ಜಿಲ್ಲಾ ಪಂಚಾಯತ್ ಸದಸ್ಯರಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
Team Udayavani, Jun 21, 2018, 12:59 PM IST
ಕಡಬ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಳೆಯ ತರಗತಿ ಕೊಠಡಿಯ ಕಟ್ಟಡದ ಗೋಡೆಗಳು ಬಿರುಕುಬಿಟ್ಟು ಕಟ್ಟಡ ಕುಸಿದುಬೀಳುವ ಭೀತಿ ಎದುರಿಸುತ್ತಿರುವ ಕುರಿತು ಪ್ರಕಟಗೊಂಡ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಬುಧವಾರ ಸ್ಥಳಕ್ಕೆ ಭೇಟಿ ನೀಡಿದ ಕಡಬ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಪಿ.ಪಿ.ವರ್ಗೀಸ್ ಅವರು ಕಟ್ಟಡದ ಪರಿಶೀಲನೆ ನಡೆಸಿದರು.
ಬಳಿಕ ವಿದ್ಯಾಂಗ ಉಪ ನಿರ್ದೇಶಕ (ಆಡಳಿತ) ರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಪಿ.ಪಿ.ವರ್ಗೀಸ್ ಅವರು ಹಳೆಯ ಶಿಥಿಲಗೊಂಡಿರುವ ಕಟ್ಟಡವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವುದರೊಂದಿಗೆ ಈಗಾಗಲೇ ಹೊಸ ಕಟ್ಟಡ ನಿರ್ಮಾಣಕ್ಕೆ ಸಲ್ಲಿಸಲಾಗಿರುವ ಪ್ರಸ್ತಾವನೆಯನ್ನು ಗಮನಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಸದ್ರಿ ಕಟ್ಟಡದ ಒಂದು ಭಾಗದಲ್ಲಿರುವ ತರಗತಿಗಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಿದ ಅವರು ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿ ಅನುದಾನ ಬಿಡುಗಡೆಗೊಳಿಸುವಂತೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡುವುದಾಗಿ ಭರವಸೆ ನೀಡಿದರು.
ಪ್ರಭಾರ ಪ್ರಾಂಶುಪಾಲ ಚೆರಿಯನ್ ಬೇಬಿ ಇ.ಸಿ. ಹಾಗೂ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಕಮಲಾ ಅವರು ಶಾಲಾ ಅಗತ್ಯಗಳ ಬಗ್ಗೆ ಜಿ.ಪಂ. ಸದಸ್ಯರಿಗೆ ಮಾಹಿತಿ ನೀಡಿದರು. ಕಡಬ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಬು ಮುಗೇರ, ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಎ.ಎಸ್. ಶರೀಫ್ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kinnigoli: ಶೌಚಾಲಯದ ಕಮೋಡ್‌ನಲ್ಲಿ ಮೊಬೈಲ್ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?
Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.