ಹೊಸಮಠ ಸೇತುವೆ: 4 ದಿನದಿಂದ ಇಳಿದಿಲ್ಲ ನೀರು
Team Udayavani, Jul 14, 2018, 2:45 AM IST
ಕಡಬ: ಕಡಬ ಹೊಸಮಠ ಸೇತುವೆಯ ಮೇಲೆ ಕಳೆದ 4 ದಿನಗಳಿಂದ ಸತತವಾಗಿ ನೆರೆ ನೀರು ಹರಿಯುತ್ತಲೇ ಇದೆ. ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ. ನೆರೆ ನೀರು ಹರಿಯುತ್ತಿರುವ ಸೇತು ವೆಯ ಮೇಲೆ ವಾಹನಗಳು ಸಂಚರಿಸಿ ಅವಘಡ ಸಂಭವಿಸಬಾರದೆನ್ನುವ ಮುನ್ನೆಚ್ಚರಿಕೆ ನೆಲೆಯಲ್ಲಿ ರಾತ್ರಿ, ಹಗಲು ಪೊಲೀಸರು, ಗೃಹರಕ್ಷಕ ದಳದ ಸಿಬಂದಿ ಕಾವಲು ಕಾಯುತ್ತಲೇ ಇದ್ದಾರೆ. ಹೊಸಮಠ ಸೇತುವೆಯ ಇಕ್ಕೆಲಗಳಲ್ಲಿ ರಕ್ಷಣಾ ಗೇಟುಗಳನ್ನು ಹಾಕಿ ಮುಚ್ಚಲಾಗಿದೆ.
ವಿದ್ಯಾರ್ಥಿಗಳಿಗೆ ಹೆಚ್ಚಿನ ಕಷ್ಟ
ಶಾಲೆ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇತುವೆ ಮುಳುಗಡೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸೇತುವೆ ಮುಳುಗಡೆಯಾಗಿರುವ ಕಾರಣದಿಂದಾಗಿ ಹೊಸಮಠ ಸೇತುವೆಯ ಮೂಲಕ ಉಪ್ಪಿನಂಗಡಿ-ಕಡಬ ನಡುವೆ ಸಂಚರಿಸುತ್ತಿದ್ದ ಸರಕಾರಿ ಬಸ್ ಗಳು ಓಡಾಟ ಸ್ಥಗಿತಗೊಳಿಸಿವೆ. ವಿದ್ಯಾರ್ಥಿಗಳು ಬೆಳಗ್ಗೆ ಖಾಸಗಿ ವಾಹನಗಳಲ್ಲಿ ಬಂದರೆ, ಸಂಜೆ ಮನೆ ಸೇರಲು ಪರದಾಡುವಂತಾಗಿದೆ. ಶಾಲೆ ಬಿಟ್ಟು ಕಡಬದಿಂದ ಬಿಳಿನೆಲೆ, ಕೊಂಬಾರು, ಮರ್ಧಾಳ, ಕೈಕಂಬ ಮೊದಲಾದ ಕಡೆ ಹೋಗಬೇಕಾದ ವಿದ್ಯಾರ್ಥಿಗಳು ಸಂಜೆ ಆರು ಗಂಟೆಯ ತನಕವೂ ವಾಹನಗಳಿಲ್ಲದೆ ಕಡಬ ಬಸ್ ನಿಲ್ದಾಣದಲ್ಲಿ ಉಳಿಯುವಂತಾಗಿದೆ. ಕೆಲವು ವಿದ್ಯಾರ್ಥಿಗಳು ಖಾಸಗಿ ಜೀಪುಗಳಲ್ಲಿ ನೇತಾಡಿಕೊಂಡು ಮಳೆಗೆ ಮೈಯೊಡ್ಡಿ ಹೋಗುತ್ತಿದ್ದಾರೆ. ಸಮಸ್ಯೆ ಬಿಗಡಾಯಿಸಿದ್ದರೂ ಸಂಬಂಧಪಟ್ಟವರು ಗಮನಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.
ಮುಳುಗು ಸೇತುವೆಗೆ ಹಲವು ಜೀವ ಬಲಿ
ಈ ಹಿಂದೆ ಮುಳುಗಡೆಯಾದ ಸೇತುವೆಯ ಮೇಲೆ ವಾಹನ ಚಲಾಯಿಸುವ ದುಸ್ಸಾಹಸಕ್ಕೆ ಇಳಿದು ನೀರಿಗೆ ಬಲಿಯಾದ ಜೀವಗಳು ಹಲವು. ಸುಮಾರು 5 ದಶಕಗಳ ಹಿಂದೆ ನೆರೆನೀರಿನಲ್ಲಿ ಮುಳುಗಿದ್ದ ಸೇತುವೆಯನ್ನು ದಾಟಲು ಯತ್ನಿಸಿದ್ದ ಖಾಸಗಿ ಬಸ್ಸೊಂದು ಮುಳುಗಿ ಓರ್ವ ಪ್ರಯಾಣಿಕ ನೀರುಪಾಲಾಗಿದ್ದ. ಆ ಬಳಿಕ ಹಲವು ವರ್ಷಗಳ ಅನಂತರ ತಮಿಳುನಾಡಿನ ಪ್ರವಾಸಿ ಯುವಕರಿಬ್ಬರು ನೆರೆ ನೀರಿನಲ್ಲಿ ಕೊಚ್ಚಿಹೋಗಿದ್ದರು. ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿಯೊಂದು ಮುಳುಗಿ ಕೃಷಿಕರೊಬ್ಬರು ಜೀವ ಕಳೆದುಕೊಂಡಿದ್ದರು. 2006ರ ಮಳೆಗಾಲದಲ್ಲಿ ಸಿಮೆಂಟ್ ಸಾಗಾಟದ ಲಾರಿಯೊಂದು ಸೇತುವೆಯ ಮೇಲೆ ಚಲಿಸಿ ನೀರುಪಾಲಾಗಿ ಲಾರಿಯಲ್ಲಿದ್ದ ನಾಲ್ವರು ಮೃತಪಟ್ಟಿದ್ದರು. ಈ ಕಹಿ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.