ವಿಟ್ಲ: ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ದಶಮಾನೋತ್ಸವ
Team Udayavani, Aug 14, 2017, 6:20 AM IST
ವಿಟ್ಲ : ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರದ ಮೂರುಕಜೆ ಮೈತ್ರೇಯಿ ಗುರುಕುಲದ ಸಹಕಾರದೊಂದಿಗೆ ವಿಟ್ಲ ಸುತ್ತಮುತ್ತಲಿನ ಎಲ್ಲ ಬಾಲಗೋಕುಲದ ಮಕ್ಕಳನ್ನೊಳಗೊಂಡು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ದಶಮಾನೋತ್ಸವ ಕಾರ್ಯಕ್ರಮದ ಉದ್ಘಾಟನ ಕಾರ್ಯಕ್ರಮವು ವಿಟ್ಲದ ವಿಠಲ ಪ.ಪೂ. ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಧಾರ್ಮಿಕ ಮುಂದಾಳು ಕುಂಟಾರು ರವೀಶ್ ತಂತ್ರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ ಮಂಗಳೂರು ರೈ ಎಸ್ಟೇಟಿನ ಅಶೋಕ್ ರೈ ಕೋಡಿಂಬಾಡಿ ಮಾತನಾಡಿ “ಅಧರ್ಮ ಅನ್ಯಾಯ ಆಗುವಲ್ಲಿ ನ್ಯಾಯ ಒದಗಿಸುವುದಕ್ಕಾಗಿ ಸಂಘಟನೆ ಅಗತ್ಯ. ಉತ್ತಮ ಸಂಸ್ಕಾರವನ್ನು ಬೆಳೆಸುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.
ಮುಖ್ಯ ಅತಿಥಿಗಳಾಗಿ ವಿಟ್ಲ ಬೆನಕ ಕ್ಲಿನಿಕ್‌ನ ಎಲುಬು ತಜ್ಞ ಡಾ| ಅರವಿಂದ್ ಭಾಗವಹಿಸಿದ್ದರು. ಶೋಭಾಯಾತ್ರೆ ಉದ್ಘಾಟಿಸಿದ ಸಂಕಪ್ಪ ಗೌಡ ಕೈಂತಿಲ ಮತ್ತು ಸಮಿತಿ ಗೌರವಾಧ್ಯಕ್ಷ ಆನಂದ ಕಲ್ಲಕಟ್ಟ ವೇದಿಕೆಯಲ್ಲಿದ್ದರು. ಅಧ್ಯಕ್ಷ ಜಗದೀಶ ಪಾಣೆಮಜಲು ಸ್ವಾಗತಿಸಿದರು. ಪರಮೇಶ್ವರ ಆಚಾರ್ಯ ಪ್ರಸ್ತಾವಿಸಿದರು. ಕಾರ್ಯದರ್ಶಿ ಪದ್ಮನಾಭ ಕಟ್ಟೆ ವಂದಿಸಿದರು. ವಿನಯ್ ಆಲಂಗಾರು ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಆರ್. ಕೆ. ಆರ್ಟ್ಸ್ ಚಿಣ್ಣರ ಮನೆ ವಿಟ್ಲ ಇವರಿಂದ ರಾಜೇಶ್ ನಿರ್ದೇಶನದಲ್ಲಿ ನೃತ್ಯ ಸಂಭ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.