ರಸ್ತೆಗೆ ಹರಿಯುವ ತ್ಯಾಜ್ಯ ನೀರು; ಬಾಯ್ದೆರೆದ ಚರಂಡಿ
Team Udayavani, Jun 26, 2019, 5:00 AM IST
ನಗರ ವ್ಯಾಪ್ತಿಯ ನಾಗರಿಕ ಸಮಸ್ಯೆಗಳ ನಿಮ್ಮ ದನಿಗೆ ನಮ್ಮ ದನಿ ಸೇರಿಸುವ ಪ್ರಯತ್ನ ಈ ಸುದಿನ ಜನದನಿ. ಓದುಗರು ತಮ್ಮ ಪ್ರದೇಶದ ರಸ್ತೆ, ನೀರು, ಸ್ವಚ್ಛತೆ, ನೈರ್ಮಲ್ಯ, ಮಾಲಿನ್ಯ, ಸಂಚಾರ ವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆ ಕುರಿತು ತಿಳಿಸಬಹುದು. ಈ ಅಂಕಣ ಪ್ರತಿ ಬುಧವಾರ ಪ್ರಕಟವಾಗಲಿದೆ. ವೈಯಕ್ತಿಕ ಸಮಸ್ಯೆ, ಕಾನೂನು ವ್ಯಾಜ್ಯದ ದೂರು ಅಥವಾ ವಿವಾದದಲ್ಲಿರುವ ವಿಷಯಗಳನ್ನು ಪರಿಗಣಿಸುವುದಿಲ್ಲ. ನಾಗರಿಕರು ತಮ್ಮ ಪ್ರದೇಶದ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಬರೆದು ಪೂರಕವೆನಿಸುವ ಒಂದು ಫೋಟೊ ಜತೆ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಅಂಚೆ, ಇಮೇಲ್ ಅಥವಾ ವಾಟ್ಸಪ್ ಮೂಲಕ ಕಳುಹಿಸಬಹುದು. ಅರ್ಹ ದೂರುಗಳನ್ನು ಪ್ರಕಟಿಸಿ, ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಸುದಿನ ಮಾಡಲಿದೆ.
ರಸ್ತೆಯಲ್ಲಿ ಒಳಚರಂಡಿ ನೀರು
ನಗರದ ಪಂಪ್‌ವೆಲ್ ಬಳಿ ಬೇಕರಿಯೊಂದರ ಪಕ್ಕದ ರಸ್ತೆಯಲ್ಲಿ ಕಳೆದೊಂದು ವಾರದಿಂದ ಒಳಚರಂಡಿ ನೀರು ರಸ್ತೆಯಲ್ಲೇ ಪ್ರವಾಹದಂತೆ ಹರಿದು ಹೋಗುತ್ತಿದೆ. ಇದರಿಂದಾಗಿ ವಾಹನಗಳಿಗೆ, ಸಾರ್ವಜನಿಕರಿಗೆ ಓಡಾಡಲೂ ಕಷ್ಟವಾಗಿದೆ. ಸ್ಥಳೀಯ ನಿವಾಸಿಗಳು ಪ್ರತಿದಿನ ಮೂಗು ಮುಚ್ಚಿಕೊಂಡೇ ವಾಸಿಸಬೇಕಾದ ಸ್ಥಿತಿ ಬಂದೊದಗಿದೆ. ಸ್ಥಳೀಯ ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳು ಈವರೆಗೆ ಸಮಸ್ಯೆಗೆ ಸ್ಪಂದನೆ ನೀಡಿಲ್ಲ. ಮುಂದಾದರೂ ಈ ಸಮಸ್ಯೆಗೆ ಮುಕ್ತಿ ನೀಡಿ ಎಂಬುದು ಜನರ ವಿನಂತಿ.
