ವಲ್ಲಭ ಭಾಯಿ ಪಟೇಲ್ ಜನ್ಮದಿನ ಏಕತಾ ಓಟ
Team Udayavani, Nov 1, 2018, 10:47 AM IST
ಉಳ್ಳಾಲ: ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜನ್ಮ ದಿನದ ಅಂಗವಾಗಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಬುಧವಾರ ತೊಕ್ಕೊಟ್ಟು ಬಸ್ ನಿಲ್ದಾಣದಿಂದ ಉಳ್ಳಾಲದ ವೀರರಾಣಿ ಅಬ್ಬಕ್ಕ ಸರ್ಕಲ್ ವರೆಗೆ ಏಕತಾ ಓಟ ಜರಗಿತು. ಹಿರಿಯ ಮುಖಂಡ ರಾಜಾರಾಮ ಭಟ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರಿಗೆ ಧ್ವಜವನ್ನು ಹಸ್ತಾಂತರಿಸುವ ಮೂಲಕ ಏಕತಾ ಓಟಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ರಾಜಾರಾಮ ಭಟ್ ಅವರು, ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ದೇಶ ಕಂಡ ಅಪ್ರತಿಮ ನಾಯಕರಾಗಿದ್ದಾರೆ. ಅಂದಿನ ಕಾಲದಲ್ಲಿ ರಾಷ್ಟ್ರದೆಲ್ಲೆಡೆ ಹರಡಿಕೊಂಡಿದ್ದ ಕೋಮುದ್ವೇಷವನ್ನು ನಿಯಂತ್ರಣಗೊಳಿಸಿದ್ದಲ್ಲದೆ, ಸುಮಾರು 200ಕ್ಕೂ ಹೆಚ್ಚು ಸ್ಥಳೀಯಾಡಳಿತವನ್ನು ಒಟ್ಟುಗೂಡಿಸಿ ಏಕತೆ ಮೂಡಿಸಿದ ನಾಯಕರಾಗಿದ್ದಾರೆ. ಆದರೆ ಇಂತಹ ಮಹಾನ್ ನಾಯಕನ ಹೆಸರನ್ನು ಕೆಲವು ಸರಕಾರಗಳು ಅಳಿಸುವಂತಹ ಕೆಲಸ ಮಾಡಿತ್ತು. ಆದರೆ ಮೋದಿ ನೇತೃತ್ವದ ಬಿಜೆಪಿ ಸರಕಾರವು ಸರ್ದಾರ್ ವಲ್ಲಭ ಭಾಯಿ ಅವರ ನೆನಪನ್ನು ಮತ್ತು ಅವರ ಕೊಡುಗೆಯನ್ನು ಸ್ಮರಿಸುವಂತಹ ಕಾರ್ಯವನ್ನು ಮಾಡುತ್ತಿದೆ ಎಂದರು.
ಕಾಶ್ಮೀರ ವಿಲೀನಕ್ಕೆ ಪಟೇಲರ ಪಾತ್ರ ಹಿರಿದು
ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ, ಕಾಶ್ಮೀರವನ್ನು ಭಾರತಕ್ಕೆ ಸೇರ್ಪಡೆಗೊಳಿಸುವಲ್ಲಿ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಪಾತ್ರ ಮಹತ್ವ ಪೂರ್ಣವಾದುದು. ಪ್ರಧಾನಿ ನರೇಂದ್ರ ಮೋದಿಯವರು ಪಟೇಲ್ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವಂತಹ ಕಾರ್ಯವನ್ನು ಮಾಡುತ್ತಿದ್ದಾರೆ ಎಂದರು. ಏಕತಾ ಓಟದ ನೇತೃತ್ವವನ್ನು ವಹಿಸಿದ್ದ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್ ಅವರು ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕಠಿನ ನಿರ್ಧಾರವು ಇಂದು ನಮ್ಮ ದೇಶವನ್ನು ಅಖಂಡವಾಗಿ ಉಳಿಯುವಂತೆ ಮಾಡಿದೆ ಎಂದರು.
ಇಂತಹ ಮಹಾನ್ ಸಾಧಕನ ಬೃಹತ್ ಪ್ರತಿಮೆಯು ಕೂಡಾ ಮೋದಿಯವರ ನೇತೃತ್ವದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಇದರ ಅಂಗವಾಗಿ ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ಏಕತಾ ಓಟಕ್ಕೆ ತೊಕ್ಕೊಟ್ಟುವಿನಲ್ಲಿ ಬೆಂಬಲವಾಗಿ ನೂರಾರು ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಹೇಳಿದರು. ಬಿಜೆಪಿ ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಚಂದ್ರ ಶೇಖರ್ ಉಚ್ಚಿಲ್, ಸೀತಾರಾಂ ಬಂಗೇರ, ಮೋಹನ್ ರಾಜ್, ಮನೋಜ್ ಆಚಾರ್ಯ, ಜೀವನ್ ತೊಕ್ಕೊಟ್ಟು, ಚಂದ್ರಹಾಸ್ ಅಡ್ಯಂತಾಯ, ನವೀನ್ ಪಾದಲ್ಪಾಡಿ, ಧನಲಕ್ಷ್ಮೀ ಗಟ್ಟಿ, ಯಶವಂತ್ ಅಮೀನ್, ಲಲಿತಾ ಸುಂದರ್, ರವಿಶಂಕರ್ ಸೋಮೇಶ್ವರ, ಯಶವಂತ ದೇರಾಜೆ, ಹರಿಯಪ್ಪ ಸಾಲ್ಯಾನ್, ಹೇಮಂತ್ ಶೆಟ್ಟಿ ಉಪಸ್ಥಿತರಿದ್ದರು. ತೊಕ್ಕೊಟ್ಟಿನಿಂದ ಆರಂಭವಾದ ಏಕತಾ ಓಟವು ಉಳ್ಳಾಲದ ರಾಣಿ ಅಬ್ಬಕ್ಕ ಸರ್ಕಲ್‌ವರೆಗೆ ನಡೆಯಿತು. ಬಳಿಕ ರಾಣಿ ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.