ವಾರಕ್ಕೆ ಮೂರು ದಿನ ಮಾತ್ರ ನೀರು ಪೂರೈಕೆಗೆ ಚಿಂತನೆ

ನಗರದಲ್ಲಿ ಕುಡಿಯುವ ನೀರಿನ ಅಭಾವದ ಭೀತಿ !

Team Udayavani, Apr 11, 2019, 6:00 AM IST

1004mlr101-Tumbe

ತುಂಬೆ ಡ್ಯಾಂನಲ್ಲಿ ನೀರು ಸಂಗ್ರಹವಾಗಿರುವುದು.

ವಿಶೇಷ ವರದಿ- ಮಹಾನಗರ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಮನಗಂಡಿರುವ ದ.ಕ. ಜಿಲ್ಲಾಡಳಿತ, ಮನಪಾ ತತ್‌ಕ್ಷಣದಿಂದಲೇ ನೀರು ರೇಷ ನಿಂಗ್‌ ನಡೆಸಲು ಚಿಂತಿಸಿದೆ. ಮೂರು ದಿನ ನೀರು ಸರಬರಾಜು ಮಾಡಿ, ಎರಡು ದಿನ ನೀರು ಸ್ಥಗಿತ ಮಾಡಲು ಯೋಚಿಸಲಾಗಿದ್ದು, ಒಂದೆರಡು ದಿನದಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಸದ್ಯ ತುಂಬೆ ಡ್ಯಾಂನಲ್ಲಿ ನೀರಿನ ಒಳ ಹರಿವು ಸಂಪೂರ್ಣ ಸ್ಥಗಿತವಾಗಿ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಹೀಗಾಗಿ ಮಂಗಳವಾರ ಸಂಜೆ ಎಎಂಆರ್‌ ಡ್ಯಾಂನಿಂದ ತುಂಬೆ ಡ್ಯಾಂಗೆ ನೀರು ಹರಿಸಲಾಗಿದೆ. ಸದ್ಯ ತುಂಬೆ ಡ್ಯಾಂನಲ್ಲಿ 5.5 ಮೀ. ನೀರು ಸಂಗ್ರಹವಿದೆ. ಆದರೆ ಎಎಂಆರ್‌ ಡ್ಯಾಂನಲ್ಲಿ ಇದೀಗ ಕೇವಲ ಅರ್ಧ-ಮುಕ್ಕಾಲು ಮೀ. ಮಾತ್ರ ನೀರು ಸಂಗ್ರಹವಿದೆ. ಮಳೆ ಬಾರದಿದ್ದರೆ ತುಂಬೆ ಡ್ಯಾಂನಲ್ಲಿರುವ ನೀರು ಖಾಲಿಯಾದರೆ, ಎಎಂಆರ್‌ ಡ್ಯಾಂನ ನೀರಿಗೆ ನಿರೀಕ್ಷಿಸುವಂತಿಲ್ಲ. ಕಳೆದ ವರ್ಷ ಎ. 10ರಂದು ಎಎಂಆರ್‌ ಡ್ಯಾಂನಲ್ಲಿ 5.5 ಮೀಟರ್‌ ನೀರು ಸಂಗ್ರಹವಾಗಿತ್ತು.

ಈ ಬಾರಿ ಮೇ ತಿಂಗಳಿನಲ್ಲಿ ನೀರು ರೇಷನಿಂಗ್‌ ಮಾಡುವ ಬಗ್ಗೆ ಜಿಲ್ಲಾಡಳಿತ ಈ ಹಿಂದೆ ಸುಳಿವು ನೀಡಿತ್ತು. ಒಂದು ವೇಳೆ ಅದಕ್ಕೂ ಮುನ್ನ ಉತ್ತಮ ಮಳೆಯಾದರೆ ರೇಷನಿಂಗ್‌ ಅಗತ್ಯ ಇಲ್ಲ ಎಂದೂ ಹೇಳಲಾಗಿತ್ತು. ಆದರೆ, ಮೂರು-ನಾಲ್ಕು ದಿನದಲ್ಲಿ ಸುಬ್ರಹ್ಮಣ್ಯ ಸಹಿತ ವಿವಿಧೆಡೆ ಮಳೆಯಾದರೂ ನಿರೀಕ್ಷಿತ ಪ್ರಮಾಣದಲ್ಲಿ ತುಂಬೆ ಡ್ಯಾಂನಲ್ಲಿ ಸಂಗ್ರಹವಾಗದ ಕಾರಣ ಮೇ ತಿಂಗಳ ಮುನ್ನವೇ ನೀರು ರೇಷನಿಂಗ್‌ ಮಾಡಲು ನಿರ್ಧರಿಸಲಾಗಿದೆ.

