ವಿಟ್ಲ ತಾ| ಘೋಷಣೆ ಆಗ್ರಹಿಸಿ ಕಾರ್ಡ್‌ ಚಳವಳಿಗೆ ಚಾಲನೆ


Team Udayavani, Feb 3, 2018, 3:07 PM IST

3-Feb-14.jpg

ವಿಟ್ಲ : ವಿಟ್ಲ ತಾ| ರಚನೆ ಬಗ್ಗೆ ರೈತ ಸಂಘದ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿದ್ದು, ಸೂಕ್ತ ಸ್ಪಂದನೆ ಭರವಸೆ ನೀಡಿದ್ದರು. ಈ ಬಗ್ಗೆ ಅಧಿಕಾರಿ ವರ್ಗ ಯಾವುದೇ ಪತ್ರ ವ್ಯವಹಾರ ನಡೆಸಲಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ವಿಟ್ಲ ತಾ| ಘೋಷಣೆ ಮಾಡಬೇಕೆಂಬ ಆಗ್ರಹದೊಂದಿಗೆ ಮತ್ತೆ ಹೋರಾಟಗಾರರ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆ ದ.ಕ. ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಹೇಳಿದರು. ಅವರು ಶುಕ್ರವಾರ ವಿಟ್ಲ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ವಿಟ್ಲ ತಾ| ರಚನೆಗೆ ಆಗ್ರಹಿಸಿ ನಡೆಯುವ ಕಾರ್ಡ್‌ ಚಳವಳಿಗೆ ಚಾಲನೆ ನೀಡಿ ಮಾತನಾಡಿದರು.

ಉಗ್ರ ಹೋರಾಟ
ಮುಖ್ಯಮಂತ್ರಿ ಅವರಿಗೆ ಅಂಚೆ ಕಾರ್ಡ್‌ನಲ್ಲಿ ಪತ್ರ ಬರೆದು, ವಿಟ್ಲ ತಾ| ಘೋಷಣೆ ಮಾಡಬೇಕೆಂದು ಆಗ್ರಹಿಸಿ ಚಳವಳಿ ಆರಂಭಿಸಲಾಗಿದೆ. ಕಾಗದ ಪತ್ರದ ಮೂಲಕ 4 ದಶಕಗಳಿಂದ ತಾ| ರಚನೆ ಬಗ್ಗೆ ವಿವಿಧ ಸಮಿತಿಗಳ ಮುಂದೆ ದಾಖಲೆ ಹಾಜರುಪಡಿಸಲಾಗಿದೆ. ವಿಟ್ಲವನ್ನು ಸಾಂಕೇತಿಕವಾಗಿ ಬಂದ್‌ ಮಾಡುವ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ. ಇನ್ನು ಮುಂದೆಯೂ ನಿರ್ಲಕ್ಷಿಸಿದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದರು.

ಮೋಹನದಾಸ ಉಕ್ಕುಡ ಅವರು ಕಾರ್ಡ್‌ ಅಂಚೆ ಪೆಟ್ಟಿಗೆಗೆ ಹಾಕುವ ಮೂಲಕ ಕಾರ್ಡ್‌ ಚಳವಳಿಗೆ ಚಾಲನೆ ನೀಡಿದರು. ಹಿರಿಯ ಹೋರಾಟಗಾರ ಮುರುವ ನಡುಮನೆ ಮಹಾಬಲ ಭಟ್‌, ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ನಾರಾಯಣ ಯಾನೆ ಬಟ್ಟು ಸ್ವಾಮಿ, ವಿಟ್ಲ ಗ್ರಾ.ಪಂ. ಮಾಜಿ ಸದಸ್ಯ ಕೂಡೂರು ವಸಂತ ಶೆಟ್ಟಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ನಿರ್ದೇಶಕ ಉದಯಕುಮಾರ್‌ ಆಲಂಗಾರು, ಮಹಮ್ಮದ್‌, ಲಿಂಗಪ್ಪ ಗೌಡ, ಮಹಾಬಲ ಶೆಟ್ಟಿ ಮೂಡಂಬೈಲು ಮತ್ತಿತರರು ಉಪಸ್ಥಿತರಿದ್ದರು.

ವಿಟ್ಲ  ನಿರ್ಲಕ್ಷ್ಯ ಸರಿಯಲ್ಲ
ಸಾಮಾಜಿಕ ಹೋರಾಟಗಾರ ಡಾ| ಇರ್ಮಾಡಿ ಶರಶ್ಚಂದ್ರ ಶೆಟ್ಟಿ ಮಾತನಾಡಿ, ಹೋರಾಟಗಳಿಗೆ ಜನರ ಸ್ಪಂದನೆ ಸಿಕ್ಕಾಗ ರಾಜಕೀಯ ಇಚ್ಛಾಶಕ್ತಿಯೂ ಜಾಗೃತವಾಗುತ್ತದೆ. ಭೌಗೋಳಿಕವಾಗಿ ಎಲ್ಲ ಅರ್ಹತೆ ಇದ್ದರೂ ವಿಟ್ಲವನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯಲ್ಲ. ವಿವಿಧ ಸಂಘಟನೆಗಳ ಜತೆ ಸೇರಿಕೊಂಡು ಹೋರಾಟದ ಸ್ವರೂಪ ಬದಲಿಸಿದಲ್ಲಿ ಮಾತ್ರ ವಿಟ್ಲದ ಜನತೆಗೆ ನ್ಯಾಯ ಸಿಗಲು ಸಾಧ್ಯ ಎಂದು ತಿಳಿಸಿದರು.

ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.