-ಗಂಗಾಧರ್, ಪಂಪ್‌ವೆಲ್
ನೀರು ನಿಂತು ಸಮಸ್ಯೆ
ಬಿಜೈ ಬಸ್ ನಿಲ್ದಾಣದ ಸಮೀಪ ಬಿಗ್ ಬಜಾರ್ ಮುಂಭಾಗದ ರಸ್ತೆಯಲ್ಲಿ ಸ್ವಲ್ಪ ಮಳೆ ಬಂದರೂ ಅಧಿಕ ಪ್ರಮಾಣದಲ್ಲಿ ನೀರು ನಿಂತು ಸಮಸ್ಯೆಯಾಗುತ್ತಿದೆ. ಇಲ್ಲಿನ ಕಾಪಿಕಾಡ್ ಕ್ರಾಸ್‌ನಲ್ಲಿ ಲಾಲ್ಬಾಗ್‌ನಿಂದ ಮುಂದೆ ಹೋಗಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಕ್ರಾಸ್ ಆಗುವಲ್ಲಿ ನೀರು ನಿಲ್ಲುವುದರಿಂದ ವಾಹನ ಸವಾರರಿಗೆ ತುಂಬಾ ಸಮಸ್ಯೆ ಎದುರಾಗುತ್ತಿದೆ. ಕೆಎಸ್ಸಾರ್ಟಿಸಿ ನಿಲ್ದಾಣಕ್ಕೆ ಕ್ರಾಸ್ ಆಗುವಲ್ಲಿ ಇಂಟರ್‌ಲಾಕ್ ಕೂಡ ಎದ್ದು ಹೋಗಿದ್ದು, ಮಳೆಗಾಲದ ಸಮಸ್ಯೆ ಬಿಗಡಾಯಿಸಿದೆ. ರಸ್ತೆಯಲ್ಲಿ ನೀರು ನಿಲ್ಲದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ವಹಿಸಿ, ಸಮಸ್ಯೆಮುಕ್ತ ಚಾಲನೆಗೆ ಸಹಕರಿಸಬೇಕು.
– ನಾಗರಿಕ, ಬಿಜೈ
ನಗರದ ಜೈಲ್ರೋಡ್ ಗೋವು ಆಸ್ಪತ್ರೆಯ ಮುಂಭಾಗ ರೋಡ್‌ನ ಎರಡೂ ಪಕ್ಕದಲ್ಲಿ ಪಾದಚಾರಿಗಳು ಹೋಗಲು ಫುಟ್ಪಾತ್ ವ್ಯವಸ್ಥೆ ಇಲ್ಲ. ಇದರಿಂದಾಗಿ ಕೊಳಚೆ ನೀರು ವಾಹನ ಹೋಗುವಾಗ ಪಾದಚಾರಿಗಳ ಮೇಲೆ ಚಿಮ್ಮಿ ಕೊಳಕಾಗುತ್ತದೆ. ರಸ್ತೆಯ ಇಕ್ಕೆಲಗಳಲ್ಲಿ ಫುಟ್ಪಾತ್ ವ್ಯವಸ್ಥೆ ಮಾಡಿ ಪಾದಚಾರಿಗಳ ಸುಗಮ ನಡೆದಾಡುವಿಕೆಗೆ ಪಾಲಿಕೆ ವ್ಯವಸ್ಥೆ ಮಾಡಿಕೊಡಬೇಕು.
-ಪುಷ್ಪರಾಜ್, ಕೊಡಿಯಾಲ್ಬೈಲ್
ಪದವಿನಂಗಡಿ ಜಂಕ್ಷನ್ ಬಳಿ ಕಳೆದ ಹಲವು ಸಮಯಗಳಿಂದ ಚರಂಡಿಯ ಮೇಲು ಹಾಸು ಬಾಯ್ದೆರೆದ ಸ್ಥಿತಿಯಲ್ಲಿದೆ. ಇದು ಸಾರ್ವಜನಿಕರು ನಡೆದಾಡುವ ಸ್ಥಳವಾದ್ದರಿಂದ ಬಾಯ್ದೆರೆದ ಸ್ಥಿತಿಯಲ್ಲಿರುವ ಚರಂಡಿ ಚಪ್ಪಡಿಯನ್ನು ಗಮನಿಸದೆ ಕಾಲಿಟ್ಟು ಬೀಳುವ ಅಪಾಯವೂ ಇದೆ. ಸ್ಥಳೀಯ ಜನಪ್ರತಿನಿಧಿಗಳು ತತ್‌ಕ್ಷಣ ಈ ಸಮಸ್ಯೆಯನ್ನು ಗಮನಿಸಿ ಸಾರ್ವಜನಿಕರಿಗೆ ನಡೆದಾಡಲು ಅನುಕೂಲಕರವಾಗುವ ರೀತಿಯಲ್ಲಿ ದುರಸ್ತಿಪಡಿಸಬೇಕು.
ಇಲ್ಲಿಗೆ ಕಳುಹಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.