ತುಂಬೆಯಿಂದ ಎಎಂಆರ್‌ ಡ್ಯಾಂ ಇರುವ ಪ್ರದೇಶದವರೆಗೆ ನದಿ ತೀರದಲ್ಲಿರುವ ರೈತರು ಅಧಿಕ ಸಾಮರ್ಥ್ಯದ ಪಂಪ್‌ ಮೂಲಕ ನೀರೆತ್ತುವುದ ರಿಂದ ತುಂಬೆ ಡ್ಯಾಂನಲ್ಲಿ ನೀರಿಗೆ ಕೊರತೆ ಎನ್ನಲಾಗಿದೆ. ಮೂಲದ ಪ್ರಕಾರ ಒಟ್ಟು 1,000 ಎಚ್‌ಪಿ ಸಾಮರ್ಥ್ಯದ ಪಂಪ್‌ಗ್ಳ ಮೂಲಕ ಈ ವ್ಯಾಪ್ತಿಯಲ್ಲಿ ತೋಟಗಳಿಗೆ ನೀರು ಬಳಸಲಾಗುತ್ತಿದೆ. ಹೀಗಾಗಿ ಡ್ಯಾಂನಲ್ಲಿ ನೀರು ಕಡಿಮೆ ಆಗುತ್ತಿದೆ ಎಂದು ಮನಗಂಡ ಜಿಲ್ಲಾಡಳಿತ ಇಂತಹ ಎಲ್ಲ ಪಂಪ್‌ಗ್ಳ ವಿದ್ಯುತ್‌ ಸಂಪರ್ಕವನ್ನು ತತ್‌ಕ್ಷಣವೇ ರದ್ದುಪಡಿಸುವಂತೆ ಮೆಸ್ಕಾಂಗೆ ಸೂಚಿಸಿದರೂ ಕೆಲವು ಪಂಪ್‌ಗ್ಳು ಚಾಲನೆಯಲ್ಲಿವೆ ಎಂದು ಮೂಲಗಳು ತಿಳಿಸಿವೆ.

2016; ನೀರಿಗಾಗಿ ಹಾಹಾಕಾರ
2016ರ ಆರಂಭದ ತಿಂಗಳಿನಿಂದ ಮಹಾ ನಗರ ಹಿಂದೆಂದೂ ಕಂಡರಿಯದ ಭೀಕರ ನೀರಿನ ಕೊರತೆ ಎದುರಿಸುವಂತಾಗಿತ್ತು. ತುಂಬೆ ಡ್ಯಾಂನಲ್ಲಿ ನೀರಿಲ್ಲದ ಪರಿಸ್ಥಿತಿ ಎದುರಾಗಿ, ನಗರದಲ್ಲಿ ಟ್ಯಾಂಕರ್‌ ನೀರು ಬಳಸಲಾಗಿತ್ತು. ಅದೂ ಖಾಲಿಯಾದಾಗ, ಖಾಸಗಿ ಬಾವಿಗಳಿಂದ ನೀರು ತರಿಸಲಾಗಿತ್ತು. ಅದೂ ಪೂರ್ಣವಾಗಿ ಸಾಧ್ಯವಾಗದಾಗ ಲಕ್ಯಾ ಡ್ಯಾಂ ನೀರನ್ನು “ಹಾಗೂ-ಹೀಗೂ’ ಮಾಡಿ ತರಿಸಲಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ 2017ರಲ್ಲಿ ಪ್ರತಿ 48 ಗಂಟೆ ನಿರಂತರ ನೀರು ಪೂರೈಕೆ ಮಾಡಿದರೆ, ಬಳಿಕದ 36 ಗಂಟೆ ನೀರು ಪೂರೈಕೆ ಸ್ಥಗಿತಗೊಳಿಸುವ ಮೂಲಕ ರೇಷನಿಂಗ್‌ ಆರಂಭಿಸಿತ್ತು.

