ಭಾರತ ಮತ್ತೆ ವಿಶ್ವಗುರು ಸ್ಥಾನಕ್ಕೇರುವ ಕಾಲ ಸನ್ನಿಹಿತ: ವಿಶ್ವೇಶ್ವರ ಹೆಗಡೆ ಕಾಗೇರಿ
Team Udayavani, Jun 5, 2022, 5:40 AM IST
ಮಂಗಳೂರು: ಸೃಷ್ಟಿ ಮತ್ತು ಮಾನವನಲ್ಲಿ ಭಗವಂತನನ್ನು ಕಂಡ, ಭಾರತದ ಆಧ್ಯಾತ್ಮಿಕ ಮತ್ತು ಸನಾತನ ಸಂಸ್ಕೃತಿಯ ಹಿರಿಮೆಯನ್ನು ಜಗತ್ತಿಗೆ ಸಾರಿದ ಸ್ವಾಮಿ ವಿವೇಕಾನಂದರ ಸಂದೇಶಗಳ ಅನುಷ್ಠಾನದಿಂದ ಭಾರತ ಮತ್ತೆ ವಿಶ್ವಗುರು ಸ್ಥಾನಕ್ಕೇರುವ ಗುರಿ ಸಾಕಾರಗೊಳ್ಳಲಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಮಂಗಳೂರು ರಾಮಕೃಷ್ಣ ಮಠದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಅಮೃತ ಸಂಗಮದ ಶನಿವಾರ ಜರಗಿದ ಸಮಾರೋಪದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.
ಪ್ರಸ್ತುತ ಕಾಲಘಟ್ಟದಲ್ಲಿ ನಮ್ಮ ಮುಂದೆ ಅನೇಕ ಸವಾಲುಗಳಿವೆ. ಇದನ್ನು ಪರಿಹರಿಸಿಕೊಂಡು ಮೌಲ್ಯ ಗಳಿಂದ ಕೂಡಿದ ಸತ್‌ಸಮಾಜ ನಿರ್ಮಾಣ ಗುರಿಯೊಂದಿಗೆ ನಾವೆ ಲ್ಲರೂ ಮುನ್ನಡೆಯಬೇಕು ಎಂದರು.
ಅನನ್ಯ ಸಾಧನೆಗಳ ಹೆಗ್ಗಳಿಕೆ
ಮಂಗಳೂರು ರಾಮಕೃಷ್ಣ ಮಠ ಆಧ್ಯಾತ್ಮಿಕತೆಯ ಉದ್ದೀಪನದೊಂದಿಗೆ ಸ್ವತ್ಛ ಭಾರತ್, ಶೈಕ್ಷಣಿಕ, ಯುವಜಾಗೃತಿ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನನ್ಯ ಸಾಧನೆಗಳ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಕಾಗೇರಿ ಶ್ಲಾಘಿಸಿ ಅಭಿನಂದಿಸಿದರು.
ಪಶ್ಚಿಮ ಬಂಗಾಲ ಬೇಲೂರು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಉಪಾಧ್ಯಕ್ಷ ಸ್ವಾಮಿ ಗೌತಮಾನಂದಜಿ ಮಹಾರಾಜ್ ಅವರ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ಜರಗಿತು. ಬೇಲೂರು ಮಠದ ವಿಶ್ವಸ್ತರಾದ ಸ್ವಾಮಿ ಮುಕ್ತಿದಾನಂದಜಿ ಮಾತನಾಡಿ, ಮಂಗಳೂರು ರಾಮಕೃಷ್ಣ ಮಠ ಆಧ್ಯಾತ್ಮಿಕತೆ ಜತೆಗೆ ಜನಸೇವೆಯ ಮೂಲಕ ಸಾರ್ಥಕತೆಯೊಂದಿಗೆ ಮುನ್ನಡೆಯುತ್ತಾ ಬಂದಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರು ರಾಮ ಕೃಷ್ಣ ಮಠವು ಯುವ ಪೀಳಿಗೆಗೆ ಶಕ್ತಿ ತುಂಬುತ್ತಿದೆ ಎಂದರು.
ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಮಾತನಾಡಿ, ಸ್ವತ್ಛತೆ, ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ರಾಮಕೃಷ್ಣ ಮಠ ಜಿಲ್ಲಾಡಳಿತದೊಂದಿಗೆ ಸಹಯೋಗ ನೀಡುತ್ತಾ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಜಿ.ಪಂ. ಸಿಇಒ ಡಾ| ಕುಮಾರ್ ಮಾತನಾಡಿ, ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಸ್ವಾಗತಿಸಿ ಪ್ರಸ್ತಾವನೆಗೈದರು. ಚೆನ್ನೈಯ ಮಹಾವೇದಾಂತ ಸ್ವಾಮಿ ಯತಿಗಳ ಪರವಾಗಿ ತುಮಕೂರಿನ ಡಾ| ಚಂದ್ರಶೇಖರ್ ಅವರು ಪ್ರತಿನಿಧಿಗಳ ಪರವಾಗಿ ಹಾಗೂ ವಿದ್ಯಾ ಶೆಣೈ ಅವರು ಸ್ವಯಂಸೇವಕರ ಪರವಾಗಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಸ್ವಾಮಿ ಜಿತಕಾಮಾನಂದಜಿ ಅವರು ಮಾತನಾಡಿ ಎಲ್ಲರ ಸಹಕಾರದೊಂದಿಗೆ ಅಮೃತ ಮಹೋತ್ಸವ ಅತ್ಯಂತ ಯಶಸ್ವಿಯಾಗಿ ಮೂಡಿಬಂದಿದೆ ಎಂದರು. ಸ್ವಾಮಿ ಏಕಗಮ್ಯಾನಂದಜಿ ಅವರು ಉಪಸ್ಥಿತರಿದ್ದರು.
ಯಶಸ್ವಿಯಾಗಿ ಸಂಪನ್ನ
ಎರಡು ದಿನಗಳ ಅಮೃತಸಂಗಮ ಸಮಾರಂಭ ಸಾರ್ಥಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿದೆ. ಸ್ವಾಮಿ ವೀರೇಶ್ವರಾನಂದ ಸಾಧು ನಿವಾಸ ಅಮೃತ ಸದನ ಹಾಗೂ ಶ್ರೀಮಠದ ನೂತನ ಮಹಾದ್ವಾರ ಅಮೃತ ಪಥ ಲೋಕಾರ್ಪಣೆಗೊಂಡಿದೆ ಹಾಗೂ ವಿವೇಕಾನಂದ ತರಬೇತಿ ಕೇಂದ್ರದ ಕಟ್ಟಡ ಅಮೃತ ಭವನಕ್ಕೆ ಭೂಮಿಪೂಜೆ ನೆರವೇರಿದೆ. ಅರ್ಥಪೂರ್ಣ ಗೋಷ್ಠಿಗಳು ನಡೆದಿವೆ ಎಂದು ಸ್ವಾಮಿ ಜಿತಕಾಮಾನಂದಜಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.