ಪಿ. ಜಯರಾಮ್ ಭಟ್, ಮನೋಹರ ಪ್ರಸಾದ್ ಅವರಿಗೆ ವಂದನಾ ಪ್ರಶಸ್ತಿ
Team Udayavani, Mar 22, 2017, 1:44 PM IST
ಮಹಾನಗರ: ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಓ ಪಿ. ಜಯರಾಮ್ ಭಟ್ ಮತ್ತು ‘ಉದಯವಾಣಿ’ ಮಂಗಳೂರು ಸುದ್ದಿವಿಭಾಗ ಮುಖ್ಯಸ್ಥ ಮನೋಹರ ಪ್ರಸಾದ್ ಅವರಿಗೆ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿಯು, ವಾರ್ಷಿಕ ಪ್ರತಿಷ್ಠಿತ ವಂದನಾ ಪ್ರಶಸ್ತಿಯನ್ನು ಪ್ರಕಟಿಸಿದೆ.
ನಗರದಲ್ಲಿ ಮಂಗಳವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಡಾ | ಬಿ. ದೇವದಾಸ್ ರೈ ಅವರು, ಮಾ. 24ರಂದು ರಾತ್ರಿ 8 ಗಂಟೆಗೆ ನಗರದ ಹೊಟೇಲ್ ಮೋತಿಮಹಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಭಿನಂದನ ಭಾಷಣ ಮಾಡಲಿದ್ದು, ಮೇಯರ್ ಕವಿತಾ ಸನಿಲ್, ಪ್ರಮುಖರಾದ ಅನಿಲ್ ಗೊನ್ಸಾಲ್ವಿಸ್, ಇಲಿಯಾಸ್ ಸೈಯಟೀಸ್, ಹಿತೈಷಿ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ರೋಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯು ಪ್ರತಿಷ್ಠಿತ ವಂದನಾ ಪ್ರಶಸ್ತಿಯನ್ನು ಪ್ರತಿ ವರ್ಷ ಕ್ರೀಡೆ, ವಾಣಿಜ್ಯೋದಮ, ಶಿಕ್ಷಣ, ಕಲೆ, ಸಂಗೀತ, ಸಾಹಿತ್ಯ, ವಿಜ್ಞಾನ, ವೃತ್ತಿ ಸೇವೆ, ಮತ್ತು ಸಮಾಜ ಸೇವೆ ರಂಗದಲ್ಲಿ ಸಲ್ಲಿಸಿದ ವಿಶಿಷ್ಟ ಧನೆಯನ್ನು ಪರಿಗಣಿಸಿ ಸಾಧಕರನ್ನು ಆಯ್ಕೆ ಮಾಡಲಾಗುವುದು. ಇದು ನಮ್ಮ ಸಂಸ್ಥೆಯ ವೃತ್ತಿಪರ ಸೇವೆಯ ಯೋಜನೆಯ ಅಂಗವಾಗಿ ನೀಡಲಾಗುತ್ತದೆ ಎಂದವರು ಹೇಳಿದರು. ಪ್ರಮುಖರಾದ ಅನಿಲ್ ಗೊನ್ಸಾಲ್ವಿಸ್, ರೇಮಂಡ್ ಡಿಕುನ್ನಾ, ಯತೀಶ್ ಸಾಲ್ಯಾನ್, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.