ಸಾಮಾಜಿಕ ಬದ್ಧತೆಯ ಕಾರ್ಯ ಅನುಕರಣೀಯ: ವೇದವ್ಯಾಸ ಕಾಮತ್
Team Udayavani, Mar 2, 2023, 7:05 AM IST
ಮಂಗಳೂರು: ಮೀನು ಮಾರಾಟ ಫೆಡರೇಶನ್ ಲಾಭಾಂಶದ ಬಹು ದೊಡ್ಡ ಮೊತ್ತವನ್ನು ವಿನಿ ಯೋಗಿಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆರೋಗ್ಯ ಸುರಕ್ಷಾ ಕಾರ್ಡ್ ಹಾಗೂ ಸದಸ್ಯ ಗ್ರಾಹಕರಿಗೆ ಪ್ರೋತ್ಸಾಹ ಧನ ಹಾಗೂ ಉಡುಗೊರೆ ಒದಗಿಸುವ ಮೂಲಕ ಸಮಾಜಮುಖೀ ಬದ್ಧತೆ ಮೆರೆದಿರುವ ಕಾರ್ಯ ಅನುಕರಣೀಯ. ಇಂತಹ ಕಾರ್ಯ ಸಂಸ್ಥೆಯ ಮೂಲಕ ನಿರಂತವಾಗಿ ಮೂಡಿಬರಲಿ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಬುಧವಾರ ದ. ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉರ್ವದಲ್ಲಿ ಆಯೋಜಿಸಿದ್ದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್, ವಿದ್ಯಾರ್ಥಿ ವೇತನ ವಿತರಣ ಸಮಾರಂಭವನ್ನು ಉದ್ಘಾಟಿಸಿ, ವಿದ್ಯಾರ್ಥಿ ವೇತನ ವಿತರಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ಫೆಡರೇಶನ್ ಕಳೆದ ಹಲವು ವರ್ಷಗಳಿಂದ ಮೀನುಗಾರಿಕೆ ಅಭಿವೃದ್ಧಿಯ ಜತೆಗೆ ಸಮಾಜಮುಖೀ ಸೇವಾ ಕಾರ್ಯಕ್ರಮಗಳನ್ನು ರೂಪಿ ಸಿದ್ದು ಮುಂದಿನ ದಿನಗಳಲ್ಲಿಯೂ ಹಲವು ಯೋಜನೆಗಳು ಆಡಳಿತ ಮಂಡಳಿಯ ಮುಂದಿದೆ ಎಂದರು.
ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಸದಸ್ಯ ಸಹಕಾರಿ ಸಂಘಗಳ ಸದಸ್ಯರಿಗೆ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಿಸಿದರು. ಉರ್ವ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ದೇವಾನಂದ ಗುರಿಕಾರ ಸದಸ್ಯ ಗ್ರಾಹಕರಿಗೆ ಪ್ರೋತ್ಸಾಹಕ ಉಡುಗೊರೆ ಹಸ್ತಾಂತರಿಸಿದರು.
ಮಂಗಳೂರು ಏಳು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ಗೌತಮ್ ಕೋಡಿಕಲ್, ಪಾಲಿಕೆ ಸದಸ್ಯೆ ನಯನ ಆರ್. ಕೋಟ್ಯಾನ್, ಐಒಸಿಯ ಸೇಲ್ಸ್ ಆಫೀಸರ್ ಅಭಿನವ್‌ನಾಥ್, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಮೊಗವೀರ ಹಾಗೂ ಫೆಡರೇಶನ್ ನಿರ್ದೇಶಕ ರಾಮಚಂದ್ರ ಕುಂದರ್, ಸುಧೀರ್ ಶ್ರೀಯಾನ್, ಉಷಾರಾಣಿ, ಚಿದಾನಂದ ಮೊದಲಾದವರು ಉಪಸ್ಥಿತರಿದ್ದರು.
ವಿವಿಧ ಸವಲತ್ತು ವಿತರಣೆ
ಪ್ರಸಕ್ತ ಸಾಲಿನಲ್ಲಿ ಮಂಗಳೂರು ಭಾಗದ 145 ಪ್ರತಿಭಾವಂತ ವಿದ್ಯಾರ್ಥಿಗಳಿಗೆ 3 ಲ. ರೂ. ಮೌಲ್ಯದ ಪ್ರತಿಭಾ ಪುರಸ್ಕಾರ, 1,074 ಸದಸ್ಯ ಸಹಕಾರಿ ಸಂಘಗಳ ಸದಸ್ಯರಿಗೆ 20 ಲ. ರೂ. ವೆಚ್ಚದಲ್ಲಿ ಜಿ. ಶಂಕರ್ ಮಣಿಪಾಲ್ ಆರೋಗ್ಯ ಸುರಕ್ಷಾ ಕಾರ್ಡ್, ಗ್ರಾಹಕ ಬೋಟ್ ಮಾಲಕರಿಗೆ 1.07 ಕೋ. ರೂ. ಮೌಲ್ಯದ ಪ್ರೋತ್ಸಾಹಕ ಉಡುಗೊರೆ ಹಾಗೂ ಪ್ರೋತ್ಸಾಹ ಧನ ನೀಡುವ ಮೂಲಕ ಫೆಡರೇಶನ್ ಸಂಸ್ಥೆ ಗಳಿಸಿದ ಲಾಭಾಂಶವನ್ನು ಸಮಾಜಮುಖೀ ಕಾರ್ಯಗಳಿಗೆ ವಿನಿಯೋಗಿಸುವ ಜತೆಗೆ ಗ್ರಾಹಕ ಸದಸ್ಯರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಿರಂತರ ಕಾರ್ಯಪ್ರವೃತ್ತವಾಗಿದೆ ಎಂದು ಫೆಡರೇಶನ್ ಅಧ್ಯಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.