ಇಂದು ನಗರಾದ್ಯಂತ ವರಮಹಾಲಕ್ಷ್ಮೀ ಪೂಜೆ
Team Udayavani, Aug 4, 2017, 8:35 AM IST
ಮಹಾನಗರ: ನಗರಾದ್ಯಂತ ದೇವಸ್ಥಾನ, ಮನೆ, ಸಂಘ ಸಂಸ್ಥೆಗಳಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಪೂಜಾ ಸಂಭ್ರಮ. ವಿಶೇಷವಾಗಿ ವ್ರತಾಚರಣೆಗಾಗಿ ಹೆಣ್ಣು ಮಕ್ಕಳು ತಯಾರಾಗುತ್ತಿದ್ದರೆ, ಇತ್ತ ಪೂಜೆಗೆ ಬೇಕಾದ ಹೂ, ಹಣ್ಣುಗಳಿಗೂ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದೆ. ಸುಖ – ಸಮೃದ್ಧಿ ಸಂಕೇತವಾದ ವರಮಹಾಲಕ್ಷ್ಮೀ ಪೂಜೆ ಹೆಣ್ಣುಮಕ್ಕಳಿಗೆ ಬಲು ಪ್ರಿಯವಾದು. ಇಷ್ಟಾರ್ಥ ಸಿದ್ಧಿಗಾಗಿ, ಪತಿ, ಕುಟುಂಬದ ಒಳಿತಿಗಾಗಿ ಭಾರತೀಯ ಸಂಸ್ಕೃತಿಯ ಪ್ರಕಾರ ಹೆಂಗಳೆಯರು ಪ್ರತಿ ವರ್ಷ ವರಮಹಾಲಕ್ಷ್ಮೀ ವ್ರತ ಕೈಗೊಳ್ಳುತ್ತಾರೆ. ಇದಕ್ಕಾಗಿ ವಿವಿಧ ದೇವಸ್ಥಾನಗಳಲ್ಲಿ ಪೂಜೆ- ಪುನಸ್ಕಾರಗಳು ನಡೆದರೆ, ಹೆಣ್ಣು ಮಕ್ಕಳು ತಮ್ಮ ಮನೆಗಳಲ್ಲಿಯೇ ಲಕ್ಷ್ಮೀಯನ್ನು ಅಲಂಕರಿಸಿ ಪೂಜಾವಿಧಿಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದಕ್ಕಾಗಿ ವಾರದಿಂದಲೇ ವ್ರತ ಕೈಗೊಂಡು, ಆ ದಿನದಂದು ಲಕ್ಷ್ಮೀದೇವಿಯ ಆರಾಧನೆ ಮಾಡುತ್ತಾರೆ. ಈ ಬಾರಿಯೂ ಹೆಣ್ಣು ಮಕ್ಕಳು ಈ ಆರಾಧನೆಗಾಗಿ ವಿಶೇಷ ತಯಾರಿ ನಡೆಸಿದ್ದು, ಖರೀದಿ ಭರಾಟೆಯೂ ಜೋರಾಗಿದೆ. ಕಳೆದ ವಾರವಷ್ಟೇ ನಾಗರಪಂಚಮಿ ಹಿನ್ನೆಲೆಯಲ್ಲಿ ಮಲ್ಲಿಗೆ, ಹೂ, ಹಣ್ಣುಗಳ ಬೆಲೆ ಏರಿಕೆಯಾಗಿದ್ದರೆ, ಈ ಬಾರಿ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರವಾಗಿರುವುದು ಗ್ರಾಹಕರಿಗೆ ನಿಟ್ಟುಸಿರು ತಂದಿದೆ.
