ಧರ್ಮಸಂಸದ್ ಫ್ಲೆಕ್ಸ್ ತೆರವಿಗೆ ವಿಹಿಂಪ ತಡೆ
Team Udayavani, Nov 22, 2017, 10:07 AM IST
ಮಹಾನಗರ : ಮಂಗಳೂರು ನಗರದಲ್ಲಿ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆಯಲ್ಲಿ ಉಡುಪಿಯಲ್ಲಿ ನಡೆಯಲಿರುವ ಧರ್ಮಸಂಸತ್ ಕಾರ್ಯಕ್ರಮದ ಫ್ಲೆಕ್ಸ್‌ಗಳನ್ನು ತೆರವುಗೊಳಿಸುತ್ತಿರುವುದಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದರು.
ನಗರದಲ್ಲಿ ಅಳವಡಿಸಿರುವ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆ ಮಂಗಳವಾರ ಬೆಳಗ್ಗೆ ಆರಂಭಗೊಂಡಿತು. ಉಡುಪಿಯಲ್ಲಿ ನ.24ರಿಂದ 26ರ ವರೆಗೆ ನಡೆಯುವ ಧರ್ಮಸಂಸತ್ ಪ್ರಚಾರಾರ್ಥ ಅಳವಡಿಸಿದ್ದ ಫ್ಲೆಕ್ಸ್‌ಗಳನ್ನು ಕೂಡ ತೆರವುಗೊಳಿಸತೊಡಗಿದರು. ಈ ಬಗ್ಗೆ ಮಾಹಿತಿ ಪಡೆದ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ ಶೇಣವ ಅವರು ಕಾರ್ಯಕರ್ತರೊಂದಿಗೆ ತೆರಳಿ ಧರ್ಮಸಂಸತ್ ಪ್ರಚಾರದ ಫ್ಲೆಕ್ಸ್ ಗಳ ತೆರವು ಕಾರ್ಯಾಚರಣೆಯನ್ನು ವಿರೋಧಿಸಿದರು. ಸ್ಥಳಕ್ಕೆ ಆಗಮಿಸಿದ ಕದ್ರಿ ಪೊಲೀಸ್ ಇನ್ಸ್‌ಪೆಕ್ಟರ್ ಮಾರುತಿ ನಾಯಕ್ ಹಾಗೂ ಪಾಲಿಕೆಯ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಬಳಿಕ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಖಂಡನೆ
ಉಡುಪಿಯಲ್ಲಿ ನ.24ರಿಂದ 26 ರವರೆಗೆ ನಡೆಯುವ ಧರ್ಮಸಂಸತ್‌ನ ಪ್ರಚಾರಾರ್ಥ ವಿಶ್ವಹಿಂದೂ ಪರಿಷತ್ ಫ್ಲೆಕ್ಸ್ ಗಳನ್ನು ಅಳವಡಿಸಿದ್ದು, ಕಾರ್ಯಕ್ರಮಕ್ಕೆ ಕೇವಲ 3 ದಿನ ಬಾಕಿ ಇರುವಾಗ ಇವುಗಳನ್ನು ತೆರವುಗೊಳಿಸುವ ಕಾರ್ಯವನ್ನು ಪಾಲಿಕೆ ಆರಂಭಿಸಿದೆ. ನಗರದಲ್ಲಿ ವಿವಿಧ ಕಾರ್ಯಕ್ರಮಗಳ ಸಾವಿರಾರು ಫ್ಲೆಕ್ಸ್‌ಗಳು ಇದ್ದರೂ ಅದನ್ನು ತೆರವುಗೊಳಿಸದ ಪಾಲಿಕೆ ಏಕಾಏಕಿ ವಿಶ್ವಹಿಂದೂ ಪರಿಷತ್‌ನ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿರುವುದು ಖಂಡನೀಯವಾಗಿದೆ. ಒಂದು ವೇಳೆ ವಿಶ್ವಹಿಂದೂ ಪರಿಷತ್ ಅಳವಡಿಸಿರುವ ಫ್ಲೆಕ್ಸ್ ಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ಮುಂದುವರಿದರೆ ತೀವ್ರ ರೀತಿಯ ಪ್ರತಿಭಟನೆ ಮಾಡಲಾಗುವುದು ಎಂದು ಜಗದೀಶ ಶೇಣವ ಹಾಗೂ ನಗರ ಸಂಚಾಲಕ ಪ್ರವೀಣ್ ಕುತ್ತಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.