ಅರ್ಹರನ್ನು ಹುಡುಕಿ ಮತದಾರರ ಪಟ್ಟಿಗೆ ಸೇರಿಸಿ: ಡಾ| ಕುಮಾರ್
Team Udayavani, Dec 4, 2022, 5:55 AM IST
ಮಂಗಳೂರು: ಅರ್ಹರಿದ್ದು, ಇನ್ನೂ ಸೇರ್ಪಡೆಯಾಗದ ಮತದಾರರನ್ನು ಕೂಡಲೇ ಮತದಾರರ ಪಟ್ಟಿಗೆ ಸೇರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ್ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2023 ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತೃತೀಯ ಲಿಂಗಿಗಳು, ಬುಡಕಟ್ಟು ಜನಾಂಗದ ನಾಗರಿಕರು, ಯುವ ಮತದಾರರು ಸೇರಿದಂತೆ ಇನ್ನೂ ಹಲವು ವರ್ಗದ ಅರ್ಹರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ. ಅಂತಹವರನ್ನು ಹುಡುಕಿ ಆದಷ್ಟು ಬೇಗ ಅವರ ಹೆಸರು ಸೇರ್ಪಡೆಗೊಳಿಸುವುದು ಮತದಾರರ ಸಾಕ್ಷರತಾ ಸಂಘದ ಕರ್ತವ್ಯ ಎಂದರು.
ಜಿಲ್ಲೆಯಲ್ಲಿ ಯುವ ಮತದಾರರ ಅನುಪಾತ ಕಡಿಮೆ ಇದೆ. ಅರ್ಹ ಯುವಕರಿಗೆ ಮತದಾನದ ಮಹತ್ವದ ಅರಿವು ಮತ್ತು ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅಲೆದಾಡುವ ಅಗತ್ಯವಿಲ್ಲ. ವೋಟರ್ ಹೆಲ್ಪ್ ಲೈನ್ ಆ್ಯಪ್ ಅಥವಾ ನ್ಯಾಶನಲ್ ವೋಟರ್ ಸರ್ವಿಸ್ ಪೋರ್ಟಲ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹುದು. ಇವುಗಳ ಬಗ್ಗೆ ವ್ಯಾಪಕ ಪ್ರಚಾರ ಮಾಡುವಂತೆ ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ, ಕಾಲೇಜು ಶಿಕ್ಷಣದ ವಿಶೇಷಾಧಿಕಾರಿ ದೇವಿಪ್ರಸಾದ್, ಸಂಪನ್ಮೂಲ ವ್ಯಕ್ತಿ ಪ್ರಮಿಳಾ ರಾವ್, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಪ್ರಾಧ್ಯಾಪಕಿ ಭಾರತಿ ಪಿಲಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.