ವೆನ್ಲಾಕ್ ಜಿಲ್ಲಾ ಆಸ್ಪತ್ರೆ ದೇಶಕ್ಕೇ ಮಾದರಿ: ಸಚಿವ ರೈ
Team Udayavani, Mar 11, 2018, 6:35 AM IST
ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯು ಪ್ರಾದೇಶಿಕ ಆರೋಗ್ಯ ಕೇಂದ್ರದ ಮಾದರಿಯಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಸೌಲಭ್ಯದ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗಿದೆ ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.
ಅವರು ಶನಿವಾರ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗ, ಮಕ್ಕಳ ಆರೋಗ್ಯ
ಕೇಂದ್ರ, ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ, ಜಿಲ್ಲಾ ಸಂಯುಕ್ತ ಆಯುಷ್ ಆಸ್ಪತ್ರೆ ಕಟ್ಟಡಗಳ ಶಂಕು
ಸ್ಥಾಪನೆ ಹಾಗೂ ಎಚ್‌ಎಲ್‌ಎಲ್ ಎಂಆರ್‌ಐ ವಿಭಾಗದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
50 ಹಾಸಿಗೆ ಸಾಮರ್ಥ್ಯದ ವೆನ್ಲಾಕ್ ಜಿಲ್ಲಾ ಸಂಯುಕ್ತ ಆಯುಷ್ ಆಸ್ಪತ್ರೆ ಕಟ್ಟಡ 10 ಕೋಟಿ. ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿದೆ. ಈ ಮೂಲಕ ದೇಶದಲ್ಲೇ ಮೊದಲ ಸರಕಾರಿ ಸಂಯುಕ್ತ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೂ ಸಂಸ್ಥೆ ಪಾತ್ರವಾಗಿದೆ ಎಂದರು.
ಲೇಡಿಗೋಶನ್ ಕಟ್ಟಡ ಶೀಘ್ರ ಉದ್ಘಾಟನೆ
ಲೇಡಿಗೋಶನ್ ಆಸ್ಪತ್ರೆಯ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, ಕೇಂದ್ರ ಪೆಟ್ರೋಲಿಯಂ ಹಾಗೂ ರಾಜ್ಯ ಆರೋಗ್ಯ ಸಚಿವರ ಉಪಸ್ಥಿತಿಯಲ್ಲಿ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ರೈ ಹೇಳಿದರು.
ಬೆಂಗಳೂರು ಮಾದರಿ ಮಂಗಳೂರಿನಲ್ಲಿಯೂ ಮಾಜಿ ಪ್ರಧಾನಿ ದಿ| ಇಂದಿರಾಗಾಂಧಿ ಹೆಸರಿನಲ್ಲಿ ಪ್ರಸ್ತುತ ಇರುವ ಆರ್‌ಎಪಿಸಿಸಿ ಆಸ್ಪತ್ರೆ ಮೇಲ್ದರ್ಜೆಗೇರಲಿದೆ. ಇದಕ್ಕಾಗಿ ಈಗಾಗಲೇ 3 ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಬೆಂಗಳೂರು ನಗರ ಹೊರತುಪಡಿಸಿ 20 ಹಾಸಿಗೆಗಳ ಐಸಿಯು ಹೊಂದಿರುವ ಸರಕಾರಿ ಆಸ್ಪತ್ರೆ ವೆನಾÉಕ್ ಆಗಿದ್ದು,ಮುಂದಿನ 2 ವರ್ಷಗಳಲ್ಲಿ ಆಸ್ಪತ್ರೆಯು ಇನ್ನಷ್ಟು ಹೊಸ ಸೌಲಭ್ಯಗಳೊಂದಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಲಿದೆ ಎಂದು ಖಾದರ್ ವಿವರಿಸಿದರು.
