ನೇತ್ರಾವತಿ-ಕುಮಾರಧಾರಾ ನದಿ ಸಂಗಮದಲ್ಲಿ ವಾಜಪೇಯಿ ಚಿತಾಭಸ್ಮ ವಿಸರ್ಜನೆ

Team Udayavani, Aug 26, 2018, 11:48 AM IST

2508upg11.jpg

ಉಪ್ಪಿನಂಗಡಿ : ಮಾಜಿ ಪ್ರಧಾನಿ ದಿ| ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿ ಬಿಜೆಪಿ ಮುಂದಾಳುಗಳಾದ ಸಿ.ಟಿ. ರವಿ ಮತ್ತು ಶೋಭಾ ಕರಂದ್ಲಾಜೆ ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ ವೇದಮಂತ್ರ ಘೋಷದೊಂದಿಗೆ ಶನಿವಾರ ಸಂಜೆ ವಿಸರ್ಜಿಸಲಾಯಿತು.

ಶನಿವಾರ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಿದ ಅಟಲ್‌ ಚಿತಾಭಸ್ಮದ ಮೆರವಣಿಗೆಯು ಸಂಜೆ ಉಪ್ಪಿನಂಗಡಿಗೆ ಆಗಮಿಸಿತು. ಬಳಿಕ ಭಜನೆ ಸಹಿತ ಮೆರವಣಿಗೆಯಲ್ಲಿ ಚಿತಾಭಸ್ಮವನ್ನು ನದಿ ಸಂಗಮ ತಟಕ್ಕೆ ಕೊಂಡೊಯ್ಯಲಾಯಿತು.

ದೇಗುಲದ ಅರ್ಚಕ ಪದ್ಮನಾಭ ಕೆ. ಹಾಗೂ ನರಸಿಂಹ ಭಟ್‌ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಶೋಭಾ ಕರಂದ್ಲಾಜೆ ಅವರು ಚಿತಾ ಭಸ್ಮ ವಿಸರ್ಜಿಸಿದರು. ಸಂಸದ ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು, ಶಾಸಕರಾದ ಎಸ್‌. ಅಂಗಾರ, ಹರೀಶ್‌ ಪೂಂಜಾ, ಭರತ್‌ ಶೆಟ್ಟಿ, ರಾಜೇಶ್‌ ನಾಯ್ಕ ಉಳಿಪಾಡಿಗುತ್ತು, ವೇದವ್ಯಾಸ ಕಾಮತ್‌, ಮುಂದಾಳುಗಳಾದ ಮೀನಾಕ್ಷಿ ಶಾಂತಿಗೋಡು, ಆಶಾ ತಿಮ್ಮಪ್ಪ ಗೌಡ, ಪ್ರತಾಪ ಸಿಂಹ ನಾಯಕ್‌, ಮಲ್ಲಿಕಾ ಪ್ರಸಾದ್‌, ವಿಶ್ವೇಶ್ವರ್‌ ಭಟ್‌, ಅಬ್ರಾಹಾಂ ವರ್ಗಿàಸ್‌, ಕೇಶವ ಗೌಡ ಬಜತ್ತೂರು, ಚನಿಲ ತಿಮ್ಮಪ್ಪ ಶೆಟ್ಟಿ, ಅರುಣ್‌ ಕುಮಾರ್‌ ಪುತ್ತಿಲ, ಸುರೇಶ್‌ ಅತ್ರಮಜಲು, ಸುನಿಲ್‌ ದಡ್ಡು ಮತ್ತಿತರು ಉಪಸ್ಥಿತರಿದ್ದರು. ಅಸ್ತಿ ವಿಸರ್ಜನೆಗೆ ಅಗತ್ಯ ಸೌಕರ್ಯಗಳನ್ನು ಉಪ್ಪಿನಂಗಡಿ ದೇಗುಲದ ವ್ಯವಸ್ಥಾಪನ ಸಮಿತಿ ಒದಗಿಸಿತ್ತು.

ಪುಷ್ಪ ನಮನ
ವಾಜಪೇಯಿ ಅವರ ಚಿತಾಭಸ್ಮಕ್ಕೆ ಕುಂದಾಪುರದಲ್ಲಿ, ಉಡುಪಿಯ ಚಿತ್ತರಂಜನ್‌ ಸರ್ಕಲ್‌ನಲ್ಲಿ, ಕಾಪುವಿನ ವಾಜಪೇಯಿ ಕಟ್ಟೆಯಲ್ಲಿ, ಸುರತ್ಕಲ್‌ನಲ್ಲಿ, ಮಂಗಳೂರಿನ ಕದ್ರಿ ಶ್ರೀ ಗೋರಕ್ಷನಾಥ್‌ ಜ್ಞಾನ ಮಂದಿರ ಮುಂಭಾಗದಲ್ಲಿ ಪುಷ್ಪಾರ್ಚನೆ ಮಾಡಲಾಯಿತು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.