಆಗುಹೋಗುಗಳನ್ನು ತಿಳಿದುಕೊಂಡಿರಬೇಕು.ವೈದ್ಯಕೀಯ ಕ್ಷೇತ್ರದಲ್ಲಿ ಪ್ರತಿದಿನದ ಕಲಿಕೆ ತೀರಾ ಆವಶ್ಯವೂ ಆಗಿದೆ. ವೈದ್ಯರು ತಮ್ಮಿಂದ ಚಿಕಿತ್ಸೆ ಪಡೆದುಕೊಳ್ಳುವ ರೋಗಿಗಳಿಂದಲೂ ಹೆಚ್ಚಾಗಿ ನಿರಂತರವಾಗಿ ಕಲಿಯುತ್ತಿರಬೇಕು ಎಂದವರು ಅಭಿಪ್ರಾಯಪಟ್ಟರು.
ಸಾಮರ್ಥ್ಯದ ಬಳಕೆಯಾಗಲಿ
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ, ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಅಧ್ಯಕ್ಷ ವಂ| ಡಾ| ಪೀಟರ್ ಪಾವ್ ಸಲ್ಡಾನ್ಹಾ ಮಾತನಾಡಿ, ದೇವರು ನಮಗೆ ಶಕ್ತಿ ಮತ್ತು ಸಾಮರ್ಥ್ಯವನ್ನು ಕರುಣಿಸಿದ್ದಾನೆ. ಜ್ಞಾನದ ಹಸಿವು ನೀಗಿಸಿ ಜೀವನದಲ್ಲಿ ಯಶಸ್ಸಿನ ಮೈಲಿಗಲ್ಲು ಸ್ಥಾಪಿಸಲು ಈ ಶಕ್ತಿ ಮತ್ತು ಸಾಮರ್ಥ್ಯದ ಬಳಕೆಯಾಗಬೇಕು. ಹೋಮಿಯೋಪಥಿ ಕ್ಷೇತ್ರ ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಮನ್ನಣೆ ಪಡೆಯುತ್ತಿರುವುದರಿಂದ ವೈದ್ಯರಿಗೆ ಅವಕಾಶಗಳು ಹೆಚ್ಚಿವೆ ಎಂದರು.
ಆಡಳಿತಾಧಿಕಾರಿ ವಂ| ವಿನ್ಸೆಂಟ್ ಸಲ್ಡಾನ್ಹಾ, ವಂ| ಸಿಲ್ವೆಸ್ಟರ್ ವಿ. ಲೋಬೋ, ಕಾಲೇಜು ಉಪ ಪ್ರಾಂಶುಪಾಲ ಡಾ| ಇ.ಎಸ್.ಜೆ. ಪ್ರಭು ಕಿರಣ್, ಡಾ| ಗಿರೀಶ್ ನಾವಡ, ಕಾರ್ಯಕ್ರಮ ಸಂಯೋಜಕಿ ಡಾ| ವಿಲ್ಮಾ ಡಿ’ಸೋಜಾ ಉಪಸ್ಥಿತರಿದ್ದರು.
ವಂ| ರಿ ಚರ್ಡ್ ಎ. ಕುವೆಲ್ಲೋ ಸ್ವಾಗತಿಸಿ ದರು. ಪ್ರಾಂಶುಪಾಲ ಡಾ| ಶಿವಪ್ರಸಾದ್ ಕೆ. ವಾರ್ಷಿಕ ವರದಿ ಮಂಡಿಸಿದರು.
ಸಮ್ಮಾನ
73 ಮಂದಿ ಹೋಮಿಯೋಪಥಿ ಪದವೀಧರರು, 27 ಮಂದಿ ಹೋಮಿಯೋಪಥಿ ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನಿಸಲಾಯಿತು. ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ನಡೆಸಿದ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿ ಪಡೆದ, ವಿ.ವಿ. ಘೋಷಿಸುವ ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಮುಖ್ಯ ಅತಿಥಿ ಡಾ| ಎಸ್. ಸಚ್ಚಿದಾನಂದ ಅವರನ್ನು ಸಮ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.