ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
Team Udayavani, Jan 12, 2025, 2:04 AM IST
ಮಂಗಳೂರು: ನಕ್ಸಲರ ಶರಣಾಗತಿ ಕುರಿತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿಕೆಗೆ ಶನಿವಾರ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಣ್ಣಾಮಲೈ ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭ ಸರಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ.
ಆರು ನಕ್ಸಲರು ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಲಾಗಿದೆ. ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬಂದಿದ್ದಾರೆ. ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ ಎಂದು ಮುಖ್ಯಮಂತ್ರಿ ಹೇಳಿದರು. ಕಂಬಳದ ಕುರಿತು ಯೋಜನೆ ರೂಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಸರಗೋಡು ಸಂಸದ ಉನ್ನಿತ್ತಾನ್, ಚಿತ್ರನಟಿ ಶಾನ್ವಿ ಶ್ರೀವಾತ್ಸವ್, ಪ್ರಮುಖರಾದ ವೆಂಕಪ್ಪ ಕಾಜವ, ಡಾ| ಎಂ.ಎನ್. ರಾಜೇಂದ್ರ ಕುಮಾರ್, ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ಪ್ರೊ| ಎಂ.ಬಿ.ಪುರಾಣಿಕ್, ರೋಹನ್ ಮೊಂತೇರೋ, ಹರೀಶ್ ಕುಮಾರ್, ನವಾಜ್ ನರಿಂಗಾನ ಮುಂತಾದವರು ಉಪಸ್ಥಿತರಿದ್ದರು.
ಸಿಎಂ ಎದುರು ಪ್ರತಿಭಟನೆಗೆ ಸಿದ್ಧತೆ: ಡಿವೈಎಫ್‌ಐ ಕಾರ್ಯಕರ್ತರು ವಶಕ್ಕೆ
ಈ ಹಿಂದೆ ಕೆಲವು ಡಿವೈಎಫ್ಐ ಪ್ರತಿಭಟನೆ ಕಾರಣ ಮುಂದಿಟ್ಟು ಪ್ರಮುಖರ ವಿರುದ್ಧ ಕೇಸು ದಾಖಲಿಸಿರುವ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ, ಸಿಎಂ ಸಿದ್ದರಾಮಯ್ಯ ಎದುರಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದ ಡಿವೈಎಫ್‌ಐ ಕಾರ್ಯ ಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನರಿಂಗಾನ ಕಂಬಳದಲ್ಲಿ ಭಾಗವಹಿಸಲು ಸಿಎಂ ವಿಮಾನ ನಿಲ್ದಾಣದಿಂದ ನರಿಂಗಾನಕ್ಕೆ ತೆರಳುವ ವೇಳೆ ನಂತೂರು ಪದವು ಜಂಕ್ಷನ್ ಬಳಿ ಸಿಎಂ ಕಾರಿಗೆ ಮುತ್ತಿಗೆ ಹಾಕಲು ಡಿವೈಎಫ್‌ಐ ನಿರ್ಧರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.