ಮತ ಚಲಾವಣೆಯಿಂದ ನಮಗೇನು ಪ್ರಯೋಜನ?
Team Udayavani, Mar 14, 2018, 10:30 AM IST
ಮಹಾನಗರ: ನಮಗೆ ಮತ ಚಲಾಯಿಸುವ ಹಕ್ಕು ದೊರೆತಿದೆ. ನಾವು ಮತದಾನ ಮಾಡುತ್ತೇವೆ ಅದರಿಂದ ನಮಗೆ ಏನು ಪ್ರಯೋಜನ ಎಂದು ಲಿಂಗತ್ವ ಅಲ್ಪಸಂಖ್ಯಾಕ, ಆರ್.ಜೆ. ಕಾಜಲ್ ಪ್ರಶ್ನಿಸಿದರು. ಲಿಂಗತ್ವ ಅಲ್ಪಸಂಖ್ಯಾಕರಲ್ಲಿ ಮತದಾನದ ಕುರಿತು ಜಾಗೃತಿ
ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾನದ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ಮತ ಚಲಾವಣೆಯಿಂದ ನಮಗೆ ನಮ್ಮ ಹಕ್ಕುಗಳು ಸಿಗುತ್ತದೆ ಎಂಬ ನಂಬಿಕೆ ನಮಗಿಲ್ಲ. ಉದ್ಯೋಗ, ವಸತಿ ಸೌಲಭ್ಯಗಳಿಲ್ಲದೆ ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಈ ಸಮಸ್ಯೆಗೆ ನಮಗೆ ಈವರೆಗೆ ಪರಿಹಾರ ಸಿಕ್ಕಿಲ್ಲ. ಮತ ಚಲಾಯಿಸುವುದರಿಂದ ನಮ್ಮ ಸಮಸ್ಯೆಗೆ ಪರಿಹಾರ ಸಿಗುವುದಾದರೆ ನಾವು ಮುಂದೆ ಬರುತ್ತೇವೆ. ಲಿಂಗತ್ವ ಅಲ್ಪಸಂಖ್ಯಾಕರರಾದ ನಮಗೆ ಮತದಾನದ ಹಕ್ಕು ಮಾತ್ರವಲ್ಲ, ಸಾಮಾನ್ಯ ಜನರಿಗೆ ದೊರೆಯುವ ಎಲ್ಲ ಹಕ್ಕುಗಳು ದೊರೆಯಬೇಕು ಎಂದು ಅವರು ಮನವಿ ಮಾಡಿಕೊಂಡರು.
ಅಲ್ಪಸಂಖ್ಯಾಕರು ಪ್ರಮಾಣಿಕವಾಗಿ ಭಾಗವಹಿಸಲಿ
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನ ಗೌಡ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾಕರನ್ನು ತುಚ್ಚವಾಗಿ ಕಾಣುವ ಸ್ಥಿತಿ ಈಗಿಲ್ಲ. 2012ರಲ್ಲಿ ಉಚ್ಚ ನ್ಯಾಯಾಲಯ ಲಿಂಗತ್ವ ಅಲ್ಪಸಂಖ್ಯಾಕರನ್ನು 4ನೇ ದರ್ಜೆಯ ನೌಕಕರಾಗಿ ನೇಮಕ ಮಾಡಿತ್ತು. ಇವರ ಪರವಾಗಿ ನ್ಯಾಯಲಯ ನೀಡಿದ ಆದೇಶಗಳು ಸರಿಯಾಗಿ ಪಾಲನೆಯಾದರೆ ಲಿಂಗತ್ವ ಅಲ್ಪಸಂಖ್ಯಾಕರರ ಜೀವನ ಇನ್ನಷ್ಟು ಸುಖಕರವಾಗಲಿದೆ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲ ಅಲ್ಪಸಂಖ್ಯಾಕರು ಪ್ರಮಾಣಿಕವಾಗಿ ಭಾಗವಹಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಲಿಂಗತ್ವ ಅಲ್ಪಸಂಖ್ಯಾಕಕರ ರಾಜ್ಯ ಮಟ್ಟದ ಸಂಘಟನೆ ಸಾರಥ್ಯದ ಪ್ರತಿನಿಧಿ ಸವಿತಾ, ನವಸಹಜ ಸಂಘಟನೆಯ ಪ್ರವೀಣ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ| ರಾಜೇಶ್ವರಿ ದೇವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್, ರುಡ್‌ಸೆಟ್‌ನ ಅಜಿತ್ ಕೆ.ಆರ್., ಗಿರಿಧರ್ ಸಾಲ್ಯಾನ್ ಉಪಸ್ಥಿತರಿದ್ದರು.
ಹಕ್ಕು ಎಲ್ಲರಿಗೂ ಲಭಿಸಲಿ
ಸಂವಿಧಾನದತ್ತವಾಗಿರುವ ಎಲ್ಲ ಹಕ್ಕುಗಳು ಪ್ರತಿಯೊಬ್ಬ ನಾಗರಿಕನಿಗೂ ಲಭಿಸಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಲಿಂಗತ್ವ ಅಲ್ಪಸಂಖ್ಯಾಕಕರಿಗೆ ಮತದಾನದ ಹಕ್ಕು ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 250 ಮಂದಿ ಲಿಂಗತ್ವ ಅಲ್ಪಸಂಖ್ಯಾಕರಿದ್ದು, ಅದರಲ್ಲಿ ಬಹುತೇಕ ಮಂದಿ ವಲಸೆ ಬಂದಿರುವುದರಿಂದ ಅವರಿಗೆ ಸರಿಯಾದ ವಿಳಾಸವಿಲ್ಲದೆ ಸಮಸ್ಯೆಯಾಗಿದೆ. ಶೀಘ್ರವೇ ಲಿಂಗತ್ವ ಅಲ್ಪಸಂಖ್ಯಾಕರಿಗೆ ವಾಸಸ್ಥಳ ದೃಢೀಕರಣ ನೀಡುವ ಬಗ್ಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳಲಿದ್ದೇವೆ.
– ಎಂ.ಆರ್. ರವಿ,
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪಂಚಾಯತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.