ವಾರಾಂತ್ಯ ಕರ್ಫ್ಯೂ: ದ.ಕ.ದಲ್ಲಿ ಇನ್ನೆರಡು ದಿನ ದಿನಸಿ, ತರಕಾರಿ ಅಲಭ್ಯ
Team Udayavani, Jun 25, 2021, 8:00 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಹಾಲು, ಪೇಪರ್, ಮೆಡಿಕಲ್ ಹಾಗೂ ತುರ್ತು ಸೇವೆಗಳಿಗಷ್ಟೇ ಅವಕಾಶ ಕಲ್ಪಿಸಲಾಗಿದೆ. ದಿನಸಿ ಅಂಗಡಿ, ಮದ್ಯದಂಗಡಿ ಸೇರಿದಂತೆ ಇತರ ಎಲ್ಲವೂ ಬಂದ್ ಆಗಲಿವೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಎಲ್ಲ ರಾಜ್ಯ ಮತ್ತು ಕೇಂದ್ರ ಸರಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ತುರ್ತು ಅಗತ್ಯ ಸೇವೆಗಳು ಮತ್ತು ಕೊರೊನಾ ಕಂಟೈನ್‌ಮೆಂಟ್ ಕರ್ತವ್ಯಗಳ ನಿರ್ವಹಣೆಗೆ ಅನುಮತಿ ಇರಲಿದೆ. ಸಂಬಂಧಿತ ಅಧಿಕಾರಿಗಳು ಮತ್ತು ಸಿಬಂದಿಯ ಸಂಚಾರಕ್ಕೆ ಅನುಮತಿ ಇದೆ.
ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24×7 ಕಾರ್ಯಾಚರಣೆಗಳ ಅಗತ್ಯವಿರುವ ಎಲ್ಲ ಕೈಗಾರಿಕೆಗಳು/ ಕಂಪೆನಿಗಳು/ ಸಂಸ್ಥೆಗಳು ಕಾರ್ಯ ನಿರ್ವಹಿಸಬಹುದು. ಅಂತಹ ನೌಕರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು. ಸಾಧ್ಯವಾದಷ್ಟು ಮಟ್ಟಿಗೆ ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಎಪಿಎಂಸಿ ಮಾರ್ಕೆಟ್ ಬಂದ್ :
ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಎಪಿಎಂಸಿಯ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ವ್ಯಾಪಾರ ಸಹಿತ ಎಲ್ಲ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- ಟೆಲಿಕಾಂ ಮತ್ತು ಇಂಟರ್‌ನೆಟ್ ಸೇವೆಯ ನೌಕರರು ಅವರ ವಾಹನಗಳಲ್ಲಿ ಸಂಸ್ಥೆಯ ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು. ಐಟಿ ಮತ್ತು ಐಟಿಇಎಸ್ ಕಂಪೆನಿಗಳು, ಸಂಸ್ಥೆಯ ಅಗತ್ಯ ಸಿಬಂದಿ, ನೌಕರರು ಮಾತ್ರವೇ ಕಚೇರಿಯಿಂದ ಕಾರ್ಯ ನಿರ್ವಹಿಸುವುದು.
- ರೋಗಿಗಳು ಮತ್ತು ಪರಿಚಾರಕರು/ ತುರ್ತು ಅಗತ್ಯವಿರುವ ವ್ಯಕ್ತಿಗಳು, ಲಸಿಕೆ ತೆಗೆದುಕೊಳ್ಳುವವರಿಗೆ ದಾಖಲೆಗಳೊಂದಿಗೆ ಸಂಚಾರಕ್ಕೆ ಅನುಮತಿ ಇರುತ್ತದೆ.
- ರೆಸ್ಟೋರೆಂಟ್, ಹೊಟೇಲ್‌ಗಳಿಂದ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿಗೆ ಮಾತ್ರ ಅನುಮತಿ.
- ಅಂತರ್ ಜಿಲ್ಲಾ ಬಸ್‌ಗಳು, ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ವಿಮಾನ ನಿಲ್ದಾಣಗಳು, ಬಸ್ ಟರ್ಮಿನಲ್‌ಗಳು/ ರೈಲು ನಿಲ್ದಾಣಗಳಿಗೆ ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ಇದೆ. ಪ್ರಯಾಣದ ದಾಖಲೆ ಕೈಯಲ್ಲಿರಬೇಕು.
- ಪೂರ್ವ ನಿಗದಿತ ಮದುವೆಗೆ ಮನೆಯಲ್ಲಿ ಮಾತ್ರ ಅವಕಾಶ. ಗರಿಷ್ಠ 25 ಜನರ ಪಾಲ್ಗೊಳ್ಳುವಿಕೆಯಲ್ಲಿ ನಡೆಸಬಹುದು.
- ಅಂತ್ಯಸಂಸ್ಕಾರಕ್ಕೆ ಗರಿಷ್ಠ 5 ಜನರ ಮಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.