ಶಾಸಕ ಜೆ.ಆರ್. ಲೋಬೋ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ಭಾಸ್ಕರ ಕೆ.,ಉಪ ಮೇಯರ್ ಮುಹಮ್ಮದ್ ಕೆ.,
ತಾ.ಪಂ. ಅಧ್ಯಕ್ಷ ಮುಹಮ್ಮದ್ ಮೋನು,ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಫಾದರ್ ಮುಲ್ಲರ್ ಹೋಮಿಯೋಪತಿ ವಿಭಾಗದ ಡಾ| ಶಿವಪ್ರಸಾದ್, ಆಳ್ವಾಸ್ ನ್ಯಾಚುರೋ ಪತಿ ಕಾಲೇಜಿನ ಪ್ರಿನ್ಸಿಪಾಲ್ ಡಾ| ವನಿತಾ ಶೆಟ್ಟಿ, ಡಾ| ಸಂತೋಷ್, ಎ.ಸಿ. ವಿನಯ್‌ರಾಜ್, ಅಬ್ದುಲ್ ಜಬ್ಟಾರ್, ಡಾ| ಆಶಾ ಜ್ಯೋತಿ ರೈ, ಕೆಎಂಸಿ ಡೀನ್ ಡಾ| ವೆಂಕಟರಾಯ ಪ್ರಭು, ಲೇಡಿಗೋಶನ್ ಆಸ್ಪತ್ರೆ ಅಧೀಕ್ಷಕಿ ಡಾ| ಸವಿತಾ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ ರಾವ್ ಸ್ವಾಗತಿಸಿದರು.
ಒಂದೇ ಸೂರಿನಡಿ ಅಲೋಪತಿ- ಆಯುಷ್
ವೆನ್ಲಾಕ್ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ಆಯುಷ್ ಆಸ್ಪತ್ರೆ ನಿರ್ಮಾಣವಾಗುವ ಮೂಲಕ ಒಂದೇ ಸೂರಿನಡಿ ಅಲೋಪತಿ ಹಾಗೂ ಆಯುಷ್‌ಗೆ ಸಂಬಂಧಿಸಿದ ಚಿಕಿತ್ಸೆಗಳು ಸಾರ್ವಜನಿಕರಿಗೆ ಲಭ್ಯವಾಗಲಿವೆ ಎಂದು ಮುಖ್ಯ ಅತಿಥಿ ಆಹಾರ ಸಚಿವ ಯು.ಟಿ. ಖಾದರ್ ಹೇಳಿದರು.
95 ಮಂದಿಗೆ ಉಚಿತ ಸ್ಕ್ಯಾನಿಂಗ್
ಹಿಂದೂಸ್ಥಾನ್ ಹೆಲ್ತ್‌ಕೇರ್ ಲಿ. ವತಿಯಿಂದ ವೆನಾÉಕ್ ಆಸ್ಪತ್ರೆಯಲ್ಲಿ 2017ರ ಎ. 1ರಂದು ಎಂಆರ್‌ಐ ಸ್ಕ್ಯಾನಿಂಗ್ ವಿಭಾಗ ಆರಂಭಗೊಂಡಿದ್ದು, ಈವರೆಗೆ 2,265 ಎಂಆರ್‌ಐ ಸ್ಕ್ಯಾನಿಂಗ್‌ಗಳನ್ನು ಮಾಡಲಾಗಿದೆ. ಅದರಲ್ಲಿ 95 ಮಂದಿಗೆ ಸಂಪೂರ್ಣವಾಗಿ ಉಚಿತವಾಗಿ ಮಾಡಲಾಗಿದೆ ಎಂದರು.
ಸೂಪರ್ ಸ್ಪೆಷಾಲಿಟಿ- ಹೊಸ ಸೌಲಭ್ಯ
ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ಮಾತನಾಡಿ, ವೆನ್ಲಾಕ್ ಆಸ್ಪತ್ರೆ ಮೇಲ್ದರ್ಜೆಗೇರಿಸಲು 2017-18ನೇ ಸಾಲಿನಲ್ಲಿ ಸರಕಾರದಿಂದ ಮಂಜೂರಾದ 10 ಕೋಟಿ ರೂ. ಅನುದಾನದಲ್ಲಿ ಹೆಚ್ಚುವರಿಯಾಗಿ 124 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಮೆಡಿಕಲ್ ವಿಭಾಗದ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ. 176 ಹಾಸಿಗೆಗಳ ನೂತನ ಮೆಡಿಸಿನ್ ಬ್ಲಾಕ್ ಕಟ್ಟಡಕ್ಕೆ ಹೊಂದಿಕೊಂಡಂತೆ ಈ ಕಟ್ಟಡ ನಿರ್ಮಾಣಗೊಳ್ಳಲಿದ್ದು, ಇದರಲ್ಲಿ ಕಾರ್ಡಿಯಾಕ್, ಎಂಐಸಿಯು, ಎಂಡೋಸ್ಕೋಪಿ, ಕ್ಯಾಥ್‌ಲ್ಯಾಬ್ ವಿಭಾಗ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.