ಮೇಲ್ದರ್ಜೆಗೇರಿಸುವ ಕಾಮಗಾರಿ ನನೆಗುದಿಗೆ
Team Udayavani, Dec 5, 2018, 11:50 AM IST
ಮಹಾನಗರ: ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ ಸೇರಿದಂತೆ ಇತರ ಸಮಸ್ಯೆಗಳ ಹಿನ್ನೆಲೆಯಲ್ಲಿ ಎರಡು ವರ್ಷಗಳ ಹಿಂದೆ ಆರಂಭ ಗೊಂಡಿದ್ದ ವಾಮಂಜೂರಿನ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆ ಗೇರಿಸುವ ಕಾಮಗಾರಿ ನನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಆರ್‌ಟಿಒ ಸಮಸ್ಯೆ ಬಹೆಗರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗೆ ಮನವಿ ನೀಡಲು ಸಿದ್ಧತೆ ನಡೆಸಿದೆ.
76 ಲಕ್ಷ ರೂ. ಬಿಡುಗಡೆ
ವಾಹನ ಚಾಲನಾ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕಟ್ಟಡ, ಶೌಚಾಲಯ ಸಹಿತ ಅಗತ್ಯ ಮೂಲ ಸೌಲಭ್ಯಗಳು ಇಲ್ಲವಾಗಿತ್ತು. ಈ ನಿಟ್ಟಿನಲ್ಲಿ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಸರಕಾರದಿಂದ 76 ಲಕ್ಷ ರೂ. ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿ ಕಟ್ಟಡ, ಬರುವವರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ, ಶೌಚಾಲಯ, ಕೇಂದ್ರದ ನಾಲ್ಕೂ ಬದಿಗಳ ಕಾಂಪೌಂಡ್ ನಿರ್ಮಿಸುವ ಯೋಜನೆ ರೂಪಿಸಲಾಗಿತ್ತು. ಎರಡು ವರ್ಷಗಳಲ್ಲಿ ಕಟ್ಟಡ, ಶೌಚಾಲಯ ಕಾಮಗಾರಿ ನಡೆದಿದೆ. ಆದರೆ ವಾಹನ ಚಾಲನಾ ಪರೀಕ್ಷಾ ಕೇಂದ್ರಕ್ಕೆ ಇಂಟರ್ ಅಳವಡಿಕೆ ಕಾಮಗಾರಿ, ಆಸನದ ವ್ಯವಸ್ಥೆ, ಕಾಂಪೌಂಡ್ ನಿರ್ಮಿಸುವ ಯೋಜನೆ ಮಾತ್ರ ಇನ್ನೂ ಆರಂಭಗೊಂಡಿಲ್ಲ.
ಅವಧಿ ಮುಗಿದರೂ ಕಾಮಗಾರಿ ಆರಂಭವಾಗಿಲ್ಲ
ಕಾಮಗಾರಿ ಅರ್ಧಕ್ಕೆ ನಿಂತಿರುವ ಬಗ್ಗೆ ಆರ್‌ಟಿಒ ಅವರು, ಟೆಂಡರ್ ವಹಿಸಿಕೊಂಡ ನಿರ್ಮಿತಿ ಕೇಂದ್ರವನ್ನು ಕೇಳಿದರೆ, ಟೆಂಡರ್ ಪ್ರಕ್ರಿಯೆ, ಅನುದಾನ ಬಿಡುಗಡೆಯಲ್ಲಿ ಸಮಸ್ಯೆಗಳಾಗಿರುವ ಹಿನ್ನೆಲೆಯಲ್ಲಿ ಕಾಮಗಾರಿ ಆಗಿಲ್ಲ. ಕೆಲವು ದಿನಗಳಲ್ಲಿ ಆರಂಭಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದಿದೆ.
