ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ
Team Udayavani, Feb 10, 2018, 6:00 AM IST
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ಪಶ್ಚಿಮ ವಲಯದ ಐಜಿಪಿಯಾಗಿ ಜೆ. ಅರುಣ್ ಚಕ್ರವರ್ತಿ ಅವರನ್ನು ನೇಮಕ ಮಾಡಲಾಗಿದೆ. ಅವರು ಈವರೆಗೆ ಬೆಂಗಳೂರಿನಲ್ಲಿ ಆಂತರಿಕ ಭದ್ರತಾ ವಿಭಾಗದ ಐಜಿಪಿ ಆಗಿದ್ದರು.
ಪ್ರಸ್ತುತ ಇರುವ ಪಶ್ಚಿಮ ವಲಯದ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾಯಿಸಿ ಬೆಂಗಳೂರಿನ ಇಕನಾಮಿಕ್ ಅಫೇರ್ನ ಅಪರಾಧ ತನಿಖಾ ವಿಭಾಗದ ಐಜಿಪಿ ಆಗಿ ನೇಮಕ ಮಾಡಲಾಗಿದೆ.
ಅರುಣ್ ಚಕ್ರವರ್ತಿ ಈ ಹಿಂದೆ 2016ರಲ್ಲಿ ಪಶ್ಚಿಮ ವಲಯದ ಐಜಿಪಿ ಆಗಿ ಸೇವೆ ಸಲ್ಲಿಸಿದ್ದರು. 2016 ಮೇ 30ರಿಂದ 2016 ಡಿ. 31ರ ತನಕ ಅವರು ಇಲ್ಲಿ ಸೇವೆ ಸಲ್ಲಿಸಿದ್ದು, ಇದೀಗ 2018ರಲ್ಲಿ ಮತ್ತೆ ಪಶ್ಚಿಮ ವಲಯದ ಐಜಿಪಿ ಆಗಿ ನಿಯುಕ್ತರಾಗಿದ್ದಾರೆ.
ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ಸುಧೀರ್ ಕುಮಾರ್ ರೆಡ್ಡಿ ಅವರು ವರ್ಗಾವಣೆಯಾದ ಕೆಲವೇ ದಿನಗಳಲ್ಲಿ ಐಜಿಪಿ ಹೇಮಂತ್ ನಿಂಬಾಳ್ಕರ್ ಕೂಡ ವರ್ಗವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.