ರಾಷ್ಟ್ರಪತಿಗೆ ಮಂಗಳೂರಿನಲ್ಲಿ ಸ್ವಾಗತ
Team Udayavani, Dec 28, 2018, 10:00 AM IST
ಮಹಾನಗರ : ಉಡುಪಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು ಗುರುವಾರ ಬೆಳಗ್ಗೆ ಮಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಿದರು. ಹೊಸದಿಲ್ಲಿಯಿಂದ ಯುಸೇನೆಯ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 10.45ಕ್ಕೆ ಆಗಮಿಸಿದ ರಾಷ್ಟ್ರಪತಿಯವರನ್ನು ರಾಜ್ಯಪಾಲ ವಾಜೂಬಾೖ ವಾಲಾ ಅವರು ಸ್ವಾಗತಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಮೇಯರ್ ಭಾಸ್ಕರ್ ಕೆ., ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿಕಾಂತೇಗೌಡ, ಡಿ.ಸಿ.ಪಿ. ಉಮಾಪ್ರಶಾಂತ್, ಸಹಾಯಕ ಕಮಿಷನರ್ ರವಿಚಂದ್ರ ನಾಯಕ್, ಮನಪಾ ಆಯಕ್ತ ಮೊಹಮ್ಮದ್ ನಜೀರ್, ಡಿ.ಡಿ.ಎಲ್.ಆರ್. ಕುಸುಮಾಧರ ಅವರು ಉಪಸ್ಥಿತರಿದ್ದರು. 11 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿ ಕಾಪ್ಟರ್ ಮೂಲಕ ರಾಷ್ಟ್ರಪತಿಗಳು ಉಡುಪಿಗೆ ತೆರಳಿದರು.
ರಾಷ್ಟ್ರಪತಿ ಆಗಮಿಸುವ ಅರ್ಧ ತಾಸು ಮುನ್ನ ರಾಜ್ಯಪಾಲ ವಾಜೂಬಾೖ ವಾಲಾ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಬಳಿಕ ಅವರು ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿ ಪಡೆದರು. ಇದೇ ವೇಳೆ ಸಚಿವ ಯು.ಟಿ. ಖಾದರ್, ಮೇಯರ್ ಭಾಸ್ಕರ್ ಕೆ. ಜತೆಗಿದ್ದರು. ಉಡುಪಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 1.20ಕ್ಕೆ ಆಗಮಿಸಿದ ರಾಷ್ಟ್ರಪತಿಗಳನ್ನು ಜಿಲ್ಲಾಧಿಕಾರಿ ಸಹಿತ ಹಲವರು ಬರಮಾಡಿಕೊಂಡರು. ಬಳಿಕ 1.30ಕ್ಕೆ ವಾಯುಸೇನೆ ವಿಶೇಷ ವಿಮಾನದಲ್ಲಿ ಮುಂಬಯಿಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.