ಆದರೆ ಈವರೆಗೆ ಯಾವುದೇ ಕಾಮಗಾರಿ ನಡೆಸಿಲ್ಲ. ಪರೀಕ್ಷೆಗೆ ಬರುವ ಸಾರ್ವಜನಿಕರು ಪರೀಕ್ಷಾ ಕೇಂದ್ರದ ಅವ್ಯವಸ್ಥೆ ಬಗ್ಗೆ ಆರ್‌ಟಿಒಗೆ ದೂರು ನೀಡುತ್ತಿರುವುದರಿಂದ ಅವರು ಪೇಚಿಗೆ ಸಿಲುಕಿದ್ದಾರೆ. ಕಾಮಗಾರಿ ಮುಗಿಸಲು ನೀಡಿದ ಕಾಲಾವಧಿಯೇ ಮುಗಿದಿದೆ. ಆದರೆ ನಿರ್ಮಿತಿ ಕೇಂದ್ರ ವಿವಿಧ ಕಾರಣಗಳನ್ನು ನೀಡುತ್ತಿದೆಯೇ ವಿನಾ ಕಾಮಗಾರಿ ಆರಂಭಿಸಿಲ್ಲ ಎಂದು ಆರ್‌ಟಿಒ ಅಧಿಕಾರಿಗಳು ತಿಳಿಸಿದ್ದಾರೆ.
ಸರಕಾರ- ನಿರ್ಮಿತಿ ಕೇಂದ್ರದ ಫೈಟ್: ಆರ್‌ಟಿಒಗೆ ಸಂಕಷ್ಟ
ಸರಕಾರ ಹಾಗೂ ನಿರ್ಮಿತಿ ಕೇಂದ್ರದ ನಡುವೆ ಉಂಟಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಆರ್‌ಟಿಒ ಸಂಕಷ್ಟಕ್ಕೆ ಸಿಲುಕಿದೆ. ಪ್ರಸ್ತುತ ವಾಹನ ಚಾಲನಾ ಪರೀಕ್ಷಾ ಕೇಂದ್ರಕ್ಕೆ ಪರವಾನಿಗೆ ಪಡೆಯಲು ಸವಾರರು ಕಷ್ಟ ಪಡುವ ಸ್ಥಿತಿ ಇದೆ. ಜಲ್ಲಿ-ಕಲ್ಲು-ಮಣ್ಣು ಆವೃತವಾಗಿರುವ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ವಾಹನ ಬಿಡುವವರು ಪರೀಕ್ಷಾ ಭಯದಿಂದ ಹೆಚ್ಚಿನ ಬಾರಿ ಎಡವುತ್ತಾರೆ. ಅದನ್ನು ಹೊರತುಪಡಿಸಿ ವಿವಿಧ ಮೂಲ ಸೌಲಭ್ಯಗಳ ಕೊರತೆಯೂ ಇಲ್ಲಿರುವುದರಿಂದ ಪರೀಕ್ಷೆಗಾಗಿ ಬರುವ ಜನರು ಆರ್ ಟಿಒ ಆಧಿಕಾರಿಗಳನ್ನು ದೂಷಿಸುತ್ತಾರೆ. ಆದರೆ ಆರ್‌ಟಿಒ ಸಮಸ್ಯೆ ಬಗ್ಗೆ ಅರಿವಿದ್ದರೂ ಬಗೆಹರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ.
ಜಿಲ್ಲಾಧಿಕಾರಿಗೆ ಮನವಿ
ವಾಮಂಜೂರಿನ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ವಿವಿಧ ಕಾಮಗಾರಿಗಳನ್ನು ಆಯೋಜಿಸಲಾಗಿತ್ತು. ಜನವರಿಯಿಂದ ಕಾಮಗಾರಿಗಳು ಆರಂಭಗೊಂಡಿತ್ತು. ಆದರೆ ಟೆಂಡರ್ ಪ್ರಕ್ರಿಯೆ, ಅನುದಾನ ಬಿಡುಗಡೆಯಲ್ಲಿ ಉಂಟಾದ ವಿಳಂಬ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಮುಂದಿನ ವಾರ ನಡೆಯಲಿರುವ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಿದ್ದೇನೆ.
– ಜಾನ್ ಮಿಸ್ಕಿತ್, ಆರ್‌ಟಿಒ
ಅಧಿಕಾರಿ (ಪ್ರಭಾರ)
ವಿಶೇಷ ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.