ವೇಣೂರು:ಕೋಳಿ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ
Team Udayavani, Feb 23, 2018, 11:59 AM IST
ವೇಣೂರು: ಇಲ್ಲಿನ ಶ್ರೀರಾಮ ನಗರದ ಮೂಡಬಿದಿರೆ ತಿರುವಿನ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು,ಕೋಳಿ ಸಾಗಾಟದ ಲಾರಿ ಬದಿಗೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಕ್ಕೆ ಢಿಕ್ಕಿ ಹೊಡೆದು ಚಲಿಸುತ್ತಿದ್ದ ಬೈಕ್ ಮೇಲೆ ಸಂಚರಿಸಿ ಮಗುಚಿ ಬಿದ್ದಿದೆ. ಅವಘಡದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದು, ಮಕ್ಕಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ದುರ್ದೈವಿ ವೇಣೂರು ಕರಿಮಣೇಲು ನಿವಾಸಿ ಉದಯ ಕುಮಾರ್ ಸೇಮಿತ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದಾರೆ.
ಬೈಕ್‌ನಲ್ಲಿದ್ದ ಪುತ್ರಿ ಸೇರಿದಂತೆ ಇನ್ನೋರ್ವ ವಿದ್ಯಾರ್ಥಿನಿ ಅಲ್ಪ ಪ್ರಮಾಣದ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.
ಬೆಳಿಗ್ಗೆ 7.30 ರ ಸುಮಾರಿಗೆ ಉದಯ ಕುಮಾರ್ ಸೇಮಿತ ಅವರು ಕಾಲೇಜಿಗೆ ತೆರಳುವ ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಕುಳ್ಳಿರಿಸಿ ಕರಿಮಣೇಲುವಿನಿಂದ ವೇಣೂರು ಮುಖ್ಯಪೇಟೆಗೆ ತಲುಪುತ್ತಿದ್ದಂತೆ ಅಜಾಗರುಕತೆಯಿಂದ ಎದುರಿನಿಂದ ಬಂದ ಕೋಳಿ ಸಾಗಾಟದ ಲಾರಿ ಪೊಲೀಸ್ ವಾಹನಕ್ಕೆ ಢಿಕ್ಕಿ ಹೊಡೆದು ಬಳಿಕ ಇವರ ಬೈಕ್‌ಗೆ ಗುದ್ದಿದೆ.
ಘಟನೆ ನಡೆದ ಕೆಲ ಹೊತ್ತಿನಲ್ಲಿ ಅಂಬ್ಯುಲೆನ್ಸ್ ಮೂಲಕ ಇಬ್ಬರು ಮಕ್ಕಳನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ಕೋಳಿ ಸಾಗಾಟದ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣವೆನ್ನಲಾಗಿದೆ.
ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ದೃಶ್ಯಾವಳಿಗಳು ಸ್ಥಳೀಯ ಕಾಂಪ್ಲೆಕ್ಸ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.