ಮಲ್ಲಿಗೆ ಚೆಂಡಿಗೆ 90 ರೂ.ಗಳಿಂದ 100 ರೂ., ಭಟ್ಕಳ ಮಲ್ಲಿಗೆ 70ರಿಂದ 80 ರೂ.ಗಳ ತನಕ ಇದೆ. ಕಳೆದ ವಾರ ಮಲ್ಲಿಗೆಗೆ 250 ರೂ.ಗಳ ತನಕವೂ ದರ ಏರಿಕೆಯಾಗಿತ್ತು. ಸೇವಂತಿಗೆ ಮಾಲೆಗೆ 150 ರೂ., ತುಳಸಿ 30ರಿಂದ 50 ರೂ., ಹಿಂಗಾರ 200 ರೂ.ಗಳವರೆಗೆ ಮಾರಾಟವಾಗುತ್ತಿದೆ. ಇನ್ನು ಪೂಜೆಗೆ ಅತಿ ಅಗತ್ಯವಾದ ಹಣ್ಣುಗಳ ಬೆಲೆಯಲ್ಲಿಯೂ ಹೆಚ್ಚೇನೂ ಏರಿಕೆಯಾಗಿಲ್ಲ. ಕದಳಿ ಹಣ್ಣಿಗೆ ಕೆ.ಜಿ.ಗೆ 90ರಿಂದ 100 ರೂ. ತನಕ ಇದೆ. ಕಳೆದೆರಡು ದಿನಗಳಿಂದ ಸುಮಾರು 5 ರೂ.ಗಳಷ್ಟು ವ್ಯತ್ಯಾಸ ಆಗಿದ್ದು, ಹೆಚ್ಚೇನೂ ಏರಿಕೆಯಾಗಿಲ್ಲ. ಆ್ಯಪಲ್ ವಾಷಿಂಗ್ಟನ್ 200 ರೂ., ಆಪಲ್ ಇಂಡಿಯನ್ 160 ರೂ., ದ್ರಾಕ್ಷಿ 150 ರೂ., ಪೇರಳೆ 80 ರೂ., ಮುಸುಂಬಿ 60 ರೂ., ಕಿತ್ತಳೆ 100 ರೂ.ಗಳಿಗೆ ಮಾರಾಟವಾಗುತ್ತಿದ್ದು, ಬೆಲೆ ಸ್ಥಿರವಾಗಿದೆ.
ಅಲ್ಲಲ್ಲಿ ಸಂಭ್ರಮಕ್ಕೆ ಸಿದ್ಧತೆ
ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಮಣ್ಣಗುಡ್ಡ ಹರಿದಾಸ ಲೇನಿನಲ್ಲಿರುವ ಶ್ರೀ ನವದುರ್ಗಾ ಮಹಾಗಣಪತಿ ದೇವಸ್ಥಾನ, ಕೊಡಿಯಾಲ್‌ಬೈಲ್ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ, ಉರ್ವ ಮಾರಿಯಮ್ಮ ದೇವಸ್ಥಾನ, ಹಳೆಕೋಟೆ ಶ್ರೀ ಮಾರಿಯಮ್ಮ ಮಹಿಷಮರ್ದಿನಿ ದೇವಸ್ಥಾನ, ಮಂದಾರಬೈಲು ಶ್ರೀ ದುರ್ಗಾಪರಮೇಶ್ವರೀ ವೆಂಕಟರಮಣ ದೇವಸ್ಥಾನ ಸಹಿತ ವಿವಿಧ ದೇವಸ್ಥಾನ, ದೇವಿ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ.
ಅಲ್ಲದೇ ವರಮಹಾಲಕ್ಷ್ಮೀ ವ್ರತಾಚರಣೆಗಾಗಿ ವಿವಿಧ ಸಂಘಸಂಸ್ಥೆಗಳು, ಸಂಘಟನೆಗಳು ಕೂಡ ಸಿದ್ಧತೆ ನಡೆಸುತ್ತಿವೆ. ಶ್ರೀ ರಾಮಸೇನೆಯ ಮಹಿಳಾ ಘಟಕವಾದ ಶ್ರೀ ದುರ್ಗಾ ಸೇನೆ, ಕನ್ನಡ ಮೊಲಿ ಸಮಾಜ ಸುಧಾರಕ ಸಂಘದ ಯುವಜನ ಸಮಿತಿ ಹಾಗೂ ಮಹಿಳಾ ವೇದಿಕೆ, ಕೊಟ್ಟಾರ ಶ್ರೀಯಾನ್ ಮಹಲ್‌ನಲ್ಲಿರುವ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರ, ಮಂದಾರಬೈಲು ಶ್ರೀ ದುರ್ಗಾಪರಮೇಶ್ವರೀ ವೆಂಕಟರಮಣ ಮಹಿಳಾ ವೇದಿಕೆ ಸಹಿತ ವಿವಿಧ ಸಂಘಟನೆಗಳು ಕಾರ್ಯಕ್ರಮ ಹಮ್ಮಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Parliment: ವಯನಾಡ್ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.