Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Team Udayavani, Nov 5, 2024, 4:56 PM IST
ಕೆಪಿಟಿ: ವ್ಯಾಸನಗರ ಪ್ರದೇಶದಲ್ಲಿ ಬೀದಿದೀಪಗಳನ್ನು ಅಳವಡಿಸದ ಕಾರಣ ರಾತ್ರಿ ವೇಳೆ ಸಂಚಾರಕ್ಕೆ ಸಮಸ್ಯೆ ಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ಇದೀಗ ರಸ್ತೆ ಬದಿಯ ಸುಮಾರು 10ರಷ್ಟು ವಿದ್ಯುತ್ ಕಂಬಗಳಿಗೆ ಬೀದಿದೀಪಗಳನ್ನು ಅಳವಡಿ ಸಲಾಗಿದೆ. ಆ ಮೂಲಕ ಜನರ ಸಮಸ್ಯೆ ತಕ್ಕಮಟ್ಟಿಗೆ ಪರಿಹಾರವಾಗಿದೆ.
ಆದರೆ ಒಳ ಪ್ರದೇಶದ ಮಣ್ಣಿನ ರಸ್ತೆ ಇರುವಲ್ಲಿ ಇನ್ನಷ್ಟೇ ಬೀದಿ ದೀಪಗಳನ್ನು ಅಳವಡಿಸಬೇಕಾಗಿದೆ. ಶೀಘ್ರ ಇಲ್ಲಿನ ಕಂಬಗಳಲ್ಲಿಯೂ ದೀಪಗಳನ್ನು ಹಾಕಿ ರಾತ್ರಿ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬೆಳಕಿಲ್ಲದೆ ರಾತ್ರಿ ವೇಳೆ ನಡೆದು ಕೊಂಡು ಹೋಗುವವರಿಗೆ ಸಮಸ್ಯೆಯಾಗುತ್ತಿದೆ. ಕೆಲವು ಕಡೆಗಳಲ್ಲಿ ಅನೈತಿಕ ಚಟುವಟಿಕೆಗಳೂ ನಡೆಯುತ್ತಿದೆ. ಬೆಳಕು ಇಲ್ಲದಿರುವುದು ಅಂತಹವರಿಗೆ ಲಾಭ ವಾಗಿ ಪರಿಣಮಿಸಿದೆ. ಆದ್ದರಿಂದ ಬಾಕಿ ಇರುವಲ್ಲಿಯೂ ಶೀಘ್ರ ಬೀದಿ ದೀಪದ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.