Mangaluru: ವಿಧಾನ ಪರಿಷತ್ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ
Team Udayavani, Sep 26, 2024, 12:16 AM IST
ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆ.26ರಿಂದ ಅ.7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀ. ವ್ಯಾಪ್ತಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿರುತ್ತಾರೆ.
5 ಮಂದಿಗಿಂತ ಹೆಚ್ಚು ಮಂದಿ ಸೇರುವುದು, ಆಯುಧ ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಬಂಧಿ ಸಲಾಗಿದೆ. ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿ ತ 100 ಮೀ. ವ್ಯಾಪ್ತಿಯಲ್ಲಿ ಚುನಾವಣೆ ಕಾರ್ಯದ ಮೇಲೆ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣೆ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿ ಸಲಾಗಿದೆ.
ಯಾವುದೇ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ.
ಪರಿಷತ್ ಚುನಾವಣೆ ಇಂದು ಅಧಿಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾ ಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪ ಚುನಾವಣೆ 2024ಕ್ಕೆ ಸೆ.26ರಂದು ಅಧಿ ಸೂಚನೆ ಪ್ರಕಟವಾಗಲಿದೆ. ಅ.3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅ.4ರಂದು ನಾಮಪತ್ರಗಳ ಪರಿಶೀಲನೆ, ಅ.7ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.