ಶಾರದಾ ವಿದ್ಯಾನಿಕೇತನ: ಕಡ್ಡಾಯ ಕೃಷಿ ಪಾಠ ಉಪರಾಷ್ಟ್ರಪತಿ ಶ್ಲಾಘನೆ
Team Udayavani, Jun 29, 2018, 3:40 AM IST
ಉಳ್ಳಾಲ: ತಲಪಾಡಿಯ ದೇವಿನಗರದಲ್ಲಿರುವ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕಡ್ಡಾಯ ಕೃಷಿ ಪಾಠ ನೀಡುವ ಕ್ರಮವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶ್ಲಾಘಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಪಾಠದಲ್ಲಿ ಕಲಿತ ಅಂಶಗಳನ್ನು ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಜಾರಿಗೆ ತರುತ್ತಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.
It is heartening to see school children put theory into practise. Really happy to learn about Mangalore’s Sharada Vidyanikethana school’s initiative to introduce agricultural science as compulsory subject for students from 5th to 10th stabdard. https://t.co/q0WONk5sY9
— VicePresidentOfIndia (@VPSecretariat) June 28, 2018
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಈ ಶಾಲೆಯಲ್ಲಿ ಕೃಷಿ ಪಾಠಿದ್ದು, ಪ್ರಥಮ ಹಂತದಲ್ಲಿ ವಿದ್ಯಾರ್ಥಿಗಳು ಮೂರುವರೆ ಎಕರೆ ಪ್ರದೇಶದಲ್ಲಿ ಕೃಷಿಯನ್ನು ನಡೆಸಲಿದ್ದಾರೆ. ಪಠ್ಯದಲ್ಲಿ ಹೈನುಗಾರಿಕೆ, ಸಾವಯವ ಕೃಷಿ, ಹೂದೋಟ ನಿರ್ಮಾಣ, ಹಣ್ಣಿನ ಕೃಷಿ, ಭತ್ತದ ಕೃಷಿ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ಪ್ರಾಯೋಗಿಕವಾಗಿಯೂ ತರಬೇತಿ ಇರಲಿದೆ. ಇದಕ್ಕಾಗಿ ಶಾಲೆಯಲ್ಲಿ 7 ಮಂದಿ ಕೃಷಿ ಪದವೀಧರರನ್ನು ನೇಮಿಸಲಾಗಿದೆ. ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪಡೆದ ಒಬ್ಬರು ಉಪನ್ಯಾಸಕರು ಥಿಯರಿ ಕ್ಲಾಸ್ ನಡೆಸಿದರೆ, ಆರು ಮಂದಿ ಕೃಷಿ ಪದವಿ ಪಡೆದ ತರಬೇತುಧಾರರು ಮಕ್ಕಳಿಗೆ ಪ್ರಾಯೋಗಿಕ ಶಿಕ್ಷಣವನ್ನು ನೀಡುತ್ತಿದ್ದಾರೆ. ಈ ವಿಚಾರವನ್ನು ಉದಯವಾಣಿ ಜೂ.11ರಂದು ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.