ಕೈಗಾರಿಕೆಗಳಿಗೆ ನೀರು ಕಡಿತ
ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರಿಕೆಗೆ ಕೈಗಾರಿಕೆಗಳಿಗೆ ನೀಡುತ್ತಿರುವ ನೀರಿನ ಪ್ರಮಾಣವನ್ನು ಅರ್ಧದಷ್ಟು ಕಡಿತಗೊಳಿಸಲಾಗುತ್ತಿದೆ. ನಿತ್ಯ 18 ಎಂಜಿಡಿ ನೀರು ಬಳಕೆ ಮಾಡುತ್ತಿದ್ದ ಕೈಗಾರಿಕೆಗಳಿಗೆ ಕೇವಲ 10 ಎಂಜಿಡಿ ನೀರು ಬಳಸಲು ಸೂಚಿಸಲಾಗಿದೆ. ತುಂಬೆ ಡ್ಯಾಂನಲ್ಲಿ ನೀರಿನ ಒಳಹರಿವು ಕಡಿಮೆಯಾದ ಕಾರಣ, ಪ್ರಸ್ತುತ ಅವಧಿಯಲ್ಲಿ ಮಳೆ ಕೂಡ ಬಾರದ ಹಿನ್ನೆಲೆಯಲ್ಲಿ ನಗರಕ್ಕೆ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಕೈಗಾರಿಕೆಗಳಿಗೆ ನೀರು ರೇಷನಿಂಗ್‌ ಮಾರ್ಚ್‌ ಕೊನೆಯಿಂದಲೇ ಆರಂಭಿಸಲಾಗಿತ್ತು. ನೀರು ಕಟ್‌ ಮಾಡಿರುವ ಹಿನ್ನೆಲೆಯಲ್ಲಿ ಮೇಲುಸ್ತುವಾರಿಗೆ ತುಂಬೆ, ಎಎಂಆರ್‌ ಡ್ಯಾಂಗಳಲ್ಲಿ ಪಾಲಿಕೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ರಾತ್ರಿ-ಹಗಲು ಎರಡು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಈಗಿನ ನೀರು 48 ದಿನಕ್ಕೆ!
ನಗರಕ್ಕೆ ದಿನಂಪ್ರತಿ 160 ಎಂಎಲ್‌ಡಿ ನೀರು ತುಂಬೆ ಡ್ಯಾಂನಿಂದ ಸರಬರಾಜಾಗುತ್ತಿದೆ. ಈ ಪ್ರಮಾಣವನ್ನು ಲೆಕ್ಕಹಾಕಿ 4 ಮೀ.ಎತ್ತರದಲ್ಲಿ 5.21 ಮಿಲಿಯನ್‌ ಕ್ಯುಬಿಕ್‌ ಮೀಟರ್‌ ನೀರು ಸಂಗ್ರಹ ಮಾಡಬಹುದು. ಇದು 23 ದಿನಗಳವರೆಗೆ ನಗರಕ್ಕೆ ನೀರು ಪೂರೈಸಬಹುದು. 4.50 ಮೀ. ಎತ್ತರಕ್ಕೆ ಸಂಗ್ರಹಿಸಿದರೆ 6.40 ಮಿ.ಕ್ಯು.ಮೀ. ನೀರು ಸಂಗ್ರಹವಾದರೆ 30 ದಿನ, 5 ಮೀ. ಎತ್ತರಕ್ಕೆ ನೀರು ನಿಲ್ಲಿಸಿದರೆ 7.71 ಮಿ.ಕ್ಯು.ಮೀ.ನೀರು ಸಂಗ್ರಹವಾಗಿ 40 ದಿನ, 5.50 ಮೀ. ಎತ್ತರಕ್ಕೆ ಸಂಗ್ರಹ ಮಾಡಿದರೆ 9.17 ಮಿ.ಕ್ಯು.ಮೀ. ನೀರು ಸಂಗ್ರಹವಾಗಿ 48 ದಿನಗಳವರೆಗೆ ನೀರು ಪೂರೈಕೆ ಮಾಡಬಹುದು. 6 ಮೀ.ಎತ್ತರಕ್ಕೆ ನಿಲ್ಲಿಸಿದರೆ 10.83 ಮಿ.ಕ್ಯು.ಮೀ. ನೀರು ದಾಸ್ತಾನು ಆಗಿ 55 ದಿನ ಪೂರೈಕೆ ಮಾಡಬಹುದು.

ನೀರು; ಮಿತವಾಗಿ ಬಳಸಿ
ಮಳೆ ಬಾರದಿದ್ದರೆ ನಗರಕ್ಕೆ ಮುಂದಿನ ದಿನಗಳಲ್ಲಿ ಬಹುದೊಡ್ಡ ಆತಂಕ ಎದುರಾಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ ಲಭ್ಯ ನೀರನ್ನು ಹಿತಮಿತವಾಗಿ ಬಳಸುವ ಬಗ್ಗೆಯೇ ವಿಶೆಷ ಆದ್ಯತೆ ನೀಡಬೇಕಿದೆ. ನೀರನ್ನು ಪೋಲು ಮಾಡದೇ, ಅಪವ್ಯಯವಾಗದಂತೆ ಮುಂಜಾಗ್ರತೆ ವಹಿಸಿ ಮಳೆ ಪ್ರಾರಂಭವಾಗುವವರೆಗೆ ಲಭ್ಯ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಲು ಮಾತ್ರ ಹೆಚ್ಚು ಒತ್ತು ನೀಡಬೇಕು. ವಾಹನ ತೊಳೆಯುವುದು ಅಥವಾ ಇತರ ಬಳಕೆಗಳನ್ನು ಕಡಿಮೆ ಮಾಡಬೇಕಿದೆ.

 ಒಂದೆರಡು ದಿನದಲ್ಲಿ ತೀರ್ಮಾನ
ಪ್ರಸ್ತುತ ಸಂದರ್ಭ ಉತ್ತಮ ಮಳೆಯಾದರೆ ನಗರಕ್ಕೆ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಆದರೆ, ಮಳೆ ಬಾರದ ಹಿನ್ನೆಲೆಯಲ್ಲಿ ಮುಂದೆ ಸಮಸ್ಯೆ ಆಗಬಾರದು ಎಂಬುದಕ್ಕೆ ಪೂರ್ವಭಾವಿಯಾಗಿ ನೀರು ರೇಷನಿಂಗ್‌ ಗೆ ನಿರ್ಧರಿಸಲಾಗಿದೆ. ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಒಂದೆರಡು ದಿನದಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.
– ಶಶಿಕಾಂತ್‌ ಸೆಂಥಿಲ್‌, ದ.ಕ.ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.